ಹೊಸಕೋಟೆ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

|

Updated on: Mar 20, 2023 | 11:37 AM

ಕಾರು ನಿಲ್ಲಿಸುವ ವಿಚಾರಕ್ಕೆ ಜಗಳ ಶುರುವಾಗಿದ್ದು, ಬಳಿಕ ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ವ್ಯಕ್ತಿಯನ್ನ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ.

ಹೊಸಕೋಟೆ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Follow us on

ಬೆಂ.ಗ್ರಾಮಾಂತರ: ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಇಸ್ಮಾಯಿಲ್ ಖಾನ್(26) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಯ್ಯದ್ ಹಿದಾಯತ್ ಶಾ, ಸಯ್ಯದ್ ಅಜೀಂ ಶಾ, ಸಯ್ಯದ್ ಅಖಿಲ್ ಶಾ ಎಂಬುವರೆ ಕೊಲೆ ಮಾಡಿರುವ ಆರೋಪ. ಕಳೆದ ಹಲವು ದಿನಗಳಿಂದ ದಾಯಾದಿಗಳ ಮಧ್ಯೆ ಆಸ್ತಿ ವಿಚಾರಕ್ಕೆ ಕಲಹ ನಡೆಯುತ್ತಿದ್ದು, ಈ ನಡುವೆ ಮನೆ ಮುಂದೆ ಕಳೆದ ರಾತ್ರಿ ಕಾರು ನಿಲ್ಲಿಸುವ ವಿಚಾರಕ್ಕೆ ಕಿರಿಕ್​ ಆಗಿದೆ. ಬಳಿಕ ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಡ್ರಾಗರ್ ನಿಂದ ಎದೆ ಮತ್ತು ಮೂತ್ರಪಿಂಡ ಜಾಗಕ್ಕೆ ಇರಿದು ಹಲ್ಲೆ ಮಾಡಲಾಗಿದ್ದು, ಸ್ಥಳದಲ್ಲೇ ಇಸ್ಮಾಯಿಲ್ ಖಾನ್ ಸಾವನ್ನಪ್ಪಿದ್ದಾನೆ. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು ಕೊಲೆ ನಂತರ ಆರೋಪಿಗಳು ಎಸ್ಕೇಪ್ ಆಗಿದ್ದು. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ನದಿಗೆ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ಮೈಸೂರು: ನದಿಗೆ ಈಜಲು ಹೋಗಿದ್ದ ಬಾಲಕ ದೀಕ್ಷಿತ್​​(16) ಎಂಬಾತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ನಡೆದಿದೆ.ವೈಕುಂಠ ನಾರಾಯಣಸ್ವಾಮಿ ಬ್ರಹ್ಮ ರಥೋತ್ಸವ ಹಿನ್ನೆಲೆ ಗೆಳೆಯರೊಂದಿಗೆ ಮಾಧವ ಮಂತ್ರಿ ಅಣೆಕಟ್ಟೆ ಬಳಿ ತೆರಳಿದ್ದ ಬಾಲಕ, ಈ ವೇಳೆ ಈಜು ಬಾರದೆ ಮೃತಪಟ್ಟಿದ್ದಾನೆ. ಮೃತ ದೀಕ್ಷಿತ್ ತಲಕಾಡಿನ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದನು. ಈ ಕುರಿತು ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಿತ್ರದುರ್ಗ: ಕೆರೆಯಲ್ಲಿ ಯುವಕನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್​; ಗೆಳೆಯರೇ ಸೇರಿ ಕೊಲೆ ಮಾಡಿದ್ದಾರೆಂದು ಆರೋಪ

ಮೈಸೂರಿನಲ್ಲಿ ರೌಡಿ ಶೀಟರ್​ನ ಬರ್ಬರ ಕೊಲೆ

ಮೈಸೂರು: ಚಾಮರಾಜ ಜೋಡಿ ರಸ್ತೆಯಲ್ಲಿ ರೌಡಿ ಶೀಟರ್ ಶ್ರೀಗಂಧ ಎಂಬಾತನನ್ನ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕುಡಿದು ಮತ್ತಿನಲ್ಲಿ ರೌಡಿ ಶೀಟರ್ ರವಿ ಹಾಗೂ ಶ್ರೀಗಂಧ ನಡುವೆ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೇರಿ ಮೈಸೂರಿನ ನಾಲಾ ಬೀದಿ ರವಿ ಎಂಬಾತನಿಂದ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಕುರಿತು ಕೆ.ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್​ ಡಿಕ್ಕಿಯಾಗಿ ಪಾದಾಚಾರಿ ಸಾವು

ಕಾರವಾರ: ನಗರದ ಭದ್ರಾ ಹೋಟೆಲ್​ ಬಳಿ ಬಸ್​ ಡಿಕ್ಕಿಯಾಗಿ ಪಾದಚಾರಿ ಉಲ್ಲಾಸ್ ಮನೋಹರ್ ನಾಯ್ಕ ಎಂಬಾತ ಸಾವನ್ನಪ್ಪಿದ್ದಾರೆ. ಮೃತ ಉಲ್ಲಾಸ್ ಮನೋಹರ್ ನಾಯ್ಕ ನಗರದ ಕೋಡಿಭಾಗ್ ನಿವಾಸಿಯಾಗಿದ್ದು, ಅಂಬಾ ಭವಾನಿ ದೇವಸ್ಥಾನದ ಜಾತ್ರೆ ಮುಗಿಸಿ ಮನೆಗೆ ತೆರಳುತಿದ್ದ ವೇಳೆ ಗೋವಾದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಈ ಕುರಿತು ಕಾರವಾರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Mon, 20 March 23