AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಪೂರ್ಣೇಶ್ವರಿ ನಗರದಲ್ಲಿ ಪತ್ನಿ ಕೊಲೆ ಪ್ರಕರಣ; ಸಿನಿಮೀಯ ಶೈಲಿಯಲ್ಲಿ ನಡೆದಿತ್ತು ಮರ್ಡರ್ ಸ್ಕೆಚ್

Crime News: ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಕೊಲೆಗೆ ಸಂಬಂಧಿಸಿದ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಪಕ್ಕಾ ಸಿನಿಮಾ ಸ್ಟೈಲ್​ನಲ್ಲಿ ಕೊಲೆಗೆ ಸ್ಕೆಚ್ ನಡೆದಿತ್ತು.

ಅನ್ನಪೂರ್ಣೇಶ್ವರಿ ನಗರದಲ್ಲಿ ಪತ್ನಿ ಕೊಲೆ ಪ್ರಕರಣ; ಸಿನಿಮೀಯ ಶೈಲಿಯಲ್ಲಿ ನಡೆದಿತ್ತು ಮರ್ಡರ್ ಸ್ಕೆಚ್
ಕೊಲೆಯಾದ ರೂಪ ಮತ್ತು ಆರೋಪಿ ಕಾಂತರಾಜ್
TV9 Web
| Edited By: |

Updated on: Sep 25, 2021 | 9:24 AM

Share

ಬೆಂಗಳೂರು: ಸೆ.22ರ ಸಂಜೆ ಪತಿ ತನ್ನ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ. ಈ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಾಂತರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಫೈನಾನ್ಸ್ ಮತ್ತು ರಿಯಲ್ ಎಸ್ಟೇಟ್ ಬ್ರೋಕರ್ ಕೆಲಸ ಮಾಡುತ್ತಿದ್ದ ಕಾಂತರಾಜ್, ತನ್ನ ಪತ್ನಿ ರೂಪಳನ್ನು ಕೊಲೆ ಮಾಡಿದ್ದ. ಚಾಕುವಿನಿಂದ ಆಕೆಯ ಕುತ್ತಿಗೆ ಸೀಳಿ ಆರೋಪಿ ಪರಾರಿಯಾಗಿದ್ದ. ಆರೋಪಿಯನ್ನು ಎಪಿ ನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಕೊಲೆಗೆ ಸಂಬಂಧಿಸಿದ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಪಕ್ಕಾ ಸಿನಿಮಾ ಸ್ಟೈಲ್​ನಲ್ಲಿ ಕೊಲೆಗೆ ಸ್ಕೆಚ್ ನಡೆದಿತ್ತು. ಹೆಂಡತಿಯ ಕೊಲೆಗೆ ಮನೆಯಲ್ಲೇ ಸ್ಕೆಚ್ ರೆಡಿಯಾಗಿತ್ತು ಅಂತ ವಿಚಾರಣೆ ನಡೆಸಿದ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಫೈನಾಶ್ಸಿಯರ್ ಕಾಂತರಾಜ್ ರೂಪಾಳನ್ನು ವರಿಸಿದ್ದ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ದಂಪತಿ ವಾಸವಾಗಿದ್ದರು. ಆದರೆ ಗಂಡ ಕಾಂತರಾಜ್​ಗೆ ಹೆಂಡತಿ ರೂಪಾ ಮೇಲೆ ಅನುಮಾನವಿತ್ತು. ಪತ್ನಿ ಅಪರಿಚಿತ ವ್ಯಕ್ತಿಯೊಬ್ಬನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನವಿತ್ತು. ಇದರಿಂದ ತೀವ್ರ ಖಿನ್ನೆತೆಗೆ ಒಳಾಗಾಗಿದ್ದ ಪತಿ ಕಾಂತರಾಜ್ ಪತ್ನಿಯನ್ನು ಹತ್ಯೆಗೈದಿದ್ದಾನೆ.

ಹೆಂಡತಿ ರೂಪಾಳನ್ನು ಕೊಲೆ ಮಾಡಬೇಕು ಅಂತಾ ನಿರ್ಧರಿಸಿದ್ದ ಗಂಡ ಕಾಂತರಾಜ್, ಟ್ರಿಪ್ ಹೋಗೋಣ ಅಂತಾ ಪತ್ನಿಯೊಂದಿಗೆ ಕರಾವಳಿ ಭಾಗಕ್ಕೆ ಹೋಗಿದ್ದ. ಪ್ರಕೃತಿ ಸೌಂದರ್ಯ ನೋಡಿಸುವ ನೆಪದಲ್ಲಿ ಎತ್ತರಕ್ಕೆ ಕರೆದುಕೊಂಡು ಹೋಗಿದ್ದ. ಹೋಗಿ ಕೆಳಗೆ ತಳ್ಳಿ ಕೊಲೆ ಮಾಡಲು ಸ್ಕೇಚ್ ಹಾಕಿದ್ದ. ಮೂರು ದಿನ ಕೊಲೆ ಮಾಡೋಕೆ ಪ್ರಯತ್ನಿಸಿದ್ದರು ಅದು ಸಾಧ್ಯವಾಗಿರಲಿಲ್ಲ. ಕಾರಿನಿಂದ ಡಿಕ್ಕಿ ಹೊಡೆಸಿ ಕೊಲೆ ಮಾಡುವ ಪ್ಲಾನ್ ಕೂಡ ಇತ್ತು. ಆದರೆ ಅದು ಕೂಡ ಸಫಲವಾಗಲಿಲ್ಲ.

ಕೊನೆಗೆ ಕೋಪದಲ್ಲಿ ಕಾಂತರಾಜ್ ಮನೆಗೆ ಬಂದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆ ನಂತರ ಮನೆಯ ಬಾಗಿಲು ಹಾಕಿಕೊಂಡು ಗಂಡ ಎಸ್ಕೇಪ್ ಆಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಎಪಿ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ

ಎಲ್ಲ ಕಂಪನಿಗಳ ಷೇರುಗಳು ಹಣವನ್ನು ದ್ವಿಗುಣಗೊಳಿಸಲಾರವು, ಹಣ ಹೂಡುವಾಗ ವಿವೇಚನೆ ಬಳಸಬೇಕು: ಡಾ ಬಾಲಾಜಿ ರಾವ್

ದಾವಣಗೆರೆಯಲ್ಲಿ ಮೊಬೈಲ್ ಟವರ್ ಜನರೇಟರ್​ಗೆ ಆಕಸ್ಮಿಕ ಬೆಂಕಿ! ಭಾರಿ ಪ್ರಮಾಣದಲ್ಲಿ ಆವರಿಸಿದ ಹೊಗೆ

(husband had decided to murder his wife in cinematic fashion at Annapurneshwari Nagar Bengaluru)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ