ಐತಿಹಾಸಿಕ ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಖದೀಮರು

|

Updated on: Oct 18, 2019 | 7:25 PM

ಬೆಳಗಾವಿ: ಐತಿಹಾಸಿಕ ದೇವಸ್ಥಾನ ಒಂದರಲ್ಲಿ ಕಳ್ಳರು ದೇವರ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿನ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನರಸಿಂಹ ದೇವಸ್ಥಾನದಲ್ಲಿ ಬೆಳಗಿನ ಜಾವ ಯಾರೂ ಇಲ್ಲದ್ದನ್ನು ನೋಡಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಹುಂಡಿ ಒಡೆದು ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ಈ ಘಟನೆಗೆ ಪುರಾತತ್ವ ಇಲಾಖೆ ನಿರ್ಲಕ್ಷ್ಯ ಮತ್ತು ಸರ್ಕಾರದ ಧೋರಣೆಯೇ ಕಾರಣವೆಂದು ಸ್ಥಳೀಯರು ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕದಂಬೋತ್ಸವ ಆಚರಣೆಗೆ ಆಗ್ರಹಿಸಿ, ಗ್ರಾಮಸ್ಥರು ಸರ್ಕಾರದ ವಿರುದ್ಧ […]

ಐತಿಹಾಸಿಕ ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಖದೀಮರು
Follow us on

ಬೆಳಗಾವಿ: ಐತಿಹಾಸಿಕ ದೇವಸ್ಥಾನ ಒಂದರಲ್ಲಿ ಕಳ್ಳರು ದೇವರ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿನ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ನರಸಿಂಹ ದೇವಸ್ಥಾನದಲ್ಲಿ ಬೆಳಗಿನ ಜಾವ ಯಾರೂ ಇಲ್ಲದ್ದನ್ನು ನೋಡಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಹುಂಡಿ ಒಡೆದು ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ಈ ಘಟನೆಗೆ ಪುರಾತತ್ವ ಇಲಾಖೆ ನಿರ್ಲಕ್ಷ್ಯ ಮತ್ತು ಸರ್ಕಾರದ ಧೋರಣೆಯೇ ಕಾರಣವೆಂದು ಸ್ಥಳೀಯರು ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕದಂಬೋತ್ಸವ ಆಚರಣೆಗೆ ಆಗ್ರಹಿಸಿ, ಗ್ರಾಮಸ್ಥರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಅಲ್ಲದೆ ಸ್ಥಳಕ್ಕೆ ತಹಶಿಲ್ದಾರ ಮತ್ತು ಪುರಾತತ್ವ ಇಲಾಖೆ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದಿದ್ದಾರೆ.

Published On - 7:13 pm, Fri, 18 October 19