AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗಣಿಗಾರಿಕೆ: ಎಸ್ ಬಿ ಮಿನರಲ್ಸ್ ಒಡೆತನದ ಎರಡು ಕಂಪನಿಗಳ 5.21 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಅಕ್ರಮ ಗಣಿಗಾರಿಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಎಸ್.ಬಿ.ಮಿನರಲ್ಸ್ ಒಡೆತನದ ಎರಡು ಗಣಿ ಕಂಪನಿಗೆ ಸೇರಿದ 5 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.

ಅಕ್ರಮ ಗಣಿಗಾರಿಕೆ: ಎಸ್ ಬಿ ಮಿನರಲ್ಸ್ ಒಡೆತನದ ಎರಡು ಕಂಪನಿಗಳ 5.21 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಸಾಂದರ್ಭಿಕ ಚಿತ್ರ
Rakesh Nayak Manchi
|

Updated on:Mar 19, 2023 | 3:32 PM

Share

ಬೆಂಗಳೂರು: ಅಕ್ರಮ ಗಣಿಗಾರಿಕೆ (Illegal Mining) ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಎಸ್.ಬಿ.ಮಿನರಲ್ಸ್ (SB Minarals) ಒಡೆತನದ ಎರಡು ಗಣಿ ಕಂಪನಿಗೆ ಸೇರಿದ 5 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು (Enforcement Directorate) ಜಪ್ತಿ ಮಾಡಿದೆ. ಬಿ.ಪಿ.ಆನಂದ್ ಕುಮಾರ್, ಪಾಂಡುರಂಗ ಸಿಂಗ್, ಗೋಪಾಲ್ ಸಿಂಗ್ ಪಾಲುದಾರಿಕೆಯ ಎಸ್​ಬಿ ಮಿನರಲ್ಸ್ ಒಡೆತನದ ದಿನೇಶ್ ಕುಮಾರ್ ಪಾಲುದಾರಿಕೆಯ ಭಾರತ್ ಮಿನರಲ್ಸ್ ಮೈನ್ಸ್ ಹಾಗೂ ಶಾಂತಲಕ್ಷ್ಮಿ ಮತ್ತು ಜೆ.ಮಿಥಿಲೇಶ್ವರ್ ಗಣಿಗೆ ಸೇರಿದ 5.21 ಕೋಟಿ ಮೌಲ್ಯದ ಒಟ್ಟು ಆರು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಎರಡು ಕಂಪನಿಗಳು ಕಬ್ಬಿಣದ ಅದಿರನ್ನು ಪರವಾನಗಿ ಇಲ್ಲದೆ ಅಕ್ರಮವಾಗಿ ಸಾಗಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದವು. ಪ್ರಕರಣ ಸಂಬಂಧ ಎಸ್​ಬಿ ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್, ಸರ್ಕಾರಿ ನೌಕರರು ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಲೋಕಾಯುಕ್ತ ಎಸ್​ಐಟಿ ದೂರು ದಾಖಲಿಸಿತ್ತು. ದೂರಿನ ಅನ್ವಯ ಕಂಪನಿಗಳ ವಿರುದ್ಧ ಇಡಿ ಅಧಿಕಾರಿಗಳು ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಇದನ್ನೂ ಓದಿ: Manish Sisodia: ಮನೀಶ್ ಸಿಸೋಡಿಯಾರ ಇಡಿ ಕಸ್ಟಡಿ 5 ದಿನಗಳವರೆಗೆ ವಿಸ್ತರಿಸಿದ ದೆಹಲಿ ನ್ಯಾಯಾಲಯ

ಅಲ್ಲದೆ, ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಕೇಂದ್ರ ಸಶಕ್ತ ಸಮಿತಿ ರಚಿಸಿತ್ತು. ಅದರಂತೆ ನಡೆದ ತನಿಖೆ ವೇಳೆ ನಾಲ್ಕು ಗಣಿಗಳು ಅಕ್ರಮ ನಡೆಸಿರುವುದು ಪತ್ತೆಯಾಗಿದೆ. ಸದ್ಯ ದಿನೇಶ್ ಕುಮಾರ್ ಪಾಲುದಾರಿಕೆಯ ಭಾರತ್ ಮಿನರಲ್ಸ್ ಮೈನ್ಸ್ ಹಾಗೂ ಶಾಂತಲಕ್ಷ್ಮಿ ಮತ್ತು ಜೆ.ಮಿಥಿಲೇಶ್ವರ್ ಗಣಿಗೆ ಸೇರಿದ ಒಟ್ಟು 5.21 ಕೋಟಿ ಮೌಲ್ಯದ 6 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವ ಇಡಿ ಅಧಿಕಾರಿಗಳು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Sun, 19 March 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು