AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತು ಸೀಳಿ ಸ್ನೇಹಿತನನ್ನೇ ಕೊಲೆ ಮಾಡಿ ಬಳಿಕ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

ಕ್ಷುಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಇನ್ನು ಗೆಳೆಯನನ್ನು ಕೊಲೆ ಮಾಡಿದ ಬಳಿಕ ವ್ಯಕ್ತಿ ತಾನೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಈ ಕೊಲೆಯಿಂದಾಗಿ ಉಡುಪಿ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ.

ಕತ್ತು ಸೀಳಿ ಸ್ನೇಹಿತನನ್ನೇ ಕೊಲೆ ಮಾಡಿ ಬಳಿಕ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Oct 22, 2024 | 3:29 PM

Share

ಉಡುಪಿ, (ಅಕ್ಟೋಬರ್ 22): ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಭೀಕರವಾಗಿ ಕೊಲೆಗೈದಿರುವ ಘಟನೆ ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ. ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ಪೊಲೀಸರಿಗೆ ಕಳ್ಳರ ಸವಾಲ್

ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದೆ ಎಂದು ಕಂಡುಬಂದರೂ ಕೂಡ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯೇ ಎಂಬುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.

ಹತ್ತು ಅಡಿ ಜಾಗಕ್ಕಾಗಿ ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿ: ಹತ್ತು ಅಡಿ ಜಾಗಕ್ಕಾಗಿ ವ್ಯಕಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಜಾದಪುರದಲ್ಲಿ ನಡೆದಿದೆ. ಚಂದ್ರಕಾಂತ್ ಜಮಾದರ್ ಕೊಲೆಯಾದ ದುರ್ದೈವಿ. ಚಂದ್ರಕಾಂತ್ ಮನೆ ಹಿತ್ತಲಿನಲ್ಲಿ ಹತ್ತು ಅಡಿ ಜಾಗ ಇತ್ತು. ಪಕ್ಕದ ಮನೆ ನಿವಾಸಿ ಮೌನೇಶ್ ಗುತ್ತೆದಾರ್ ಚಂದ್ರಕಾಂತ್ ಜೊತೆ ಆ ಜಾಗ ತಮಗೆ ಸೇರಬೇಕು ಎನ್ನುತ್ತಿದ್ದ. ಚಂದ್ರಕಾಂತ್ ಆ ಜಾಗ ತಮಗೆ ಸೇರಬೇಕು ಎಂದು ಹೇಳಿದ್ದ. ಹೀಗೆ ಜಾಗದ ವಿಚಾರವಾಗಿ ಇಬ್ಬರ ಮಧ್ಯೆ ಕಿರಿಕ್ ಆಗಿ ಜಗಳ ವಿಕೋಪಕಕ್ಕೆ ಹೋಗಿದ್ದು, ಚಂದ್ರಕಾಂತ್‌ನನ್ನು ಮೌನೇಶ್ ಗುತ್ತೆದಾರ್ ಹಾಗೂ ಕುಟುಂಬದವರು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಕಲಬುರಗಿ ವಿ.ವಿ.ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ