AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhopal: ಮರ್ಯಾದಾ ಹತ್ಯೆ: ಪ್ರೇಮಿಗಳ ಹತ್ಯೆ ಮಾಡಿ, ದೇಹಕ್ಕೆ ಕಲ್ಲುಕಟ್ಟಿ ಮೊಸಳೆಗಳಿರುವ ನದಿಗೆ ಎಸೆದಿದ್ದ ಪೋಷಕರು

ಮಗಳು ಪ್ರೀತಿ ಮಾಡುವುದು ಇಷ್ಟವಿಲ್ಲದೆ ಆಕೆಯ ಕುಟುಂಬಸ್ಥರು ಪ್ರೇಮಿಗಳಿಬ್ಬರನ್ನೂ ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ

Bhopal: ಮರ್ಯಾದಾ ಹತ್ಯೆ: ಪ್ರೇಮಿಗಳ ಹತ್ಯೆ ಮಾಡಿ, ದೇಹಕ್ಕೆ ಕಲ್ಲುಕಟ್ಟಿ ಮೊಸಳೆಗಳಿರುವ ನದಿಗೆ ಎಸೆದಿದ್ದ ಪೋಷಕರು
ಶಿವಾನಿ-ರಾಧೆಶ್ಯಾಂImage Credit source: NDTV
ನಯನಾ ರಾಜೀವ್
|

Updated on: Jun 19, 2023 | 10:23 AM

Share

ಮಗಳು ಪ್ರೀತಿ(Love)ಮಾಡುವುದು ಇಷ್ಟವಿಲ್ಲದೆ ಆಕೆಯ ಕುಟುಂಬಸ್ಥರು ಪ್ರೇಮಿಗಳಿಬ್ಬರನ್ನೂ ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತನ್​ಬಸಾಯ್​ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಶಿವಾನಿ ತೋಮರ್ ರಾಧೆಶ್ಯಾಮ್ ತೋಮರ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆತ ಪಕ್ಕದ ಪೊರೆನಾ ಜಿಲ್ಲೆಯ ಬಾಲುಪುರದವನು. ಈ ಯುವಕನನ್ನು ಪ್ರೀತಿಸುವ ಕುರಿತು ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

ಬಳಿಕ ಇಬ್ಬರೂ ಕಾಣೆಯಾಗಿದ್ದರು, ಹುಡುಗನ ತಂದೆ ಪ್ರಕರಣ ದಾಖಲಿಸಿದ್ದರು, ಕಳೆದ ಕೆಲವು ದಿನಗಳಿಂದ ಇಬ್ಬರೂ ಕಾಣೆಯಾಗಿದ್ದಾರೆ ಅವರನ್ನು ಹತ್ಯೆ ಮಾಡಿರಬಹುದು ಎನ್ನುವ ಸಂದೇಹವಿದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಮತ್ತಷ್ಟು ಓದಿ: Bihar Crime: ಬಿಹಾರದಲ್ಲೊಂದು ಮರ್ಯಾದಾ ಹತ್ಯೆ: ಪ್ರೀತಿ ವಿಷಯ ತಿಳಿದು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ

ಮೊದ ಮೊದಲು ಪೊಲೀಸರು ಅವರಿಬ್ಬರು ಓಡಿ ಹೋಗಿರಬಹುದು ಎಂದುಕೊಂಡಿದ್ದರು. ಆದರೆ ಅವರಿಬ್ಬರು ಹೋಗಿರುವುದಾಗಲಿ, ಇಬ್ಬರು ಎಲ್ಲಿದ್ದಾರೆ ಎಂಬುದಾಗಲಿ ಊರಿನ ಒಬ್ಬರಿಗೂ ತಿಳಿದಿರಲಿಲ್ಲ. ಬಳಿಕ ಯುವತಿಯ ತಂದೆಯನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ, ಬಳಿಕ ಯುವತಿ ತಂದೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಜೂನ್ 3ರಂದು ಶಿವಾನಿ ಹಾಗೂ ರಾಧೆಶ್ಯಾಮ್​ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು, ಬಳಿಕ ದೇಹಕ್ಕೆ ಕಲ್ಲು ಕಟ್ಟಿ, ಮೊಸಳೆಗಳಿರುವ ಚಂಬಲ್ ನದಿಯಲ್ಲಿ ಎಸೆಯಲಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​