Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಬಾಲಕಿಗೆ ಲೈಂಗಿಕ ದೌರ್ಜನ್ಯ, ಪೊಲೀಸರ ಮೇಲೆಯೇ ತಿರುಗಿಬಿದ್ದ ಆರೋಪಿಗೆ ಗುಂಡೇಟು

ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ಬಂಧಿಸಿದ್ದರು. ಆರೋಪಿ ಸದ್ದಾಂ ಹುಸೇನ್​ನನ್ನು ಬಂಧಿಸಿ ಠಾಣೆಗೆ ಕರೆತರುವಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಹುಬ್ಬಳ್ಳಿ: ಬಾಲಕಿಗೆ ಲೈಂಗಿಕ ದೌರ್ಜನ್ಯ, ಪೊಲೀಸರ ಮೇಲೆಯೇ ತಿರುಗಿಬಿದ್ದ ಆರೋಪಿಗೆ ಗುಂಡೇಟು
ಆರೋಪಿ ಸದ್ದಾಂ ಹುಸೇನ್​
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on:May 04, 2024 | 12:44 PM

ಧಾರವಾಡ, ಮೇ 04: ಹುಬ್ಬಳ್ಳಿಯ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸದ್ದಾಂ ಹುಸೇನ್​ ಪೊಲೀಸರ (Police) ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದನು. ಈ ವೇಳೆ ಪೊಲೀಸರು ಆರೋಪಿ ಸದ್ದಾಂ ಹುಸೇನ್​ ಎಡಗಾಲಿಗೆ ಗುಂಡು ಹಾರಿಸಿ (Firing) ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್​ ಹಲ್ಲೆ ಮಾಡಿದ್ದರಿಂದ ವಿದ್ಯಾಗಿರಿ ಪೊಲೀಸ್​ ಠಾಣೆಯ ಇನ್ಸ್​​​ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್‌ಟೇಬಲ್ ಅರುಣ್​ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್​ನನ್ನು ಧಾರವಾಡ (Dharwad) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನವನಗರ ಪೊಲೀಸ್​ ಠಾಣೆಯಲ್ಲಿ ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ, ಆರೋಪಿ ಸದ್ದಾಂ ಹುಸೇನ್​ ಪರಾರಿಯಾಗಿದ್ದನು. ಪೊಲೀಸರು ಕಾರ್ಯಾಚರಣೆ ಆರೋಪಿಯನ್ನು ಧಾರವಾಡದ ವಿದ್ಯಾಗಿರಿ ಪೊಲೀಸ್​ ಠಾಣೆ ವ್ಯಪ್ತಿಯಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಆರೋಪಿ ಸದ್ದಾಂ ಹುಸೇನ್​ ಪೊಲೀಸ್​ ವಾಹನ ಹತ್ತುವಾಗ ಅಧಿಕಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೆ ವಿದ್ಯಾಗಿರಿ ಪೊಲೀಸ್​ ಠಾಣೆಯ ಇನ್ಸ್​​​ಪೆಕ್ಟರ್ ಸಂಗಮೇಶ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: ಮದುವೆಯಾಗುವಂತೆ ವಿವಾಹಿತ ಮಹಿಳೆಗೆ ಟಾರ್ಚರ್, ಒಪ್ಪದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಹುಚ್ಚು ಪ್ರೇಮಿ

ಗರ್ಭಿಣಿಯಾದ ಬಾಲಕಿ

ಆರೋಪಿ ಸದ್ದಾಂ ಹುಸೇನ್ ಲಿಂಬುವಾಲೆ ಹುಬ್ಬಳ್ಳಿಯ ಈಶ್ವರನಗರದವನು ಎಂದು ಗುರುತಿಸಲಾಗಿದೆ. ಅಪ್ರಾಪ್ತ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಕಳೆದ ಮೂರ್ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದ್ದರು. ಆದರೂ ವಾಂತಿ ಕಡಿಮೆಯಾಗದಿ ದ್ದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿ ವಿಚಾರಿಸಿದಾಗ ಸದ್ದಾಂ ಹುಸೇನ್ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ದೂರು ದಾಖಲಿಸಿದ್ದಾರೆ.

ಆರೋಪಿ ಸದ್ದಾಂ ಹುಸೇನ್​ ವಿರುದ್ಧ ಐಪಿಸಿ 376, 506, ಜಾತಿ ನಿಂದನೆ ಮತ್ತು ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಶುಕ್ರವಾರ ಸಂಜೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದವು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Sat, 4 May 24

ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್