545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ: ಬಂಧಿತರ ಮನೆ ಮೇಲೆ ಸಿಐಡಿ ದಾಳಿ, ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು

545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಆರೋಪಿಗಳ ಮನೆ ಮೇಲೆ ಸಿಐಡಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ: ಬಂಧಿತರ ಮನೆ ಮೇಲೆ ಸಿಐಡಿ ದಾಳಿ, ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:May 14, 2022 | 3:30 PM

545 ಪಿಎಸ್ಐ(PSI) ಹುದ್ದೆಗಳ ನೇಮಕಾತಿ ಪರೀಕ್ಷೆ ಮತ್ತು ಆಯ್ಕೆ ಪಟ್ಟಿಯಲ್ಲಿ ನಡೆದ ಅಕ್ರಮ(Illegal) ಪ್ರಕರಣದಲ್ಲಿ ಸಿಲುಕಿರುವ ಆರೋಪಿಗಳ ಮನೆ ಮೇಲೆ ಸಿಐಡಿ(CID) ಅಧಿಕಾರಿಗಳು ದಾಳಿ ನಡೆಸಿದ್ದು, ಮನೆ ಜಾಲಾಡಲಾಗುತ್ತಿದೆ. ಆರೋಪಿ ಡಿವೈಎಸ್ಪಿ ಶಾಂತಕುಮಾರ್(Shanthkumar) ಅವರ ಆಡುಗೋಡಿಯ ಪೊಲೀಸ್ ಕ್ವಾರ್ಟರ್ಸ್​ನಲ್ಲಿರುವ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು ಎರಡು ವಾಹನಗಳಲ್ಲಿ ಶಾಂತಕುಮಾರ್ ಸಿನಿವಾಸಕ್ಕೆ ಆಗಮಿಸಿದ ಸಿಐಡಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಹೆಡ್​ಮಾಸ್ಟರ್ ಕಾಶಿನಾಥ್ ಮತ್ತೆ ಸಿಐಡಿ ವಶಕ್ಕೆ

545 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಶಾಲೆ ಜ್ಞಾನಜ್ಯೋತಿ ಶಾಲೆಯ ಹೆಡ್​ಮಾಸ್ಟರ್ ಕಾಶಿನಾಥ್ ಅವರನ್ನು ಸಿಐಡಿ ಮತ್ತೆ ವಶಕ್ಕೆ ಪಡೆದಿದೆ. ಅಕ್ರಮದಲ್ಲಿ ಸಿಲುಕಿ ಬಂಧಿತರಾಗಿರುವ ಕಲಬುರಗಿ ಜಿಲ್ಲಾ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಶಾಲೆ ಇದಾಗಿದೆ.

ಇನ್ನೊಂದೆಡೆ ತಾಜ್ ಸುಲ್ತಾನ್​ಪುರ ರಸ್ತೆಯಲ್ಲಿರುವ ಕಾಶಿನಾಥ್ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜ್ಞಾನ ಜ್ಯೋತಿ ಶಾಲೆಯಲ್ಲಿ ನಡೆದ ಅಕ್ರಮ ಸಂಬಂಧ ಕಾಶಿನಾಥ್ ಅವರನ್ನು ಮೇ 11ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜ್ಞಾನ ಜ್ಯೋತಿ ಶಾಲೆ ಅಲ್ಲದೆ, ಬೇರೆ ಪರೀಕ್ಷೆ ಕೇಂದ್ರದಲ್ಲಿನ ಅಕ್ರಮದಲ್ಲಿ ಕೂಡ ಭಾಗಿಯಾಗಿರುವ ಆರೋಪ ಇವರ ಮೇಲಿದೆ.

ಈ ಹಿನ್ನೆಲೆ ಸಿಐಡಿ ಅಧಿಕಾರಿಗಳು ಕಾಶಿನಾಥ್ ಅವರನ್ನು ಇಂದು ಮತ್ತೆ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಅಲ್ಲದೆ, ಕಾಶಿನಾಥ್ ಅವರನ್ನು 7 ದಿನಗಳ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳ ವಶಕ್ಕೆ ನೀಡಲಾಗಿದ್ದು, ಒಂದು ವಾರ ಅಧಿಕಾರಿಗಳು ಕಾಶಿನಾಥ್ ಅವರನ್ನು ಫುಲ್ ಡ್ರಿಲ್ ಮಾಡಲಿದ್ದಾರೆ.

545 ಪಿಎಸ್ಐ ಸಿವಿಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಮತ್ತು ಆಯ್ಕೆ ಪಟ್ಟಿಯಲ್ಲಿ ಅಕ್ರಮಗಳು ನಡೆದಿದೆ ಎಂಬ ಆರೋಪಗಳ ಕುರಿತ ವಿಚಾರಣೆ ಕೈಗೊಂಡ ನಂತರ ಪ್ರಕರಣದ ಆರೋಪಗಳು ಒಂದೊಂದಾಗಿಯೇ ಹೊರಬಿದ್ದವು. ಪಿಎಸ್ಐ ಹುದ್ದೆಗಳ ಆಯ್ಕೆ ಪಟ್ಟಿ ಜನವರಿ 19ರಂದು ಬಿಡುಗಡೆಯಾಗಿತ್ತು. ಅಲ್ಲದೆ, ತನ್ನ ಹೆಸರು ಪಟ್ಟಿಯಲ್ಲಿ ಇರಬಹುದು ಎಂದು ಆಸೆ ಇಟ್ಟಿದ್ದ ಪ್ರತಿಭಾವಂತ ಅಭ್ಯರ್ಥಿಗಳು ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದನ್ನು ನೋಡಿ ನಿರಾಸೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಲು ಆರಂಭಿಸಿದ್ದರು.

ಶ್ರೀಧರ್ ಮನೆಯಲ್ಲಿ 20ಲಕ್ಷ ಪತ್ತೆ

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಬಂಧಿತನಾಗಿರುವ ಶ್ರೀಧರ್ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನೇಮಕಾತಿ ವಿಭಾಗದ ಪ್ರಥಮ ದರ್ಜೆ ನೌಕರ ಶ್ರೀಧರ್, ಮಧ್ಯವರ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಹಿನ್ನೆಲೆ ಮೇ 9ರಮದು ಬಂಧಿಸಲಾಗಿತ್ತು. ಇಂದು ಸಿಐಡಿ ಅಧಿಕಾರಿಗಳು ಶ್ರೀಧರ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ 20 ಲಕ್ಷ ರೂ. ನಗದು ಪತ್ತೆಯಾಗಿದೆ.

Published On - 3:13 pm, Sat, 14 May 22

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!