ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಸಾಗಾಟ; ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಚಿನ್ನದ ಬೇಟೆಯನ್ನು ಮುಂದುವರಿಸಿದ್ದಾರೆ. ಇತ್ತೀಚೆಗಷ್ಟೇ ಪ್ರಯಾಣಿಕರೊಬ್ಬರನ್ನು ಬಂಧಿಸಿ 98.68 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದ ಕಸ್ಟಮ್ಸ್ ಅಧಿಕಾರಿಗಳು, ಇದೀಗ ಇಬ್ಬರನ್ನು ಬಂಧಿಸಿ 50 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಸಾಗಾಟ; ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ
ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಸಾಗಾಟ; ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on: Jan 15, 2024 | 4:07 PM

ಮಂಗಳೂರು, ಜ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mangaluru International Airport) ಇತ್ತೀಚೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನವನ್ನು (Gold) ವಶಕ್ಕೆ ಪಡೆದಿದ್ದ ಕಸ್ಟಮ್ಸ್ ಅಧಿಕಾರಿಗಳು ಇದೀಗ ಇಬ್ಬರನ್ನು ಬಂಧಿಸಿ 50 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರ ಚಲನವಲನಗಳ ಮೇಲೆ ಅನುಮಾನ ಮೂಡಿದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ತಪಾಸಣೆ ನಡೆಸಿದ್ದಾರೆ. ಈ ವೇಳೆ ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: 5 ದಿನಗಳಲ್ಲಿ ಬೆಂಗಳೂರು ಏರ್​ಪೋರ್ಟ್​ ಕಸ್ಟಮ್ಸ್‌ ಅಧಿಕಾರಿಗಳಿಂದ 2 ಕೋಟಿ ರೂ. ಮೊತ್ತದ ಚಿನ್ನಾಭರಣ ವಶ

ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಲಾಗಿತ್ತು. ಒಬ್ಬ ಪ್ರಯಾಣಿಕ ಚಿನ್ನದ ಪೇಸ್ಟ್ ಅನ್ನು ಕ್ಯಾಪ್ಸೂಲ್​ಗಳಲ್ಲಿ ತುಂಬಿಸಿ ಗುದದ್ವಾರದಲ್ಲಿಟ್ಟು ಸಾಗಿಸುತ್ತಿದ್ದನು. ಮತ್ತೊಬ್ಬ ಪ್ರಯಾಣಿಕ ಚಾಕಲೇಟ್ ಬಾಕ್ಸ್​ನಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದನು. ಸದ್ಯ, ಇಬ್ಬರು ಪ್ರಯಾಣಿಕರಿಂದ ಒಟ್ಟು 50.93 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ, ಅಬುಧಾಬಿಯಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದನು. ಪ್ರಯಾಣಿಕನ ಅನುಮಾನಾಸ್ಪದ ಚಲನವಲನಗಳ ಮೇಲೆ ಅನುಮಾನ ವ್ಯಕ್ತವಾದ ಹಿನ್ನೆಲೆ ಪ್ರಯಾಣಿಕನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಗುದದ್ವಾರದಲ್ಲಿ 98.68 ಲಕ್ಷ ಮೌಲ್ಯದ 24 ಕ್ಯಾರೆಟ್​ನ 1579 ಗ್ರಾಂ ಚಿನ್ನ ಪತ್ತೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ