Hyderabad: 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣ, ಶಾಲೆಯನ್ನು ಮುಚ್ಚಲು ಆದೇಶ ನೀಡಿದ ಸರ್ಕಾರ

4 ವರ್ಷದ ಬಾಲಕಿಯ ಅತ್ಯಾಚಾರದ ಆರೋಪದ ನಂತರ ತೆಲಂಗಾಣ ಸರ್ಕಾರದಿಂದ ಹೈದರಾಬಾದಿನ ಶಾಲೆಯ ಮಾನ್ಯತೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.

Hyderabad: 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣ, ಶಾಲೆಯನ್ನು ಮುಚ್ಚಲು ಆದೇಶ ನೀಡಿದ ಸರ್ಕಾರ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 21, 2022 | 8:03 PM

ತೆಲಂಗಾಣ: ಹೈದರಾಬಾದ್‌ನಲ್ಲಿ (Hyderabad) ಖಾಸಗಿ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿ ಮೇಲೆ ಎರಡು ತಿಂಗಳ ಕಾಲ ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಪ್ರಸ್ತುತ ಶಾಲೆಗೆ  ನೀಡಲಾಗಿದ್ದ ಸರ್ಕಾರದ ಮಾನ್ಯತೆಯನ್ನು ಕೂಡಲೇ ರದ್ದುಪಡಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಲ್ಲಿ ವಸತಿ ಕಲ್ಪಿಸಬೇಕು ಎಂದು ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಆದೇಶಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಯಾವ ಭದ್ರತಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ತೆಲಂಗಾಣದ ಶಿಕ್ಷಣ ಕಾರ್ಯದರ್ಶಿ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಸಚಿವರು ಆದೇಶಿಸಿದ್ದಾರೆ. ಸಮಿತಿಯು ತನ್ನ ಸದಸ್ಯರಾಗಿ ಶಾಲಾ ಶಿಕ್ಷಣ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆಗೆ ವ್ಯವಹರಿಸುವ ಹಿರಿಯ ಅಧಿಕಾರಿಯನ್ನು ಹೊಂದಿರುತ್ತಾರೆ. ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಸಚಿವರು ಹೇಳಿದೆ.

ಘಟನೆ ಬಹಿರಂಗವಾದ ನಂತರ ಬಂಜಾರಾ ಹಿಲ್ಸ್‌ನ ಶಾಲೆಯನ್ನು ಮುಚ್ಚಲಾಗಿದೆ. ಎರಡು ತಿಂಗಳಿನಿಂದ ಮಗುವಿನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲಾ ಪ್ರಾಂಶುಪಾಲರ ಚಾಲಕನನ್ನು ಬುಧವಾರ ಬಂಧಿಸಲಾಗಿದೆ. ದೌರ್ಜನ್ಯದ ಬಗ್ಗೆ ದೂರನ್ನು ತಳ್ಳಿದ ಶಾಲೆಯ ಪ್ರಾಂಶುಪಾಲರು ಅದರ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ ಎಂದು ವರದಿಯಾಗಿದೆ. ಪೋಷಕರ ಪ್ರತಿಭಟನೆಯ ನಂತರ ಅವರನ್ನು ಬಂಧಿಸಲಾಯಿತು.

ಮಗುವಿನ ವರ್ತನೆಯಲ್ಲಿ ಬದಲಾವಣೆಯನ್ನು ಗಮನಿಸಿದ ಪೋಷಕರು ವಿಚಾರಿಸಿದಾಗ, ಏನೋ ದೊಡ್ಡ ತಪ್ಪಾಗಿದೆ ಎಂದು ಗೊತ್ತಾಯ್ತು. ಮಗು ಚಾಲಕನನ್ನು ಬೊಟ್ಟು ಮಾಡಿ ತೋರಿಸಿತ್ತು. ಇದರಿಂದ ಕೋಪಗೊಂಡ ಪೋಷಕರು ಚಾಲಕನ ಮೇಲೆ ಹಲ್ಲೆ ನಡೆಸಿ ಬಂಜಾರ ಹಿಲ್ಸ್ ಪೊಲೀಸ್ ಠಾಣೆ ಎದುರು ಧರಣಿ ಕುಳಿತಿದ್ದು, ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ.

ಶಾಲೆಯಲ್ಲಿನ ಸಿಸಿಟಿವಿಗಳು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಚಾಲಕನು ಪೂರ್ವ ಪ್ರಾಥಮಿಕ ವಿಭಾಗಕ್ಕೆ ಶಿಕ್ಷಕರ ಪಾತ್ರವನ್ನು ಹೆಚ್ಚಾಗಿ ವಹಿಸಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿದೆ.

ಮಕ್ಕಳ ಸುರಕ್ಷತೆಗೆ ನೀಡಬೇಕಾದ ಪ್ರಾಮುಖ್ಯತೆಯ ಬಗ್ಗೆ ಶಾಲಾ ಆಡಳಿತ ಮಂಡಳಿಗಳಿಗೆ ಸಚಿವರು ಕಠಿಣ ಸಂದೇಶ ರವಾನಿಸಿದ್ದು ಶಾಲೆಯನ್ನು ಮುಚ್ಚಿ ಮಕ್ಕಳನ್ನು ಸ್ಥಳಾಂತರಿಸುವ ಆದೇಶವು ಪೋಷಕರು ಮತ್ತು ಸರ್ಕಾರಿ ಅಧಿಕಾರಿಗಳಲ್ಲಿ ಸಾಷ್ಟು ಆತಂಕವನ್ನು ಉಂಟುಮಾಡಿದೆ.

ಶಾಲೆಯಲ್ಲಿ 700 ವಿದ್ಯಾರ್ಥಿಗಳು ಓದುತ್ತಿದ್ದು, ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಅವರಿಗೆ ಬೇರೆ ಶಾಲೆಗಳಲ್ಲಿ ಸೀಟು ಹುಡುಕುವುದು ದೊಡ್ಡ ಸವಾಲಾಗಿ ಪರಿಣಮಿಸಲಿದೆ.

Published On - 7:06 pm, Fri, 21 October 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್