AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಪತ್ನಿಯ ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ

ಚಾಕುವಿನಿಂದ ಪತ್ನಿಯ ಪ್ರಿಯಕರನ ಕತ್ತು ಸೀಳಿ ಪತಿ ರಕ್ತ ಕುಡಿದ ಭೀಬತ್ಸ ಕೃತ್ಯ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ.

Chikkaballapur: ಪತ್ನಿಯ  ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ
ಆರೋಪಿ ವಿಜಯ
Follow us
ವಿವೇಕ ಬಿರಾದಾರ
|

Updated on:Jun 25, 2023 | 12:21 PM

ಚಿಕ್ಕಬಳ್ಳಾಪುರ: ಚಾಕುವಿನಿಂದ ಪತ್ನಿಯ (Wife) ಪ್ರಿಯಕರನ (Lover) ಕತ್ತು ಸೀಳಿ ಪತಿ (Husband) ರಕ್ತ ಕುಡಿದ ಭೀಬತ್ಸ ಕೃತ್ಯ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ. ಬಟ್ಲಹಳ್ಳಿ ನಿವಾಸಿ ವಿಜಯ್  ಹಲ್ಲೆ ಮಾಡಿದ ಆರೋಪಿ. ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್​ ಹಲ್ಲೆಗೊಳಗಾದ ವ್ಯಕ್ತಿ. ವಿಜಯ್ ಪತ್ನಿ ಮಾಲಾ ಜೊತೆ ಮಾರೇಶ್​ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ವಿಜಯ್ ಮಾರೇಶ್​​​ನನ್ನು ​​ಸಿದ್ದೇಪಲ್ಲಿ ಕ್ರಾಸ್ ಬಳಿ ಕರೆಸಿಕೊಂಡು ಚಾಕುವಿನಿಂದ ಕತ್ತು ಸೀಳಿ ರಕ್ತ ಕುಡಿದಿದ್ದಾನೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಸದ್ಯ ಈ ಭೀಭತ್ಸ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರೋಪಿ ವಿಜಯ್​ನನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮಾರೇಶ್ ಚಿಕಿತ್ಸೆ ಪಡೆದು ಮನೆಗೆ ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.

ಇದನ್ನೂ ಓದಿ: ವಿಚ್ಛೇದನ ಪಡೆಯಲು ಪತ್ನಿಗೆ ಕುಮ್ಮಕ್ಕು ನೀಡುತ್ತಿದ್ದ ಕಾರಣಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ

ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿ ಶವ ಪತ್ತೆ

ರಾಯಚೂರು: ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಮಾನ್ವಿ ಪಟ್ಡಣದ ನಿವಾಸಿ ಸುಬ್ರಮಣ್ಯ (35) ಮೃತ ವ್ಯಕ್ತಿ. ಸುಬ್ರಹ್ಮಣ್ಯ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಪಾಳುಬಿದ್ದ ಬಾವಿಯಲ್ಲಿ ಶವವಾಗಿ‌ ಪತ್ತೆಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಾಯದೊಂದಿಗೆ ಮೃತದೇಹ ಮೇಲೆತ್ತಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮಾನ್ವಿ ತಾಲ್ಲೂಕು ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಮಾನ್ವಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 am, Sun, 25 June 23