AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಕೂಡಿ ಆಡಿದ ಗೆಳೆಯನನ್ನೇ ಚಾಕುವಿನಿಂದ ಇರಿದು ಹತ್ಯೆ

ಹುಬ್ಬಳ್ಳಿಯ (Hubballi) ನಾಗಶೆಟ್ಟಿಕೊಪ್ಪದಲ್ಲಿ ಸ್ನೇಹಿತರೆಲ್ಲರೂ ಸೇರಿ ಕೂಡಿ ಆಡಿದ ಗೆಳೆಯನನ್ನೇ ಹತ್ಯೆ ಮಾಡಿದ ಘಟನೆ ನಡೆದಿದೆ. ಕುಚಿಕು ಗೆಳೆಯರಾದ ಕಿರಣ ಬಡಿಗೇರ ಹಾಗೂ ಸಂಗಮೇಶ ಇಬ್ಬರು ಸೇರಿ ಚಾಕುವಿನಿಂದ ಹೊಟ್ಟೆಗೆ ಇರಿದು, ಕಟ್ಟಿಗೆಯಿಂದ ಹೊಡೆದು ಬರ್ಬರ ಹತ್ಯೆ ಮಾಡಿದ್ದಾರೆ.ಈ ಕುರಿತು ಕೇಶ್ವಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿ ಕೂಡಿ ಆಡಿದ ಗೆಳೆಯನನ್ನೇ ಚಾಕುವಿನಿಂದ ಇರಿದು ಹತ್ಯೆ
ಮೃತ ಯುವಕ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 23, 2024 | 10:59 AM

ಹುಬ್ಬಳ್ಳಿ, ಮಾ.23: ಸ್ನೇಹಿತರೆಲ್ಲರೂ ಸೇರಿ ಕೂಡಿ ಆಡಿದ ಗೆಳೆಯನನ್ನೇ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ (Hubballi) ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ. ಪೈಲ್ವಾನ್​ ಆಗಿದ್ದ ಪ್ರಕಾಶ್ ಮಾನೆ ಮೃತ ರ್ದುದೈವಿ. ಕುಚಿಕು ಗೆಳೆಯರಾದ ಕಿರಣ್​ ಬಡಿಗೇರ ಹಾಗೂ ಸಂಗಮೇಶ ಇಬ್ಬರು ಸೇರಿ ಚಾಕುವಿನಿಂದ ಹೊಟ್ಟೆಗೆ ಇರಿದು, ಕಟ್ಟಿಗೆಯಿಂದ ಹೊಡೆದು ಬರ್ಬರ ಹತ್ಯೆ ಮಾಡಿದ್ದಾರೆ. ಇನ್ನು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಈ ಕುರಿತು ಕೇಶ್ವಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿಉರಿದ ಬಾಲಕರ ವಿದ್ಯಾರ್ಥಿ ನಿಲಯ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ‌ ವೈ.ಎನ್.ಹೊಸಕೋಟೆಯಲ್ಲಿರುವ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಮಧ್ಯರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಪ್ರಾಣಾಪಾಯದಿಂದ 15 ವಿದ್ಯಾರ್ಥಿಗಳು ಪಾರಾಗಿದ್ದಾರೆ. ಇನ್ನು ಬೆಂಕಿಗೆ ವಸತಿ ನಿಲಯದ ಕಿಟಕಿ, ಬಾಗಿಲು, 30ಕ್ಕೂ ಹೆಚ್ಚು ಬೆಡ್​ಗಳು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ವೈ.ಎನ್ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮೆಟ್ರೋ ಟ್ರ್ಯಾಕ್​ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ; ಯುಡಿಆರ್ ಪ್ರಕರಣ ದಾಖಲು

ಕಾಡಿನಿಂದ ನಾಡಿಗೆ ಬಂದ ಚಿರತೆ ಸೆರೆ

ಉತ್ತರ ಕನ್ನಡ: ಕಾಡಿನಿಂದ ನಾಡಿಗೆ ಬಂದ ಚಿರತೆಯನ್ನ ಸೆರೆ ಹಿಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಚಿತ್ರಗಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಕಾಡಿನಿಂದ ಚಿತ್ರರಗಿ ಸರ್ಕಾರಿ ಶಾಲೆಯ ಗುಡ್ಡದ ಬಳಿ ಒಂದೂವರೆ ವರ್ಷದ ಗಂಡು ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ  ಸೆರೆ ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ