AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಲ್ಯ‌, ಸಾಂಬಾರ್ ಸರಿ ಮಾಡಲ್ಲ ಎಂದು ಪ್ರೀತಿಸಿ ಮದ್ವೆಯಾದ ಹೆಂಡ್ತಿಯನ್ನೇ ಕೊಂದ ಪತಿ

ಅವರಿಬ್ಬರ ಮಧ್ಯೆ ಅಪ್ರಾಪ್ತ ವಯಸ್ಸಿನಿಂದಲೇ ಪ್ರೀತಿ ಚಿಗುರೊಡೆದಿತ್ತು. ಯುವಕ ಯುವತಿ ಒಂದೇ ಸಮುದಾಯದವರಾಗಿದ್ದರಿಂದ ಎರಡೂ ಕುಟುಂಬಗಳ ಹಿರಿಯರು ಇಬ್ಬರಿಗೂ ಮದುವೆ ಮಾಡಿಸಿದರು. ಒಂದು ವರ್ಷ ಇಬ್ಬರು ಅನ್ಯೋನ್ಯತೆಯಿಂದ ಜೀವನ ನಡೆಸಿದರು. ಹೀಗಿರುವಾಗಲೇ ಪಲ್ಯ, ಸಾಂಬಾರ್ ಸರಿಯಾಗಿ ಮಾಡಲ್ಲ ಎನ್ನುವ ನೆಪದಲ್ಲಿ ಜಗಳ ಶುರುವಾಗಿ, ಜಗಳದಲ್ಲಿ ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಪತಿ ಕೊಲೆ ಮಾಡಿದ್ದಾರೆ.

ಪಲ್ಯ‌, ಸಾಂಬಾರ್ ಸರಿ ಮಾಡಲ್ಲ ಎಂದು ಪ್ರೀತಿಸಿ ಮದ್ವೆಯಾದ ಹೆಂಡ್ತಿಯನ್ನೇ ಕೊಂದ ಪತಿ
ಆರೋಪಿ ಬೀರಪ್ಪ, ಮೃತ ಸಾಕ್ಷಿತಾ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: May 02, 2025 | 10:14 PM

Share

ಬಾಗಲಕೋಟೆ, ಮೇ 02: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ, ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆ (Balagalkot) ಜಿಲ್ಲೆಯ ಮುಧೋಳ (Mudhol) ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಸಾಕ್ಷಿತಾ ವಾಳಕೆ (19) ಮೃತ ದುರ್ದೈವಿ. ಬೀರಪ್ಪ ಪೂಜಾರಿ (21) ಕೊಲೆ ಮಾಡಿದ ಆರೋಪಿ. ಸಾಕ್ಷಿತಾ ವಾಳಕೆ ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ವಡಗೋಲ ಗ್ರಾಮದವರು. ಬೀರಪ್ಪ ಪೂಜಾರಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದವರು. ಇವರಿಬ್ಬರ ನಡುವೆ ಅಪ್ರಾಪ್ತ ವಯಸ್ಸಿನಲ್ಲೇ ಪ್ರೀತಿ ಶುರುವಾಗಿತ್ತು. ಮಾವನ ಊರು ವಡಗೋಲದಲ್ಲಿ ಹೈಸ್ಕೂಲ್ ಓದುವಾಗಲೇ ಬೀರಪ್ಪ ಹಾಗೂ ಸಾಕ್ಷಿತಾ ಮಧ್ಯೆ ಪ್ರೀತಿ ಶುರುವಾಗಿತ್ತು.

ಇಬ್ಬರ ಪ್ರೀತಿ ತಿಳಿದು ಹೇಗಿದ್ದರೂ ಒಂದೇ ಸಮುದಾಯ ಅಂತ ಪೋಷಕರು ಇವರ ಪ್ರೀತಿಗೆ ಒಪ್ಪಿ ಎರಡೂ ಕುಟುಂಬದ ಹಿರಿಯರು ಕಳೆದ ವರ್ಷ ಮದುವೆ ಮಾಡಿದ್ದರು. ಮದುವೆ ಬಳಿಕ ದಂಪತಿ ಮುಗಳಖೋಡ ಗ್ರಾಮದಲ್ಲಿ ವಾಸಿಸುತ್ತಿದ್ದರು. ಪ್ರೀತಿಸಿದ ಜೀವಗಳು ಒಂದಾಗಿ ಇರುತ್ತವೆ ಅಂತ ಹಿರಿಯರು ಮದುವೆ ಮಾಡಿದ್ರೆ, ಪಲ್ಯ ಸಾಂಬಾರ್ ಸರಿಯಾಗಿ ಮಾಡಲ್ಲ ಎನ್ನುವ ನೇಮಪದಲ್ಲಿ, ಪತಿ ಬೀರಪ್ಪ ತನ್ನ ಪತ್ನಿ ಸಾಕ್ಷಿತಾರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಏಪ್ರಿಲ್​ 29 ರಂದು ರಾತ್ರಿ 2 ಗಂಟೆಗೆ ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ಗಲಾಟೆ ತಾರಕಕ್ಕೆ ಏರಿ ಪತಿ ತನ್ನ ಪತ್ನಿಯ ಎದೆ ಮೇಲೆ ಕೂತು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಲೆ‌ ಮಾಡಿದ ಬೀರಪ್ಪನಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ
Image
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
Image
ಪರೀಕ್ಷೆಯಲ್ಲಿ ನಕಲು ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
Image
7 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾದಾಮಿ ಮಹಿಳೆ ಸಿನಿಮೀಯ ರೀತಿಯಲ್ಲಿ ವಾಪಸ್
Image
ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು

ಇನ್ನು ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಬೀರಪ್ಪನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಪೊಲೀಸರಗೆ ಬೀರಪ್ಪನಿಗೆ ಅಕ್ರಮ ಸಂಬಂಧ ಇತ್ತು ಎನ್ನುವ ಮಾಹಿತಿ ಸಿಕ್ಕಿದೆ. ಅದಕ್ಕಾಗೇ ಪಲ್ಯ, ಸಾಂಬಾರ್ ಸರಿ ಮಾಡುವುದಿಲ್ಲ ಎಂಬ ನೆಪದಲ್ಲಿ, ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಲೆ ಮಾಡಿದ್ನಾ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಬಗ್ಗೆ ಬಾಗಲಕೋಟೆ ಎಸ್​ಪಿ ಅಮರನಾಥ ರೆಡ್ಡಿ ಮಾಹಿತಿ ನೀಡಿದ್ದು, ಪತಿ-ಪತ್ನಿ ಒಂದೇ ಸಮುದಾಯದವರು. ಅಪ್ರಾಪ್ತ ವಯಸ್ಸಲ್ಲೇ ಲವ್ ಮಾಡಿದ್ದರು. ಒಂದೇ ಸಮುದಾಯ ಆದ ಕಾರಣ ಎಲ್ಲ ಹಿರಿಯರು ಸೇರಿ ಮದುವೆ ಮಾಡಿದ್ದರು. ಕೇವಲ ಅಡುಗೆ ಮಾಡಲು ಬಾರದ ಹಿನ್ನೆಲೆ‌ ಕೊಲೆ‌ ಮಾಡಿಲ್ಲ ಎಂಬ ಸಂಶಯವಿದೆ. ಬೀರಪ್ಪನಿಗೆ ಬೇರೆ ಮಹಿಳೆಯರ ಜೊತೆ ಅಕ್ರಮ ಸಂಬಂಧ ಇತ್ತು ಎಂಬ ಮಾಹಿತಿ ಇದೆ. ಆತನ ಮೊಬೈಲ್​ನಲ್ಲಿ ಬೇರೆ‌ ಮಹಿಳೆಯರ ಜೊತೆಗಿರುವ ಪೊಟೊಗಳು ಸಿಕ್ಕಿವೆ. ಇದೇ ಕಾರಣಕ್ಕೆ‌ ಇಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು ಎಂಬ ಸಂಶಯವಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ. ಕೊಲೆ ಹಿಂದೆ ಈತನೊಬ್ಬನದ್ದೇ ಪಾತ್ರ ಇದೆಯಾ ಅಥವಾ ಬೇರೆಯವರ ಕೈವಾಡ ಇದೆಯಾ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​

ಒಟ್ಟಿನಲ್ಲಿ ಪ್ರೀತಿಸಿದ ಹುಡುಗನ ಜೊತೆಗೆ ಬದುಕಬೇಕು ಎನ್ನುವ ಆಸೆಯಿಂದ ಮದುವೆ ಮಾಡಿಕೊಂಡ ಯುವತಿ ತನ್ನ ಪತಿಯಿಂದಲೇ ಕೊಲೆಯಾಗಿದ್ದಾಳೆ. ಇದು ಅಡುಗೆಗಾಗಿ ನಡೆದ ಕೊಲೆಯೋ ಅಥವಾ ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಬಲಿಯಾಗಿದ್ದಾಳೋ ಎನ್ನೋದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್