ದಾವಣಗೆರೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದ ಪತಿ

ಕೌಟುಂಬಿಕ ಕಲಹ ಹಿನ್ನೆಲೆ ಪತಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ. ಪತಿ ನಾಗರಾಜಪ್ಪ ನಿತ್ಯ ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಿದ್ದನು. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದ ಪತಿ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Aug 19, 2023 | 9:55 AM

ದಾವಣಗೆರೆ (ಆ.19): ಕೌಟುಂಬಿಕ ಕಲಹ ಹಿನ್ನೆಲೆ ಪತಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ (Channgiri) ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ಸುಲೋಚನಾ(45) ಮೃತ ದುರ್ದೈವಿ. ಪತಿ ನಾಗರಾಜಪ್ಪ (48) ಕೊಲೆ ಆರೋಪಿ. ಪತಿ ನಾಗರಾಜಪ್ಪ ನಿತ್ಯ ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಿದ್ದನು. ಹೀಗೆ ಕುಡಿದ ಮತ್ತಿನಲ್ಲಿ ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿ ಪತ್ನಿಗೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ನಾಗರಾಜಪ್ಪ ಪೊಲೀಸರಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಮಿತಿ ಮೀರಿದೆ ಪುಂಡರ ಹಾವಳಿ; ಬೇಕರಿಯೊಂದರ ಮೇಲೆ ಏಕಾಕಿ ದಾಳಿ

ಬೆಂಗಳೂರು: ನಗರದಲ್ಲಿ ಪುಂಡರ ಹಾವಳಿ ಮಿತಿ ಮೀರಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತುಂಗಾನಗರದಲ್ಲಿವ ಮಂಜುನಾಥ ಬೇಕರಿ ಮೇಲೆ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಆಗಸ್ಟ್ 16 ರಂದು ಸಂಜೆ ಐದು ಗಂಟೆಗೆ ದುಷ್ಕರ್ಮಿಗಳು ಬೈಕ್​​ನಲ್ಲಿ ಬಂದಿದ್ದರು.

ಇದನ್ನೂ ಓದಿ: ದಾವಣಗೆರೆ: ಕಾಡು ಪ್ರಾಣಿಗಳ ಬೇಟೆಗೆ ಬಳಸುತ್ತಿದ್ದ ಸ್ಫೋಟಕ ಪತ್ತೆ

ಪುಂಡರು ಮುಖದ ಗುರುತು ಪತ್ತೆಯಾಗದಂತೆ ಮಾಸ್ಕ್ ಧರಿಸಿದ್ದರು. ಅಲ್ಲದೇ ಬೈಕ್ ನಂಬರ್ ಪ್ಲೇಟ್ ಕಾಣದಂತೆ ಸಗಣಿ ಬಳದಿದ್ದರು. ನಂತರ ಏಕಾಏಕಿ ಬೇಕರಿಗೆ ನುಗ್ಗಿ ದೊಣ್ಣೆ, ಕಲ್ಲಿನಿಂದ ಶೋಕೆಸ್ ಗಾಜು ಪುಡಿ ಮಾಡಿದ್ದಾರೆ. ನಂತರ ಬಂದ ಬೈಕ್​ನಲ್ಲೇ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:54 am, Sat, 19 August 23

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us