ಐಐಟಿ-ಬಿಎಚ್​ಯು ವಿದ್ಯಾರ್ಥಿನಿಗೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ ಕಿರುಕುಳ

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಆಕೆ ಹಾಸ್ಟೆಲ್​ನ ಹೊರಗಡೆ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಆಕೆ ಓಡಿ ಹೋಗಿ 20 ನಿಮಿಷಗಳ ಕಾಲ ಪ್ರಾಧ್ಯಾಪಕರ ಮನೆಯಲ್ಲಿ ಅಡಗಿ ಕುಳಿತಿದ್ದಳು.

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಗೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ ಕಿರುಕುಳ
ಪ್ರತಿಭಟನೆImage Credit source: News.Career
Follow us
ನಯನಾ ರಾಜೀವ್
|

Updated on:Nov 03, 2023 | 4:17 PM

ಐಐಟಿ-ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಆಕೆ ಹಾಸ್ಟೆಲ್​ನ ಹೊರಗಡೆ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಆಕೆ ಓಡಿ ಹೋಗಿ 20 ನಿಮಿಷಗಳ ಕಾಲ ಪ್ರಾಧ್ಯಾಪಕರ ಮನೆಯಲ್ಲಿ ಅಡಗಿ ಕುಳಿತಿದ್ದಳು.

ವಿದ್ಯಾರ್ಥಿನಿಯು ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಬಂದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಅವರನ್ನು ಅಡ್ಡಗಟ್ಟಿದ್ದಾರೆ.

ಆಕೆಯನ್ನು ಬಲವಂತವಾಗಿ ಒಂದು ಮೂಲೆಗೆ ಕರೆದೊಯ್ದಿದ್ದಾರೆ ಆಕೆಯ ಸ್ನೇಹಿತನಿಂದ ದೂರ ಕರೆದೊಯ್ದು, ಬಾಯಿಯನ್ನು ಮುಚ್ಚಿ, ವಿವಸ್ತ್ರಗೊಳಿಸಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಅಷ್ಟೇ ಅಲ್ಲದೆ ಆಕೆಯ ಫೋಟೊವನ್ನು ಕ್ಲಿಕ್ಕಿಸಿದ್ದಾರೆ, 15 ನಿಮಿಷಗಳ ನಂತರ ಆಕೆಯನ್ನು ಹೋಗಲು ಬಿಟ್ಟು ಆಕೆಯ ಫೋನ್ ಸಂಖ್ಯೆಯನ್ನು ತೆಗೆದುಕೊಂಡಿದ್ದಾರೆ.

ಆಕೆ ತಕ್ಷಣವೇ ಓಡಿ ಹೋಗಿ ಪ್ರಾಧ್ಯಾಪಕರ ಮನೆಯನ್ನು ತಲುಪಿದ್ದಾಳೆ, ತಕ್ಷಣವೇ ಆಕೆಯನ್ನು ಮನೆಯೊಳಗೆ ಕರೆದೊಯ್ದು, ಸಮಾಧಾನಪಡಿಸಿದ್ದಾರೆ.

ವಿದ್ಯಾರ್ಥಿಯನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ತನ್ನ ಹಾಸ್ಟೆಲ್‌ಗೆ ಕರೆದೊಯ್ದರು. ಘಟನೆಯ ನಂತರ ವಿದ್ಯಾರ್ಥಿನಿ ತೀವ್ರ ಆಘಾತಕ್ಕೊಳಗಾಗಿದ್ದು, ತನ್ನ ಹಾಸ್ಟೆಲ್‌ನಿಂದ ಹೊರಬರುತ್ತಿಲ್ಲ ಎಂದು ಹೇಳಲಾಗಿದೆ. ಗಲಾಟೆಯಲ್ಲಿ ಆಕೆಯ ಸ್ನೇಹಿತೆ ಗಾಯಗೊಂಡಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:14 pm, Fri, 3 November 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ