ಗರ್ಲ್​ಫ್ರೆಂಡ್ ಜೊತೆ ಮಾತಾಡಿದ 10ನೇ ತರಗತಿಯ ಬಾಲಕನಿಗೆ 7 ಬಾರಿ ಚಾಕುವಿನಿಂದ ತಿವಿದ ಪಿಯುಸಿ ವಿದ್ಯಾರ್ಥಿ!

ಗೆಳತಿಯೊಂದಿಗೆ ಮಾತನಾಡಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯನ್ನು ಪಿಯುಸಿ ವಿದ್ಯಾರ್ಥಿ ಕೊಲೆ ಮಾಡಲು ಪ್ರಯತ್ನಿಸಿರುವುದು ಭಾರೀ ಆಘಾತಕ್ಕೆ ಕಾರಣವಾಗಿದೆ.

ಗರ್ಲ್​ಫ್ರೆಂಡ್ ಜೊತೆ ಮಾತಾಡಿದ 10ನೇ ತರಗತಿಯ ಬಾಲಕನಿಗೆ 7 ಬಾರಿ ಚಾಕುವಿನಿಂದ ತಿವಿದ ಪಿಯುಸಿ ವಿದ್ಯಾರ್ಥಿ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 19, 2022 | 3:33 PM

ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ (Second PUC) ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯ ಬಳಿ ಆಕೆಯ ಜೊತೆಗೆ ಓದುವ ಹುಡುಗನೊಬ್ಬ ಮಾತನಾಡಿದ ಎಂಬ ಕಾರಣಕ್ಕೆ ಆತನನ್ನು ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಎಸ್​ಎಸ್​ಎಲ್​ಸಿ (SSLC) ಓದುತ್ತಿದ್ದ ತನ್ನ ಗರ್ಲ್​ಫ್ರೆಂಡ್ ಜೊತೆಗೆ ಅದೇ ಕ್ಲಾಸ್​ನಲ್ಲಿ ಓದುತ್ತಿದ್ದ ಇನ್ನೋರ್ವ ವಿದ್ಯಾರ್ಥಿ ಮಾತನಾಡಿದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಗೆಳತಿಯೊಂದಿಗೆ ಮಾತನಾಡಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯನ್ನು ಪಿಯುಸಿ ವಿದ್ಯಾರ್ಥಿ ಕೊಲೆ ಮಾಡಲು ಪ್ರಯತ್ನಿಸಿರುವುದು ಭಾರೀ ಆಘಾತಕ್ಕೆ ಕಾರಣವಾಗಿದೆ. ರಾಜೇಂದ್ರನಗರದಲ್ಲಿ ಮಂಗಳವಾರ ರಾತ್ರಿ 10ನೇ ತರಗತಿ ವಿದ್ಯಾರ್ಥಿ ಮೇಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: Navjot Singh Sidhu 1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ

ಪೊಲೀಸರ ಪ್ರಕಾರ, ಸಂತ್ರಸ್ತ ಬಾಲಕ ದುರ್ಗಾ ಪ್ರಸಾದ್ ಫಿಲ್ಮ್ ನಗರದ ಶಾಲೆಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ಸಂಜೆ ತನ್ನ ಗೆಳೆಯರೊಂದಿಗೆ ಹೊರಗೆ ಹೋಗಿದ್ದ. ಆಗ ಆತನನ್ನು ಮನೆಗೆ ಡ್ರಾಪ್​ ಮಾಡುವ ನೆಪದಲ್ಲಿ ಆತನ ಕ್ಲಾಸ್​ಮೇಟ್​ನ ಗೆಳೆಯನೊಬ್ಬ ಆತನನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗಿದ್ದ. ಆಗ ಆತ ರಾಜೇಂದ್ರನಗರದ ಟಿಪ್ಪು ಖಾನ್ ಸೇತುವೆ ಬಳಿ ಕರೆದುಕೊಂಡು ಹೋಗಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ 7 ಬಾರಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ದುರ್ಗಾ ಪ್ರಸಾದ್ ಸಹಾಯಕ್ಕಾಗಿ ಕೂಗಿದಾಗ ಆ ಹಲ್ಲೆ ಮಾಡಿದ ವಿದ್ಯಾರ್ಥಿ ಸ್ಥಳದಿಂದ ಓಡಿಹೋದ. ನಂತರ ಸ್ಥಳೀಯ ಪೊಲೀಸ್ ಸಿಬ್ಬಂದಿ ಅವನನ್ನು ರಕ್ಷಿಸಿದರು. ಆತನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್