ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಗೆ 17 ಬಾರಿ ಚಾಕುವಿನಿಂದ ಇರಿದಿರುವ ಘಟನೆ ವಿಠ್ಠಲ್ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಉಮೇಶ್ ಪತ್ನಿ ಇಂದಿರಾಗೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ಆರೋಪಿ ಉಮೇಶ್ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಕಳೆದ ಏಳು ವರ್ಷಗಳ ಹಿಂದೆ ಉಮೇಶ್-ಇಂದಿರಾ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ಬಿರುಕು ಮೂಡಿ ದೂರವಾಗಿದ್ದರು. ನಂತರ ಕಳೆದ ಒಂದು ವರ್ಷದ ಹಿಂದೆ ಮತ್ತೆ ಇಬ್ಬರು ಒಂದಾಗಿದ್ದರು. ಆದ್ರೆ ಈ ಮಧ್ಯೆ ಮತ್ತೆ ಪತಿ-ಪತ್ನಿ ನಡುವೆ ಜಗಳ ಶುರುವಾಗಿತ್ತು.
ಫೆ.20ರಂದು ತಡರಾತ್ರಿ ಮನೆಗೆ ಕುಡಿದು ಬಂದಿದ್ದ ಉಮೇಶ್ ಪತ್ನಿ ಜೊತೆ ಜಗಳ ಮಾಡಿದ್ದಾನೆ. ಬಳಿಕ ಕುಡಿದ ಅಮಲಿನಲ್ಲಿ ಅಡುಗೆ ಮನೆಯಲ್ಲಿದ್ದ ಚಾಕು ತಂದು ಪತ್ನಿ ಮೇಲೆ ಹಲ್ಲೆ ಎಸಗಿದ್ದಾನೆ. ಒಟ್ಟು 17 ಬಾರಿ ಇಂದಿರಾಗೆ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಪತ್ನಿ ಇಂದಿರಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಇಂದಿರಾ ಪಾರಾಗಿದ್ದಾರೆ.