ಗೃಹಲಕ್ಷ್ಮೀ ಯೋಜನೆ ಹಣ ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾದಳು!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮನೆ ಯಜನಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು, ಈ ಹಣದಲ್ಲಿ ಹಲವರು ಹಲವು ಕೆಲಸಗಳಿಗೆ ಉಪಯೋಗ ಮಾಡಿಕೊಂಡಿರುವ ವರದಿಯಾಗಿದೆ. ಇದರ ಮಧ್ಯ ಗೃಹಲಕ್ಷ್ಮೀ ಹಣವನ್ನು ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾಗಿದ್ದಾಳೆ. ತವರು ಮನೆ ಸೇರಿದ್ದ ,ಮಹಿಳೆ ಹಣ ತೆಗೆದುಕೊಂಡು ಬರಲು ಹೋದಾಗ ಗಂಡನೇ ಹತ್ಯೆ ಮಾಡಿದ್ದಾನೆ.

ಗೃಹಲಕ್ಷ್ಮೀ ಯೋಜನೆ ಹಣ ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾದಳು!
ಗೃಹಲಕ್ಷ್ಮೀ ಹಣ ತರಲು ಹೋಗಿದ್ದ ಮಹಿಳೆ ಕೊಲೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 23, 2024 | 12:16 PM

ದಾವಣಗೆರೆ, (ಅಕ್ಟೋಬರ್ 23): ಗೃಹಲಕ್ಷ್ಮೀ ಯೋಜನೆ ಹಣ ತರಲು ಬ್ಯಾಂಕ್​ಗೆ ಹೋಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಸಿರುಗಟ್ಟಿಸಿ ಪತ್ನಿ ಸತ್ಯಮ್ಮಳನ್ನು ಕೊಲೆಮಾಡಿ ಪತಿ ಅಣ್ಣಪ್ಪ ಪರಾರಿಯಾಗಿದ್ದಾನೆ. ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಸತ್ಯಮ್ಮ ತವರು ಮನೆ ಸೇರಿದ್ದರು. ಆದ್ರೆ, ಗೃಹ ಲಕ್ಷ್ಮಿ ಹಣ ಡ್ರಾ ಮಾಡಿಕೊಳ್ಳಲು ಒಡೆರಹಳ್ಳಿ ಗ್ರಾಮಕ್ಕೆ ಬಂದಿದ್ದಾಳೆ. ಈ ವೇಳೆ ಪತಿ ಅಣ್ಣಪ್ಪ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಕೂಡಿಟ್ಟ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ಗೋಕಾಕ್ ಗೃಹಿಣಿ ಬಾಗವ್ವಾ ಸಣ್ಣಕ್ಕಿ

ಗೃಹಲಕ್ಷ್ಮೀ ಯೋಜನೆ ಹಣ ಪಡೆಯಲು ಸತ್ಯಮ್ಮ ಮಂಗಳವಾರ ಜಗಳೂರು ತಾಲೂಕಿನ ಅಸಗೋಡ್​​ ಬ್ಯಾಂಕ್​​ಗೆ ಬಂದಿದ್ದರು. ಇದೇ ವೇಳೆ ಬ್ಯಾಂಕ್​ಗೆ ಬಂದ ಪತಿ ಅಣ್ಣಪ್ಪ ಪತ್ನಿ ಸತ್ಯಮ್ಮಳನ್ನ ಮನವೊಲಿಸಿ ಜಮೀನಿಗೆ ಕರೆದೊಯ್ದು ಹಲ್ಲೆ ಮಾಡಿದ್ದಾನೆ. ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಗೃಹಲಕ್ಷ್ಮೀ ಹಣದಿಂದ ಹಲವು ಮಹಿಳೆಯರಿಗೆ ಅನುಕೂಲವಾಗಿದೆ. ಈ ಯೋಜನೆಯ ಹಣದಿಂದ ಮಹಿಳೆಯರು ಒಳ್ಳೆ ಕೆಲಸಗಳಿಗೆ ಉಪಯೋಗಿಸಿಕೊಂಡಿದ್ದಾರೆ. ಓರ್ವ ಮಹಿಳೆ ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು ಗ್ರಂಥಾಲಯ ನಿರ್ಮಿಸಿದ್ದರೆ, ಮತ್ತೋರ್ವ ಮಹಿಳೆ ಮನೆಗೆ ಟಿವಿ, ಫ್ರಿಜ್ ಕೊಂಡುಕೊಂಡಿದ್ದಾರೆ.

ಇನ್ನು ಬೆಳಗಾವಿಯಲ್ಲಿ ಮಹಿಳೆಯೊಬ್ಬರು ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿಸಿದ್ದಾರೆ. ಇನ್ನು ಇನ್ನೋರ್ವ ಮಹಿಳೆ ಗ್ರಾಮದೇವತೆಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ಹೀಗೆ ಗೃಹಲಕ್ಷ್ಮೀ ಹಣದಿಂದ ಸದ್ಭಳಿಕೆಯಾಗುತ್ತಿರುವುದಕ್ಕೆ ಸಿಎಂ ಆದಿಯಾಗಿ ಸಚಿವರು ಸಂತೋಷದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಾಕಿಕೊಂಡು ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ. ಆದ್ರೆ, ದುರ್ವೈವ ಇದೇ ಗೃಹಲಕ್ಷ್ಮೀ ಹಣ ತರಲು ಹೋದ ಮಹಿಳೆ ಹೆಣವಾಗಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ