ಹೊಸಕೋಟೆ: SPG ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣ, ಎಫ್​ಐಆರ್ ದಾಖಲು

ಬೆಂಗಳೂರಿನ ಬೆಯ್ಯಪ್ಪನಹಳ್ಳಿ ಪೊಲೀಸರು ಭ್ರೂಣಹತ್ಯೆ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದರು. ಭ್ರೂಣ ಪತ್ತೆ ಹಾಗೂ ಹತ್ಯೆಗಳು ಮಂಡ್ಯದಲ್ಲಿ ನಡೆಯುತ್ತಿತ್ತು. ಇದೀಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಎಫ್​ಐಆರ್ ದಾಖಲಾಗಿದೆ.

ಹೊಸಕೋಟೆ: SPG ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣ, ಎಫ್​ಐಆರ್ ದಾಖಲು
ಭ್ರೂಣ ಹತ್ಯೆ ಪ್ರಕರಣ ಸಂಬಂಧ ನಾಪತ್ತೆಯಾದ ಎಸ್​ಪಿಜಿ ಆಸ್ಪತ್ರೆಯ ವೈದ್ಯ ಡಾ. ಶ್ರೀನಿವಾಸ್
Edited By: Rakesh Nayak Manchi

Updated on: Dec 14, 2023 | 2:47 PM

ಹೊಸಕೋಟೆ, ಡಿ.14: ಮಂಡ್ಯದಲ್ಲಿ ನಡೆಯುತ್ತಿದ್ದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ (Feticide) ಪ್ರಕರಣವನ್ನು ಬೆಂಗಳೂರು ನಗರದ ಬೆಯ್ಯಪ್ಪನಹಳ್ಳಿ ಪೊಲೀಸರು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಳ್ಳುತ್ತಿದ್ದಾರೆ. ಇದೀಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (Hoskote) ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಎಫ್​ಐಆರ್ ದಾಖಲಾಗಿದೆ.

ಭ್ರೂಣ ಹತ್ಯೆ ಪ್ರಕರಣ ಸಂಬಂಧ ತಿರುಮಲಶೆಟ್ಟಿಹಳ್ಳಿ ಎಸ್​​ಪಿಜಿ ಆಸ್ಪತ್ರೆಯ ವೈದ್ಯ ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು (ಎ1), ಎ2 ನರ್ಸ್​ ಅನಿತಾ, ಎ3 ನರ್ಸ್​​ ನೇತ್ರಾ, ಎ4 ರೇವತಿ, ಎ5 ರಾಧಿಕಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಪರಿಶೀಲನೆಗೆ ಹೋದಾಗಲೇ ಹೊಸಕೋಟೆಯಲ್ಲಿ ಭ್ರೂಣ ಹತ್ಯೆ ಪತ್ತೆ: ಎಸ್​​ಪಿಜಿ ಆಸ್ಪತ್ರೆ ಸೀಜ್, ರೋಗಿಗಳು ಶಿಫ್ಟ್

ಮೆಡಿಕಲ್​ ಆ್ಯಕ್ಟ್​ 1994, ಯುಎಸ್​​ 23/1, 2, 3, ಮೆಡಿಕಲ್ ಟರ್ಮಿನೇಷನ್ ಆಪ್ ಪ್ರೆಗ್ನೆಸಿ ಆ್ಯಕ್ಟ್ 1971 ಅಡಿ US 3, 4, IPC ಸೆಕ್ಷನ್​ 1860ರ ಅಡಿ, 312, 314, 315, 316ರ ಅಡಿ ಕೇಸ್​​ ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡ ವೈದ್ಯ ಮತ್ತು ನರ್ಸ್​ ಬಂಧನಕ್ಕೆ ಎರಡು ವಿಶೇಷ ತಂಡ ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.

1500 ಕ್ಕೂ ಅಧಿಕ ಗರ್ಭಿಣಿಯರ ಸ್ಕ್ಯಾನಿಂಗ್

ಎಸ್​ಪಿಜಿ ಆಸ್ವತ್ರೆಯಲ್ಲಿ ನಡೆಯುತ್ತಿದ್ದ ಭ್ರೂಣಹತ್ಯೆ ಪ್ರಕರಣ ಸಂಬಂಧ ಆಸ್ಪತ್ರೆಯ ದಾಖಲೆಗಳು ಸಾಕಷ್ಟು ಅನುಮಾನ ಮೂಡಿಸುತ್ತಿದೆ. ಸ್ಕ್ಯಾನಿಂಗ್​ನಲ್ಲಿ ದೊಡ್ಡ ದಂಧೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಒಂದು ವರ್ಷದಲ್ಲಿ 1500 ಕ್ಕೂ ಅಧಿಕ ಗರ್ಭಿಣಿಯರು ಸ್ಕ್ಯಾನಿಂಗ್ ಮಾಡಿಸಿದ್ದು, ಈ ಪೈಕಿ 400 ಕ್ಕೂ ಅಧಿಕ ಮಹಿಳೆಯರ ಹೆರಿಗೆ ಮಾಹಿತಿ ‌ಅಲಭ್ಯವಾಗಿದೆ.

400 ಕ್ಕೂ ಅಧಿಕ ಮಹಿಳೆಯರು ಎಲ್ಲಿ ಹೆರಿಗೆ ಮಾಡಿಸಿಕೊಂಡಿದ್ದಾರೆ ಅಂತ ಮಾಹಿತಿ ಸಿಗುತ್ತಿಲ್ಲ. ನಾಪತ್ತೆಯಾದ 400 ಕ್ಕೂ‌ ಅಧಿಕ ಮಹಿಳೆಯರ ಮಾಹಿತಿಗಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೇರೆಡೆ ಹೆರಿಗೆ ಮಾಡಿಸಿಕೊಂಡಿದ್ದಾರಾ ಅಥವಾ ಗರ್ಭಪಾತ ಮಾಡಿದ್ದಾರಾ ಎಂಬ ವಿಚಾರವಾಗಿ ತಮಿಖೆ ನಡೆಸುತ್ತಿದ್ದಾರೆ.

ಈಗಾಗಲೆ ಸ್ಕ್ಯಾನಿಂಗ್ ಮಾಡಿಸಿರುವ ಮಹಿಳೆಯರ ದಾಖಲೆ ಪಡೆದುಕೊಂಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ನಾಪತ್ತೆಯಾಗಿರುವ ವೈದ್ಯ ಶ್ರೀನಿವಾಸ್ ಬಂಧನದ ನಂತರ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us