ಮರ್ಯಾದಾ ಹತ್ಯೆ: ಬೆಳಗಿನ ಜಾವ ಪ್ರಿಯಕರನ ಭೇಟಿಯಾಗಲು ಹೋದ ಮಗಳು, ಇಬ್ಬರನ್ನೂ ಹತ್ಯೆ ಮಾಡಿದ ತಂದೆ

ಮಧ್ಯರಾತ್ರಿ ಪ್ರಿಯಕರನನ್ನು ಭೇಟಿಯಾಗಲು ಹೋಗಿದ್ದ ಮಗಳ ಸಮೇತ ಆಕೆಯ ಪ್ರೇಮಿಯನ್ನು ಕೂಡ ತಂದೆಯೊಬ್ಬ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್​ನಲ್ಲಿ ನಡೆದಿದೆ. ಸಿಟ್ಟಿನಿಂದ ಇಬ್ಬರನ್ನೂ ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಬಳಿಕ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮರ್ಯಾದಾ ಹತ್ಯೆ:  ಬೆಳಗಿನ ಜಾವ ಪ್ರಿಯಕರನ ಭೇಟಿಯಾಗಲು ಹೋದ ಮಗಳು, ಇಬ್ಬರನ್ನೂ ಹತ್ಯೆ ಮಾಡಿದ ತಂದೆ
ಹತ್ಯೆImage Credit source: Naidunia
Follow us
ನಯನಾ ರಾಜೀವ್
|

Updated on: Jan 03, 2024 | 11:54 AM

ಮಧ್ಯರಾತ್ರಿ ಪ್ರಿಯಕರನನ್ನು ಭೇಟಿಯಾಗಲು ಹೋಗಿದ್ದ ಮಗಳ ಸಮೇತ ಆಕೆಯ ಪ್ರೇಮಿಯನ್ನು ಕೂಡ ತಂದೆಯೊಬ್ಬ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್​ನಲ್ಲಿ ನಡೆದಿದೆ. ಸಿಟ್ಟಿನಿಂದ ಇಬ್ಬರನ್ನೂ ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಬಳಿಕ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಜೋಡಿ ಕೊಲೆ ನಡೆದ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಕಲ್ಪಿಸಿದ್ದರು. ಸದ್ಯ ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಘಟನೆ ಬಿಲ್ಸಿ ಪೊಲೀಸ್​ ಠಾಣೆ ವ್ಯಾಪ್ತಿಯ ಪರೌಲಿ ಗ್ರಾಮದಲ್ಲಿ ನಡೆದಿದ್ದಾಗಿದೆ. ಇಲ್ಲಿ ವಾಸವಿರುವ 20 ವರ್ಷದ ಯುವತಿ ತನ್ನ ಜಾತಿಯವನೇ ಆದ ಯುವಕನನ್ನು ಪ್ರೀತಿಸುತ್ತಿದ್ದಳು.

ಮತ್ತಷ್ಟು ಓದಿ: ಉಮೇಶ್ ಪಾಲ್ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್ ಗುಡ್ಡು ಮುಸ್ಲಿಂ ಮನೆ ಜಪ್ತಿ ಮಾಡಿದ ಪೊಲೀಸರು

ತಡರಾತ್ರಿ ಇಬ್ಬರೂ ಭೇಟಿಯಾಗಲು ಮುಂದಾಗಿದ್ದರು, ಆಕೆ ಯುವಕನ ಮನೆಗೆ ಹೋಗಿದ್ದಳು. ಅಷ್ಟರಲ್ಲಿ ಯುವತಿ ತಂದೆಗೆ ವಿಷಯ ತಿಳಿದುಬಂದಿತ್ತು. ಹುಡುಗಿಯ ತಂದೆ ಅಲ್ಲೇ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ, ಬಳಿಕ ಕುಟುಂಬದವರ ಜತೆ ಸೇರಿ ಹರಿತವಾದ ಆಯುಧದಿಂದ ಇರಿದು ಹತ್ಯೆ ಮಾಡಿದ್ದಾರೆ.

ಯುವತಿ ತಂದೆ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ, ಯುವಕನ ಕುಟುಂಬದವರು ದೂರು ದಾಖಲಿಸಿದ್ದಾರೆ. ಪೋಷಕರು ಹಾಗೂ ಕುಟುಂಬದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.

ಮಗಳು ಪಕ್ಕದ ಮನೆಯವನೊಂದಿಗೆ ಓಡಿಹೋಗಲು ನಿರ್ಧರಿಸಿದ್ದಳು, ನಾನು ಅವಳ ಮೇಲೆ ಕಣ್ಣಿಟ್ಟಿದ್ದೆ. ಹಾಗೆಯೇ ಮಂಗಳವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆತನನ್ನು ಭೇಟಿಯಾದಾಗ ಗುದ್ದಲಿಯಿಂದ ಹೊಡೆದು ಹತ್ಯೆ ಮಾಡಿರುವುದಾಗಿ ತಂದೆ ಒಪ್ಪಿಕೊಂಡಿದ್ದಾರೆ. ಪ್ರಿಯಕರ ಸಚಿನ್ ಹಿಮಾಚಲ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದು, ಡಿಸೆಂಬರ್ 31ರಂದು ಮನೆಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ