ಹೈದರಾಬಾದ್: ರೆಸ್ಟೋರೆಂಟ್​ವೊಂದರ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು

ರೆಸ್ಟೋರೆಂಟ್​ವೊಂದರ ಮ್ಯಾನೇಜರ್​ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಬುಧವಾರ ರಾತ್ರಿ ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಗುಡಾದ ಕಿನ್ನೇರಾ ಗ್ರಾಂಡ್ ಸಂದರ್ಶಿನಿ ಹೋಟೆಲ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ರೆಸ್ಟೋರೆಂಟ್ ಉದ್ಯೋಗಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೇವೆಂದರ್ ಗಯಾನ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ

ಹೈದರಾಬಾದ್: ರೆಸ್ಟೋರೆಂಟ್​ವೊಂದರ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಗುಂಡಿನ ದಾಳಿ

Updated on: Aug 24, 2023 | 9:41 AM

ರೆಸ್ಟೋರೆಂಟ್​ವೊಂದರ ಮ್ಯಾನೇಜರ್​ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಬುಧವಾರ ರಾತ್ರಿ ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಗುಡಾದ ಕಿನ್ನೇರಾ ಗ್ರಾಂಡ್ ಸಂದರ್ಶಿನಿ ಹೋಟೆಲ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ರೆಸ್ಟೋರೆಂಟ್ ಉದ್ಯೋಗಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೇವೆಂದರ್ ಗಯಾನ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಾದಾಪುರ ಡಿಸಿಪಿ ಸಂದೀಪ್ ಮಿಯಾಪುರ ಪೊಲೀಸರೊಂದಿಗೆ ಘಟನಾ ಸ್ಥಳದಲ್ಲಿ 6 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಮೃತರನ್ನು ಹೋಟೆಲ್‌ನ ಜನರಲ್ ಮ್ಯಾನೇಜರ್ ಎಂದು ಗುರುತಿಸಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೂಲದ ದೇವೇಂದರ್ ಮೇಲೆ ದುಷ್ಕರ್ಮಿಗಳು ಒಟ್ಟು ಐದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಕಂಡುಕೊಂಡಿದ್ದಾರೆ. ಹೋಟೆಲ್‌ನಿಂದ ಮನೆಗೆ ತೆರಳಲು ಮುಂದಾದಾಗ ದೇವೆಂದರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಲ್ಮೆಟ್ ಧರಿಸಿ ಬೈಕ್​ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಕಂಟ್ರಿಮೇಡ್ ಪಿಸ್ತೂಲಿನಿಂದ ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಮತ್ತಷ್ಟು ಓದಿ: ಬಿಹಾರದಲ್ಲಿ ಪತ್ರಕರ್ತನ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿದ ಆಗಂತುಕರು

ಶೂಟರ್‌ಗಳು ಕೋಲ್ಕತ್ತಾದವರೆಂದು ಶಂಕಿಸಲಾಗಿದೆ ಮತ್ತು ಬಹುಶಃ ಮೃತರಿಗೆ ನಿಕಟ ಸಂಬಂಧವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಗುಂಡು ಹಾರಿಸಿ ಕೋಲ್ಕತ್ತಾಗೆ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಹೋಟೆಲ್ ಸಿಬ್ಬಂದಿಯ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದು, ದೇವೇಂದರ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us