ಬೆಂಗಳೂರು: ತವರಿಗೆ ಕರೆದುಕೊಂಡು ಹೋಗಿಲ್ಲವೆಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೇಪಾಳ ಮೂಲದ ಭಾಗೀರಥಿ(28) ನೇಣಿಗೆ ಶರಣಾದ ಗೃಹಿಣಿ.
ಭಾಗೀರಥಿ ಗಂಡ ತನನ್ನು ತವರಿಗೆ ಕರೆದುಕೊಂಡು ಹೋಗಿಲ್ಲವೆಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಸೋನು ಸಿಂಗ್ ಎಂಬಾತನೊಂದಿಗೆ ಭಾಗೀರಥಿಗೆ ವಿವಾಹವಾಗಿತ್ತು.
ಮೈಕೋ ಲೇಔಟ್ ಠಾಣಾ ವ್ಯಾಪ್ತಿಯ ಬಿಳೇಕಹಳ್ಳಿ ಬಳಿ ಪತಿಯೊಂದಿಗೆ ವಾಸವಾಗಿದ್ದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 12:24 pm, Wed, 17 June 20