ಗದಗ: ಅನೈತಿಕ ಸಂಬಂಧ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿರಹಟ್ಟಿ ತಾಲೂಕಿನ ಮಜ್ಜೂರ ಗ್ರಾಮದ ಬಳಿ ನಡೆದಿದೆ. ಮಾಚ್ಚೇನಹಳ್ಳಿ ಗ್ರಾಮದ ನಿವಾಸಿ ಮಂಜುನಾಥ (22) ಕೊಲೆಯಾದವ.
ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಂಜುನಾಥನನ್ನು ಹುಡುಗಿ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 5ರಂದು ರಾತ್ರಿ ಪಾರ್ಟಿ ಮಾಡಲು ಕರೆದುಕೊಂಡು ಹೋಗಿದ್ದರು. ಈ ವೇಳೆ ಹುಡುಗಿಯ ತಂದೆ ಮಾನಪ್ಪ ಸೇರಿದಂತೆ ಐದು ಮಂದಿ, ಯುವಕನನ್ನು ಕೊಲೆ ಮಾಡಿ ಕೆರೆಯಲ್ಲಿ ಕಲ್ಲು ಕಟ್ಟಿ ಬಿಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Published On - 1:46 pm, Wed, 13 May 20