ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ (Second PUC) ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯ ಬಳಿ ಆಕೆಯ ಜೊತೆಗೆ ಓದುವ ಹುಡುಗನೊಬ್ಬ ಮಾತನಾಡಿದ ಎಂಬ ಕಾರಣಕ್ಕೆ ಆತನನ್ನು ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಎಸ್ಎಸ್ಎಲ್ಸಿ (SSLC) ಓದುತ್ತಿದ್ದ ತನ್ನ ಗರ್ಲ್ಫ್ರೆಂಡ್ ಜೊತೆಗೆ ಅದೇ ಕ್ಲಾಸ್ನಲ್ಲಿ ಓದುತ್ತಿದ್ದ ಇನ್ನೋರ್ವ ವಿದ್ಯಾರ್ಥಿ ಮಾತನಾಡಿದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಗೆಳತಿಯೊಂದಿಗೆ ಮಾತನಾಡಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಪಿಯುಸಿ ವಿದ್ಯಾರ್ಥಿ ಕೊಲೆ ಮಾಡಲು ಪ್ರಯತ್ನಿಸಿರುವುದು ಭಾರೀ ಆಘಾತಕ್ಕೆ ಕಾರಣವಾಗಿದೆ. ರಾಜೇಂದ್ರನಗರದಲ್ಲಿ ಮಂಗಳವಾರ ರಾತ್ರಿ 10ನೇ ತರಗತಿ ವಿದ್ಯಾರ್ಥಿ ಮೇಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಇದನ್ನೂ ಓದಿ: Navjot Singh Sidhu 1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ
ಪೊಲೀಸರ ಪ್ರಕಾರ, ಸಂತ್ರಸ್ತ ಬಾಲಕ ದುರ್ಗಾ ಪ್ರಸಾದ್ ಫಿಲ್ಮ್ ನಗರದ ಶಾಲೆಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ಸಂಜೆ ತನ್ನ ಗೆಳೆಯರೊಂದಿಗೆ ಹೊರಗೆ ಹೋಗಿದ್ದ. ಆಗ ಆತನನ್ನು ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ಆತನ ಕ್ಲಾಸ್ಮೇಟ್ನ ಗೆಳೆಯನೊಬ್ಬ ಆತನನ್ನು ಬೈಕ್ನಲ್ಲಿ ಕರೆದುಕೊಂಡು ಹೋಗಿದ್ದ. ಆಗ ಆತ ರಾಜೇಂದ್ರನಗರದ ಟಿಪ್ಪು ಖಾನ್ ಸೇತುವೆ ಬಳಿ ಕರೆದುಕೊಂಡು ಹೋಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ 7 ಬಾರಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ದುರ್ಗಾ ಪ್ರಸಾದ್ ಸಹಾಯಕ್ಕಾಗಿ ಕೂಗಿದಾಗ ಆ ಹಲ್ಲೆ ಮಾಡಿದ ವಿದ್ಯಾರ್ಥಿ ಸ್ಥಳದಿಂದ ಓಡಿಹೋದ. ನಂತರ ಸ್ಥಳೀಯ ಪೊಲೀಸ್ ಸಿಬ್ಬಂದಿ ಅವನನ್ನು ರಕ್ಷಿಸಿದರು. ಆತನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ