Crime News: ಹೆಂಡತಿಯ ಶೀಲದ ಬಗ್ಗೆ ಅನುಮಾನ; ಬೆಚ್ಚಿ ಬೀಳಿಸುವಂಥ ನಿರ್ಧಾರ ತೆಗೆದುಕೊಂಡ ಗಂಡ

|

Updated on: Jul 22, 2024 | 5:00 PM

ತನ್ನ ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬ ಹೆಂಡತಿ ಮತ್ತು ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

Crime News: ಹೆಂಡತಿಯ ಶೀಲದ ಬಗ್ಗೆ ಅನುಮಾನ; ಬೆಚ್ಚಿ ಬೀಳಿಸುವಂಥ ನಿರ್ಧಾರ ತೆಗೆದುಕೊಂಡ ಗಂಡ
ಸಾಂದರ್ಭಿಕ ಚಿತ್ರ
Follow us on

ಹೈದರಾಬಾದ್: ತನ್ನ ಹೆಂಡತಿಯ ಶೀಲದ ಬಗ್ಗೆ ಅನುಮಾನ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಜೊತೆಗೆ 10 ತಿಂಗಳ ಹೆಣ್ಣು ಮಗುವನ್ನು ಕೂಡ ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗಣೇಶ್ ಎಂಬ ವ್ಯಕ್ತಿ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗಳನ್ನು ಕೊಂದು ನಂತರ ಸುಚಿತ್ರಾ ಎಂಬಲ್ಲಿನ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿಕಂದರಾಬಾದ್‌ನ ಬೋವೆನ್‌ಪಲ್ಲಿ ಪ್ರದೇಶದಲ್ಲಿ ಭಾನುವಾರ ಗಣೇಶ್ ವ್ಯಕ್ತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಹೆಂಡತಿ ಮತ್ತು 10 ತಿಂಗಳ ಮಗಳನ್ನು ತನ್ನ ಮನೆಯಲ್ಲಿ ಕೊಂದಿದ್ದಾರೆ. ಈ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆ ಮತ್ತು ಆಕೆಯ ಮಗಳ ಶವವನ್ನು ಪತ್ತೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಗಣೇಶ್ ತನ್ನ ಪತ್ನಿ ಸ್ವಪ್ನಾ ಮತ್ತು ಮಗಳು ನಕ್ಷತ್ರಳ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: 20 ವರ್ಷಗಳ ನಂತರ ಕೊಲೆ ಆರೋಪಿ ಅರೆಸ್ಟ್, ಅಂದು ಆರೋಪಿ ಇಂದು ಸಿನಿಮಾ ನಿರ್ದೇಶಕ!

ಗಣೇಶ್ ಅವರ ನೆರೆಹೊರೆಯವರ ಪ್ರಕಾರ, ಅವರು ಆಟೋರಿಕ್ಷಾ ಚಾಲಕರಾಗಿದ್ದು, ಆ ಕುಟುಂಬವು ಕೆಲವು ವರ್ಷಗಳ ಹಿಂದೆ ಮಹಾರಾಷ್ಟ್ರದಿಂದ ವಲಸೆ ಬಂದಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಬೋವನಪಲ್ಲಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನ್ನ ಪತ್ನಿಯ ಚಾರಿತ್ರ್ಯದ ಬಗ್ಗೆ ಶಂಕೆ ವ್ಯಕ್ತಪಡಿಸಿದ ವ್ಯಕ್ತಿ ಈ ಕೊಲೆಗೈದಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ