ಮಂಗಳೂರು; ಪತ್ನಿಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಹಲ್ಲೆ ಮಾಡಿ ಎಸ್ಕೇಪ್ ಆದ ಪತಿ

ಕಂಠ ಪೂರ್ತಿ ಕುಡಿದು ತೇಲಾಡುತ್ತ ಮನೆಗೆ ಬಂದ ಸುರೇಶ್ ಗೌಡ, ಪತ್ನಿ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಮದ್ಯದ ಅಮಲಿನಲ್ಲಿ ಪತ್ನಿ ಜೊತೆ ಜಗಳವಾಡಿ ಆಕೆಯ ಕಣ್ಣು ಕಚ್ಚಿದ್ದು ನಂತರ ಮುಖದ ಎಡಭಾಗದ ಮಾಂಸ ಕಚ್ಚಿ ತೆಗೆದಿದ್ದಾನೆ. ಸದ್ಯ ತಾಯಿ-ಮಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಂಗಳೂರು; ಪತ್ನಿಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಹಲ್ಲೆ ಮಾಡಿ ಎಸ್ಕೇಪ್ ಆದ ಪತಿ
ಪತ್ನಿಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಹಲ್ಲೆ ಮಾಡಿದ ಪತಿ
Follow us
TV9 Web
| Updated By: ಆಯೇಷಾ ಬಾನು

Updated on: Dec 19, 2023 | 1:40 PM

ಮಂಗಳೂರು, ಡಿ.19: ಕಂಠಪೂರ್ತಿ ಕುಡಿದು ಮನೆಗೆ ಬಂದ ಪತಿ ತನ್ನ ಹೆಂಡತಿಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಗಾಯಗೊಳಿಸಿದ ವಿಕೃತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ನಡೆದಿದೆ (Husband Wife). ಮೋಹಿನಿ ಎಂಬ ಮಹಿಳೆಗೆ ಆತನ ಪತಿ ಸುರೇಶ್ ಗೌಡ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ (Assault). ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳು ಮಹಿಳೆ ಹಾಗೂ ಆಕೆಯ ಮಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿ ಸುರೇಶ್​ಗಾಗಿ ಪೊಲೀಸರು ಹುಡುಕಾಟ ನಡೆಯುತ್ತಿದ್ದಾರೆ.

ನಿನ್ನೆ (ಡಿ.18) ರಾತ್ರಿ 12ಗಂಟೆ ಸುಮಾರಿಗೆ ಕಂಠ ಪೂರ್ತಿ ಕುಡಿದು ತೇಲಾಡುತ್ತ ಮನೆಗೆ ಬಂದ ಸುರೇಶ್ ಗೌಡ, ಪತ್ನಿ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಮದ್ಯದ ಅಮಲಿನಲ್ಲಿ ಪತ್ನಿ ಜೊತೆ ಜಗಳವಾಡಿ ಆಕೆಯ ಕಣ್ಣು ಕಚ್ಚಿದ್ದು ನಂತರ ಮುಖದ ಎಡಭಾಗದ ಮಾಂಸ ಕಚ್ಚಿ ತೆಗೆದಿದ್ದಾನೆ. ಪತ್ನಿ ಕಣ್ಣು ಮತ್ತು ಮುಖದ ಎಡಭಾಗಕ್ಕೆ ಗಂಭೀರ ಗಾಯಗಳಾಗಿವೆ. ಮತ್ತೊಂದೆಡೆ ಮಗಳ ಮೇಲೂ ಹಲ್ಲೆ ನಡೆಸಿದ್ದು ಆಕೆಗೂ ಗಾಯಗಳಾಗಿವೆ. ಸದ್ಯ ತಾಯಿ-ಮಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿ ಸುರೇಶ್​ಗಾಗಿ ಪೊಲೀಸರು ಹುಡುಕಾಟ ನಡೆಯುತ್ತಿದ್ದಾರೆ.

ಸುರೇಶ್ ಗೌಡ(55) ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕೋಟೆಬಾಗಿಲಿನ ಮೋಹಿನಿ(55)ಯನ್ನು ಕಳೆದ 22 ವರ್ಷದ ಹಿಂದೆ ಮದುವೆಯಾಗಿದ್ದ. ಶಿಶಿಲದಲ್ಲಿ ಮೋಹಿನಿ ತಂದೆಯವರು ಕೊಟ್ಟ ಜಾಗದಲ್ಲಿ ದಂಪತಿ ವಾಸವಾಗಿದ್ದು ಸುರೇಶ್ ಕೂಲಿ ಕೆಲಸ ಮಾಡುತ್ತಿದ್ದ.

ಇದನ್ನೂ ಓದಿ: ಬೀದರ್: ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಆರೋಪ, ಖಾಸಗಿ ಶಾಲೆ ಶಿಕ್ಷಕ ಅರೆಸ್ಟ್

ಬಾಗಲಕೋಟೆ ರೈತ ಸಾವು ಪ್ರಕರಣಕ್ಕೆ ಟ್ವಿಸ್ಟ್

ಬಾಗಲಕೋಟೆಯ ಜಮಖಂಡಿ ಬಳಿ ಅಪಘಾತಕ್ಕೆ ರೈತ ಮೃತಪಟ್ಟಿದ್ದ. ಇದೀಗ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅಪಘಾತವಲ್ಲ ಅದು ಕೊಲೆ ಅನ್ನೋದು ಬಯಲಾಗಿದೆ. ಅಪಘಾತದಲ್ಲಿ ರೈತ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಿಚಾರಣೆ ವೇಳೆ ಅದು ಅಪಘಾತವಲ್ಲ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಅನ್ನೋ ಸ್ಫೋಟಕ ಸತ್ಯ ಬಯಲಾಗಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮ ಬಳಿ ಡಿಸೆಂಬರ್ 8 ರಂದು ಅಪಘಾತ ನಡೆದಿತ್ತು. ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಟಾಟಾ ಸಫಾರಿ ಕಾರು ಹರಿದು ರೈತ ಮಡ್ಡೆಸಾಬ್ ಗಲಗಲಿ ಸ್ಥಳದಲ್ಲೇ ಮೃತಪಟ್ಟಿದ್ದ. ಮೊದಲು ಹಿಟ್ & ರನ್ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರಿಗೆ ತನಿಖೆ ವೇಳೆ, ಆಸ್ತಿ ವಿಚಾರಕ್ಕೆ ಅಪಘಾತ ಮಾಡಿಸಿ ಕೊಲೆ ಮಾಡಿರುವ ಮಾಹಿತಿ ಬಯಲಾಗಿದೆ.

ಮುಧೋಳ ತಾಲೂಕಿನ ಶಿರೋಳ ಬಳಿಯ ಮೂರೂವರೆ ಎಕರೆ ಜಮೀನು ವಿಚಾರಕ್ಕೆ ಮಡ್ಡೆಸಾಬ್ ಗಲಗಲಿ ಹಾಗೂ ದೂರದ ಸಂಬಂಧಿ ಮನ್ಸೂರ್ ಅಲಿ ನಡುವೆ ವಿವಾದ ಇತ್ತಂತೆ. ಈ ದ್ವೇಷದ ಹಿನ್ನೆಲೆ ವಿಜಯಪುರದ ಜಲನಗರ ಠಾಣೆ ಕಾನ್ಸ್​​ಟೇಬಲ್ ಮನ್ಸೂರ್ ಅಲಿ ಕೊಲೆ ಮಾಡಿಸಿದ್ದಾನೆ. ಕೊಲೆ ಮಾಡಲು ಮನ್ಸೂರ್ ಸಹೋದರ ಮೆಹಬೂಬ್ ಕೂಡ ಸಾಥ್ ನೀಡಿದ್ದಾನೆ. ಸದ್ಯ ಇಬ್ಬರೂ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್