Crime News: ಮಾನವ ಹಕ್ಕು, ಭ್ರಷ್ಟಾಚಾರ ಮುಕ್ತ ಸಂಘಟನೆಯ ಉಪಾಧ್ಯಕ್ಷರ ಬರ್ಬರ ಹತ್ಯೆ

Bengaluru Crime: ರಿಂಗ್ ರೋಡ್​ನ ಸರ್ವಿಸ್ ರಸ್ತೆಯಲ್ಲಿ ಅಟ್ಟಾಡಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಾರು ಬಿಟ್ಟು ಸರ್ವಿಸ್ ರಸ್ತೆಯಲ್ಲಿ ಓಡುವಾಗ ಶ್ರೀಧರ್ ಹತ್ಯೆಯಾಗಿದೆ. ಆರೋಪಿಗಳಿಗೆ ಹೆಣ್ಣೂರು ಪೊಲೀಸರು ಬಲೆ ಬೀಸಿದ್ದಾರೆ.

Crime News: ಮಾನವ ಹಕ್ಕು, ಭ್ರಷ್ಟಾಚಾರ ಮುಕ್ತ ಸಂಘಟನೆಯ ಉಪಾಧ್ಯಕ್ಷರ ಬರ್ಬರ ಹತ್ಯೆ
ಸಾಂಕೇತಿಕ ಚಿತ್ರ
Follow us
| Edited By: ganapathi bhat

Updated on:Nov 13, 2021 | 3:23 PM

ಬೆಂಗಳೂರು: ನಗರದಲ್ಲಿ ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣ ನಡೆದಿದೆ. ಬೆಂಗಳೂರಿನ ನಾಗವಾರ ರಸ್ತೆಯ ಬಳಿ ಶ್ರೀಧರ್ ಎಂಬವರ ಹತ್ಯೆಯಾಗಿದೆ. ಬಾಣಸವಾಡಿಯ ರಾಮಸ್ವಾಮಿಪಾಳ್ಯ ನಿವಾಸಿ ಶ್ರೀಧರ್ ಮಾನವ ಹಕ್ಕು ಮತ್ತು ಭ್ರಷ್ಟಾಚಾರ ಮುಕ್ತ ಸಂಘಟನೆ ಉಪಾಧ್ಯಕ್ಷ ಆಗಿದ್ದರು. ನಾಗವಾರ ಬಳಿ ಬಂದಿದ್ದ ವೇಳೆ ಗ್ಯಾಂಗ್ ಒಂದು ದಾಳಿ ಮಾಡಿದೆ. ರಿಂಗ್ ರೋಡ್​ನ ಸರ್ವಿಸ್ ರಸ್ತೆಯಲ್ಲಿ ಅಟ್ಟಾಡಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಾರು ಬಿಟ್ಟು ಸರ್ವಿಸ್ ರಸ್ತೆಯಲ್ಲಿ ಓಡುವಾಗ ಶ್ರೀಧರ್ ಹತ್ಯೆಯಾಗಿದೆ. ಆರೋಪಿಗಳಿಗೆ ಹೆಣ್ಣೂರು ಪೊಲೀಸರು ಬಲೆ ಬೀಸಿದ್ದಾರೆ.

ಪೂರ್ವ ವಿಭಾಗ ಡಿಸಿಪಿ ಡಾ. ಶರಣಪ್ಪ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಆರೋಪಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಗಾರ್ಮೆಂಟ್ಸ್ ವ್ಯವಹಾರ ಮಾಡಿಕೊಂಡಿದ್ದ ಮೃತ ಶ್ರೀಧರ್ ಮೇಲೆ ಹಲ್ಲೆ ನಡೆಸಲಾಗಿದೆ. ಭ್ರಷ್ಟಾಚಾರ ಮತ್ತು ಹ್ಯೂಮನ್ ರೈಟ್ಸ್ ಎಂಬ ಸಂಘ ಸಂಸ್ಥೆಯ ಉಪಾಧ್ಯಕ್ಷ ಆಗಿದ್ದ ಶ್ರೀಧರ್ ಮೇಲೆ ಹಲ್ಲೆ ನಡೆದಿದೆ. ಇಂದು ಹೆಣ್ಣೂರಿನಿಂದ ನಾಗವಾರ ಕಡೆಗೆ ತನ್ನ ಇನ್ನೋವಾ ಕ್ರಿಷ್ಟಾ ಕಾರಿನಲ್ಲಿ ಹೋಗ್ತಿದ್ದ ಶ್ರೀಧರ್ ಮೇಲೆ ಕಾರು ಅಡ್ಡಗಟ್ಟಿದ್ದ ಐವರು ಹಲ್ಲೆ ನಡೆಸಿದ್ದಾರೆ. ಕಾರನ್ನು ಅಲ್ಲಿಯೇ ಬಿಟ್ಟು ವಿರುದ್ಧ ರಸ್ತೆಗೆ ಓಡಿ ಬಂದಿದ್ದ ಶ್ರೀಧರ್ ಅವರನ್ನು ಹಿಂಬಾಲಿಸಿ ಹತ್ಯೆ ಮಾಡಲಾಗಿದೆ. ಹಂತಕರಿಗಾಗಿ ಈಗಾಗಲೆ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮದುವೆ ಆಗಿದ್ದರೂ ಫೇಸ್​ಬುಕ್ ಲವ್; ಯುವತಿ ರಂಪಾಟಕ್ಕೆ ನೊಂದು ಯುವಕ ಆತ್ಮಹತ್ಯೆ ಯುವಕನೋರ್ವ ಮದುವೆ ಆಗಿದ್ದರೂ ಬೇರೆ ಯುವತಿ ಜತೆ ಫೇಸ್​​ಬುಕ್​ ಪ್ರೀತಿಯಲ್ಲಿ ಬಿದ್ದಿದ್ದ. ಮದುವೆಯಾಗಿರುವ ವಿಚಾರ ತಿಳಿದು ಯುವತಿ ರಂಪಾಟ ಮಾಡಿದ ಹಿನ್ನೆಲೆಯಲ್ಲಿ ನೊಂದು ಚೇತನ್ (27) ಎಂಬ ಯುವಕ ನೇಣಿಗೆ ಶರಣಾಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಘಟನೆ ನಡೆದಿತ್ತು. 4 ವರ್ಷದ ಹಿಂದೆ ತುಮಕೂರಿನ ನವ್ಯಾ ಜತೆ ಚೇತನ್​ಗೆ ವಿವಾಹವಾಗಿತ್ತು. ನವ್ಯಾ, ಚೇತನ್ ದಂಪತಿಗೆ 3 ವರ್ಷದ ಹೆಣ್ಣುಮಗುವಿದೆ. 1 ವರ್ಷದ ಹಿಂದೆ ಕೌಟುಂಬಿಕ ಕಲಹದಿಂದ ಚೇತನ್ ಪತ್ನಿಯನ್ನು ತೊರೆದಿದ್ದ. ನಂತರ ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್​ ಮೊರೆಹೋಗಿದ್ದ. ಈ ನಡುವೆ ಫೇಸ್​​ಬುಕ್​​ನಲ್ಲಿ ಯುವತಿ ಜೊತೆಗೆ ಪ್ರೀತಿಗೆ ಬಿದ್ದಿದ್ದು, ಮದುವೆಯಾಗಿದ್ದ ವಿಚಾರ ತಿಳಿದು ಯುವತಿ ರಂಪಾಟ ನಡೆಸಿದ್ದಾಳೆ. ಇದರಿಂದ ನೊಂದು ಚೇತನ್ ಮನೆಯಲ್ಲಿ ನೇಣಿಗೆ ಶರಣಾಗಿದ್ದ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಇದನ್ನೂ ಓದಿ: Crime News: ಕೋರ್ಟ್​ನಲ್ಲೇ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಕೊಲೆ ಆರೋಪಿ!

ಇದನ್ನೂ ಓದಿ: Nisha Dahiya Murder: ಸೋನಿಪತ್​ನಲ್ಲಿ ಕುಸ್ತಿಪಟು ನಿಶಾ ದಹಿಯಾ ಕೊಲೆ ಪ್ರಕರಣ; ಕೋಚ್ ಪವನ್ ಸೇರಿ ಆರೋಪಿಗಳ ಬಂಧನ

Published On - 2:45 pm, Sat, 13 November 21

ತಾಜಾ ಸುದ್ದಿ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ