3ನೇ ಮದುವೆಗಾಗಿ.. 2ನೇ ಪತ್ನಿ ಮತ್ತು 2 ಮಕ್ಕಳ ಸಾಯಿಸಿದ್ದವನಿಗೆ ನೇಣು

ಗದಗ: ಮೂರನೆಯ ಮದುವೆ ಮಾಡಿಕೊಳ್ಳಲು 2ನೇ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ವಿಷ ಹಾಕಿ ಕೊಲೆ ಮಾಡಿದ್ದ ಪಾಪಿ ಪತಿರಾಯನಿಗೆ ಗಲ್ಲು ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ಐತಿಹಾಸಿಕ ಜಡ್ಜಮೆಂಟ್ ನೀಡಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ಅರುಣಕುಮಾರ ಲಮಾಣಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ಮಹತ್ದದ ತೀರ್ಪು ನೀಡಿದ್ದಾರೆ. 2016ರ ಮಾರ್ಚ್ 29ರಂದು ಗದಗ ಜಿಲ್ಲೆಯ ಹಮ್ಮಗಿ ಗ್ರಾಮದ ತೋಟದ ಮನೆಯಲ್ಲಿ ಘಟನೆ ನಡೆದಿತ್ತು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3 […]

3ನೇ ಮದುವೆಗಾಗಿ.. 2ನೇ ಪತ್ನಿ ಮತ್ತು 2 ಮಕ್ಕಳ ಸಾಯಿಸಿದ್ದವನಿಗೆ ನೇಣು
ಸಾಧು ಶ್ರೀನಾಥ್​

Updated on: Dec 04, 2019 | 6:52 PM

ಗದಗ: ಮೂರನೆಯ ಮದುವೆ ಮಾಡಿಕೊಳ್ಳಲು 2ನೇ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ವಿಷ ಹಾಕಿ ಕೊಲೆ ಮಾಡಿದ್ದ ಪಾಪಿ ಪತಿರಾಯನಿಗೆ ಗಲ್ಲು ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ಐತಿಹಾಸಿಕ ಜಡ್ಜಮೆಂಟ್ ನೀಡಿದೆ.

ಪ್ರಕರಣದಲ್ಲಿ ಆರೋಪಿಯಾಗಿದ್ದ ಅರುಣಕುಮಾರ ಲಮಾಣಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ಮಹತ್ದದ ತೀರ್ಪು ನೀಡಿದ್ದಾರೆ. 2016ರ ಮಾರ್ಚ್ 29ರಂದು ಗದಗ ಜಿಲ್ಲೆಯ ಹಮ್ಮಗಿ ಗ್ರಾಮದ ತೋಟದ ಮನೆಯಲ್ಲಿ ಘಟನೆ ನಡೆದಿತ್ತು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3 ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆಸಿತ್ತು. ಮೊದಲ ಪತ್ನಿ ಮಂಜುಳಾ, ಅರುಣ್​ನ ಅಣ್ಣ ಸಾಕ್ಷ್ಯ ಹೇಳಿದ್ದರು.

Published On - 6:12 pm, Wed, 4 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us