AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ: ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ‌ 75ರಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ.

ಹೊಸಕೋಟೆ: ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ: ಇಬ್ಬರು ಸ್ಥಳದಲ್ಲೇ ದುರ್ಮರಣ
ಪ್ರಾತಿನಿಧಿಕ ಚಿತ್ರImage Credit source: indianexpress.com
ಗಂಗಾಧರ​ ಬ. ಸಾಬೋಜಿ
|

Updated on:Mar 09, 2023 | 8:42 PM

Share

ಬೆಂಗಳೂರು ಗ್ರಾಮಾಂತರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿ (accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ‌ 75ರಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಡಿಕ್ಕಿ ಹೊಡೆದ ನಂತರ ಒಂದಷ್ಟು ದೂರ ಕಾರನ್ನು ಲಾರಿ ಎಳೆದೊಯ್ದಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ‌ಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವು: ಪೋಷಕರ ಆಕ್ರೋಶ

ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಕಂಬಳಿಪುರ ನಿವಾಸಿ ವೇಣುಗೋಪಾಲ್ ಎಂಬುವವರ 6 ತಿಂಗಳ ಮೃತಪಟ್ಟ ಮಗು. ಓವರ್​​ ಡೋಸ್​ ಕೊಟ್ಟಿದ್ದರಿಂದಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿದ್ದಾರೆ. ಕಳೆದ 15 ದಿನಗಳಿಂದ ಹೊಟ್ಟೆ ನೋವಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಓವರ್ ಡೋಸ್ ನೀಡಿದ್ದರಿಂದ ಮಗು ಮೃತಪಟ್ಟಿದೆ. ಆಸ್ಪತ್ರೆಯ ಎಲ್ಲಾ ಮೆಡಿಕಲ್​ಗಳನ್ನು ಬಂದ್ ಮಾಡಿಸಿ ಪೋಷಕರಿಂದ ಗಲಾಟೆ ಮಾಡಲಾಗಿದೆ.

ಇದನ್ನೂ ಓದಿ: ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ: 65 ಲಕ್ಷ ಮೌಲ್ಯದ ಚಿನ್ನ ಸಮೇತ ಓರ್ವ ವ್ಯಕ್ತಿ ವಶಕ್ಕೆ

ಫ್ಯಾನ್​ಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ದಾವಣಗೆರೆ: ಫ್ಯಾನ್​ಗೆ ನೇಣು ಬಿಗಿದುಕೊಂಡು ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ನಗರದ ಹಾಸ್ಟೆಲ್​ನಲ್ಲಿ ನಡೆದಿದೆ. ವರ್ಷಿತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ಮೂಲತ ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಬಸ್ಸಾಪುರ ಗ್ರಾಮದವರಾದ ವರ್ಷಿತಾ ಹರಿಹರ ನಗರದ ಕಾಲೇಜುವೊಂದರಲ್ಲಿ ಓದುತ್ತಿದ್ದಳು. ಇನ್ನು ವರ್ಷಿತಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು, ಮಗಳ ಸಾವಿಗೆ ಹಾಸ್ಟೆಲ್​​​ ವಾರ್ಡನ್​​, ಸಿಬ್ಬಂದಿಯೇ ಕಾರಣ ಎಂದು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಇನ್ನು ಮಗಳ ಸಾವಿಗೆ ನ್ಯಾಯ ಒದಗಿಸುವಂತೆ ಆಕೆಯ ಪೋಷಕರು ಒತ್ತಾಯಿಸುತ್ತಿದ್ದಾರೆ. ನನ್ನ ಮಗಳು ಅತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷಿ ವಿಧಿಸಿ ನ್ಯಾಯ ಕೊಡಿಸುವಂತೆ ಮೃತಳ ಪೋಷಕರು ತಮ್ಮ ಅಳಲು ತೊಡಿಕೊಂಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರಿಂದಲೇ ಅತ್ಯಾಚಾರ​​: ಪ್ರಕರಣ ದಾಖಲು

ತೋಟದ ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ತಾಲೂಕಿನ ಬಿಳಲಖಂಡ ಸಮೀಪದ ಗುಳ್ಮೆ ಗ್ರಾಮದ ಬಳಿ ತೋಟದ ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿನ್ನೆ(ಮಾ.7) ರಾತ್ರಿ ಮನೆ ಪಕ್ಕದಲ್ಲಿರುವ ತೋಟದ ಬಾವಿಗೆ ಬಿದ್ದು ಪ್ರತಿಭಾ ಮಂಗಳಾ ಗೊಂಡ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಮೃತ ಯುವತಿ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಪ್ರಥಮ ವರ್ಷದ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ವಾರದ ಹಿಂದೆ ಮನೆಗೆ ಬಂದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಘಟನೆ ಕುರಿತು ‘ಯುವತಿಗೆ ತನ್ನದೆ ಕ್ಲಾಸಿನ ಯುವಕನೊಬ್ಬನ ಪರಿಚಯವಿತ್ತು, ನನ್ನ ಮಗಳ ಸಾವಿಗೆ ಆ ಯುವಕನೇ ಕಾರಣ ಎಂದು ಯುವತಿ ತಂದೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.

ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಪ್ರತ್ಯೇಕ ಎರಡು ಶವಗಳು ಪತ್ತೆ

ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣದ ಸಮೀಪ ಕಾಲುವೆಯಲ್ಲಿ ಪ್ರತ್ಯೇಕ ಎರಡು ಶವಗಳು ಪತ್ತೆಯಾಗಿವೆ. ಯಲ್ಲಪ್ಪ ಗುಡದಪ್ಪಗೋಳ(30), ರಾಜಾಸಾಬ್ ಕಲಾಲ್(35) ಎಂಬುವವರೇ ಮೃತ ರ್ದುದೈವಿಗಳು, ಕುಡಿದ ಮತ್ತಿನಲ್ಲಿ ಮೂರು ದಿನಗಳ ಹಿಂದೆ ಯಲ್ಲಪ್ಪ ಎಂಬುವವರು ಕಾಲುವೆಗೆ ಬಿದ್ದಿದ್ದರು. ಇದಾದ ಬಳಿಕ ನಿನ್ನೆ(ಮಾ.7) ಬಟ್ಟೆ ತೊಳೆಯಲು ಹೋಗಿ ರಾಜಾಸಾಬ್ ಕಾಲುವೆಯಲ್ಲಿ ಬಿದ್ದು ಮೃತಪಟ್ಟಿದ್ದರು. ಇದೀಗ ಸ್ವಲ್ಪ ದೂರದಲ್ಲಯೇ ಇಬ್ಬರು ಶವಗಳು ಪತ್ತೆಯಾಗಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:29 pm, Thu, 9 March 23

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ