ತುಮಕೂರು: ಪತ್ನಿಯ ಶೀಲದ ಮೇಲೆ ಶಂಕಿಸಿ, ಪತಿ ಪತ್ನಿಯನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಧುಗಿರಿ ತಾಲೂಕಿನ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ. ಬೇಡತ್ತೂರಿನಲ್ಲಿ ಪುಷ್ಪಾ (30) ಮೃತ ದುರ್ದೈವಿ. ಪತಿ ರಾಮಾಂಜಿ ಕೊಲೆ ಆರೋಪಿ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಜ್ಞಾನಭಾರತಿ ವಿವಿ ಆವರಣದಲ್ಲಿ ಮತ್ತೊಂದು ಅಪಘಾತ
ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯದ ಆವರಣದಲ್ಲಿ ದಿಢೀರ್ ಆಗಿ ಹಾಕಿದ ಹಂಪ್ನಿಂದ ನಿಯಂತ್ರಣ ತಪ್ಪಿ ಬೈಕ್ ಸವಾರ ಬಿದ್ದಿದ್ದಾನೆ. ನಿನ್ನೆ (ಅ.10) ರಾತ್ರಿ ಹಂಪ್ನಿಂದ ನಿಯಂತ್ರಣ ತಪ್ಪಿ ಬೈಕ್ನಿಂದ ಬಿದ್ದು ಮಹಮ್ಮದ್ ಫಾಜಿಲ್ ಎಂಬಾತನಿಗೆ ಗಾಯಗೊಂಡಿದ್ದಾನೆ. ಗಾಯಗೊಂಡ ಯುವಕ ಖಾಸಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರ ಬೇಟಿ ಪರಿಶೀಲನೆ ನಡೆಸಿದ್ದಾರೆ.
ಬೈಕ್‌ಗೆ ಹಿಂಬದಿಯಿಂದ ಸರ್ಕಾರಿ ಬಸ್ ಡಿಕ್ಕಿ: ಮಹಿಳೆ ಸಾವು
ವಿಜಯಪುರ: ಬೈಕ್‌ಗೆ ಹಿಂಬದಿಯಿಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ಮುತ್ತವ್ವ ಗಸ್ತಿ (40) ಮೃತ ಮಹಿಳೆ. ಅಪಘಾತದ ಬಳಿಕ ಬಸ್ ಬಿಟ್ಟು ಕಂಡಕ್ಟರ್, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಬಲೇಶ್ವರ ಠಾಣೆಯ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
]ವಿದ್ಯುತ್ ಪ್ರವಹಿಸಿ ಕುದುರೆ ಸಾವು
ರಾಮನಗರ: ವಿದ್ಯುತ್ ಪ್ರವಹಿಸಿ ಕುದುರೆ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ನಗರದ ಕುವೆಂಪುನಗರದಲ್ಲಿ ನಡೆದಿದೆ. ಟ್ರಾನ್ಸ್ ಫಾರ್ಮರ್ ನಿಂದ ವಿದ್ಯುತ್ ಪ್ರವಹಿಸಿ ಕುದುರೆ ಸಾವನ್ನಪ್ಪಿದ್ದು, ಬೆಸ್ಕಾಂ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಸಗಿ ಬಸ್‌ಗೆ, ಬೈಕ್ ಹಿಂಬದಿಯಿಂದ ಡಿಕ್ಕಿ: ಸವಾರ ಸಾವು
ನೆಲಮಂಗಲ: ಖಾಸಗಿ ಬಸ್‌ಗೆ, ಪಲ್ಸರ್ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಮಹದೇವಪುರ ಬಳಿ ನಡೆದಿದೆ. ಗೋವಿಂದರಾಜು (25) ಮೃತ ಬೈಕ್ ಸವಾರ. ನೆಲಮಂಗಲ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಅಪರಾಧಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ