ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ವಾಸವಾಗಿದ್ದ ದಂಪತಿ ಪ್ರತಿದಿನ ಒಂದಿಲ್ಲ ಒಂದು ಕಾರಣಕ್ಕೆ ಜಗಳವಾಡುತ್ತಿದ್ದರು. ಸೋಮವಾರ ರಾತ್ರಿ ಯಾವುದೋ ವಿಚಾರಕ್ಕೆ ಜಗಳವಾಡಿದ್ದಾರೆ. ಈ ಕಲಹ ವಿಕೋಪಕ್ಕೆ ತಿರುಗಿದೆ. ಬಳಿಕ ಪತ್ನಿ ಅಗ್ನಿಸಾಕ್ಷಿಯಾಗಿ ತಾಳಿ ಕಟ್ಟಿದ ಪತ್ನಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾನೆ.
ಹಾಸನ, ಜೂನ್ 18: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು (Beluru) ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ. ಪತಿ ಹರೀಶ್ (50) ಪತ್ನಿ ಜಾಜಿ (45) ಮೃತಪಟ್ಟವರು.ದಂಪತಿ ಪ್ರತಿದಿನ ಒಂದಲ್ಲ ಒಂದು ಕಾರಣಕ್ಕೆ ಜಗಳವಾಡುತ್ತಿದ್ದರು. ಸೋಮವಾರ (ಜೂ.17) ರಾತ್ರಿಯೂ ಮನೆಯಲ್ಲಿ ದಂಪತಿ ನಡುವೆ ಗಲಾಟೆಯಾಗಿದೆ.
ಕಲಹ ವಿಕೋಪಕ್ಕೆ ತಿರುಗಿದೆ, ಬಳಿಕ ಹರೀಶ್ ಪತ್ನಿ ಜಾಜಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ನಂತರ ಹರೀಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೌಟುಂಬಿಕ ಕಲಹದಲ್ಲಿ ಚಿಕ್ಕಮ್ಮ ಬಲಿ
ದೇವನಹಳ್ಳಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲೆ ಮಗ ಚಿಕ್ಕಮ್ಮಳಿಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹೊಸಕೋಟೆಯ ಸಿದ್ಧಾರ್ಥ ನಗರದಲ್ಲಿ ತಡರಾತ್ರಿ ನಡೆದಿದೆ. ಬೆಂಗಳೂರಿನ ದೊಮ್ಮಸಂದ್ರ ನಿವಾಸಿ ಚಂದ್ರಮ್ಮ (40) ಕೊಲೆಯಾದವರು. ವೆಂಕಟೇಶ್ ಕೊಲೆ ಮಾಡಿದ ಆರೋಪಿ. ಚಂದ್ರಮ್ಮ ಕೈವಾರ ತಾತಯ್ಯ ದೇಗುಲಕ್ಕೆ ಹೋಗಿ ರಾತ್ರಿ ಹಿಂದಿರುಗುತ್ತಿದ್ದರು.
ಈ ವೇಳೆ ಬೈಕ್ ಅಡ್ಡಗಟ್ಟಿ ವೆಂಕಟೇಶ್ ಚಿಕ್ಕಮ್ಮ ಚಂದ್ರಮ್ಮ ಅವರ ಜೊತೆ ಗಲಾಟೆ ತೆಗೆದಿದ್ದಾನೆ. ಬಳಿಕ, ಚಿಕ್ಕಮ್ಮ ಚಂದ್ರಮ್ಮ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಮ್ಮರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚಂದ್ರಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾ. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:34 am, Tue, 18 June 24