ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ: 2 ಸೇರಿದಂತೆ 298ಗ್ರಾಂ ಚಿನ್ನ ವಶಕ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 19 ಲಕ್ಷ ರೂ. ಮೌಲ್ಯದ 298ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. 

ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ: 2 ಸೇರಿದಂತೆ 298ಗ್ರಾಂ ಚಿನ್ನ ವಶಕ್ಕೆ
ಚಾಕುವಿನ ಹ್ಯಾಂಡಲ್​ನಲ್ಲಿ ಚಿನ್ನವಿಟ್ಟು ಸಾಗಾಟ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Nov 25, 2023 | 9:13 PM

ದೇವನಹಳ್ಳಿ, ನವೆಂಬರ್​​​ 25: ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್ (Kempegowda Airport) ​ನಲ್ಲಿ ನಡೆದಿದೆ. ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಸದ್ಯ ವಶಕ್ಕೆ ಪಡೆದುಕೊಂಡಿದ್ದು, 19 ಲಕ್ಷ ರೂ. ಮೌಲ್ಯದ 298ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದುಬೈನಿಂದ ಇಂಡಿಗೋ 6E-1486 ಫ್ಲೈಟ್​ನಲ್ಲಿ ಪ್ರಯಾಣಿಕರು ಬಂದಿದ್ದಾರೆ.

ವುಡ್ ಪ್ಲೇಟ್ ಮತ್ತು ಚಾಕುವಿನ ಹ್ಯಾಂಡಲ್​ನಲ್ಲಿ ಚಿನ್ನವಿಟ್ಟು ಸಾಗಾಟ ಮಾಡಿದ್ದು, ಪೇಸ್ಟ್ ರೂಪದಲ್ಲಿ ವುಡ್​ಪ್ಲೇಟ್ ಮೇಲೆ ಚಿನ್ನ ಅಂಟಿಸಿದ್ದಾರೆ. ಅನುಮಾನಗೊಂಡು ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲಿಸಿದಾಗ ಚಿನ್ನ ಪತ್ತೆಯಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ದ್ವಿಚಕ್ರ ವಾಹನದ ನಂಬರ್​ ಪ್ಲೇಟ್​​ಗೆ ಸ್ಟಿಕ್ಕರ್ ಅಳವಡಿಸಿದ್ದ ಸವಾರ ಬಂಧನ

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನದ ನಂಬರ್​ ಪ್ಲೇಟ್​​ಗೆ ಸ್ಟಿಕ್ಕರ್ ಅಳವಡಿಸಿದ್ದ ಸವಾರರನ್ನು ಪೊಲೀಸರು ಬಂಧಿಸಿದ್ದಾರೆ. ಚೆನ್ನಬಸವ ಬಂಧಿತ ಸವಾರ. ಆರೋಪಿ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ದಂಡದಿಂದ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್​ಗೆ ಸ್ಟಿಕ್ಕರ್ ಅಳವಡಿಸಿದ್ದ.

ಇದನ್ನೂ ಓದಿ: ಬೆಂಗಳೂರು: 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ: 2 ವೈದ್ಯರು ಸೇರಿದಂತೆ 9 ಆರೋಪಿಗಳ ಬಂಧನ

ಸಂಚಾರಿ ನಿಯಮಗಳನ್ನು ಪದೇಪದೆ ಉಲ್ಲಂಘಿಸಿದ್ದ ಆರೋಪಿ ಚೆನ್ನಬಸವ, ಸ್ಟಿಕ್ಕರ್​ ಅಂಟಿಸಿದ್ದ ಬಗ್ಗೆ ಸವಾರನ ವಿರುದ್ಧ ಸಾರ್ವಜನಿಕರು ಸಾಮಾಜಿಕ ಜಾಲತಾಣ ಮೂಲಕ ಸಂಚಾರಿ ಪೊಲೀಸರಿಗೆ ದೂರು ನೀಡಿದ್ದರು. ಬೈಯಪ್ಪನಹಳ್ಳಿ ಠಾಣೆಯಲ್ಲಿ ಆರೋಪಿ ವಿರುದ್ಧ ವಂಚನೆ ಪ್ರಕರಣ ದಾಖಲು ಮಾಡಲಾಗಿದೆ.

1.5 ಕೆಜಿ ಅಂಬರ್​ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ

ಮಂಗಳೂರು: 1.57 ಕೋಟಿ ರೂ. ಮೌಲ್ಯದ ಅಂಬರ್​​ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪಂಪ್​ವೆಲ್ ಬಳಿ ಮಾರಾಟಕ್ಕೆ ಯತ್ನಿಸಿದ್ದರು. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಪ್ಯಾರೇಜಾನ್ ಅಲಿಯಾಸ್ ಸೇಟು, ಬದ್ರುದ್ದೀನ್ ಅಲಿಯಾಸ್ ಬದ್ರು, ತಮಿಳುನಾಡಿನ ಆರ್.ರಾಜೇಶ್ ಬಂಧಿತರು.

ಹಿರಿಯ KAS ಅಧಿಕಾರಿ ಹನುಮಂತರಾಯಪ್ಪ ಹೃದಯಾಘಾತದಿಂದ ನಿಧನ

ನೆಲಮಂಗಲ: ಹಿರಿಯ KAS ಅಧಿಕಾರಿ ಹನುಮಂತರಾಯಪ್ಪ ಹೃದಯಾಘಾತದಿಂದ ಮೈಸೂರಿನ ಮಣಿಪಾಲ್ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕೆಲ ದಿನಗಳಿಂದ ರಜೆಯಲ್ಲಿದ್ದರು. ರಾಮನಗರ, ಕನಕಪುರ, ಬೆಂಗಳೂರು ಉತ್ತರ, ಆನೇಕಲ್ ತಹಶೀಲ್ದಾರ್‌ರಾಗಿದ್ದರು. ಬಾಗಲಗುಂಟೆ ನಿವಾಸದಲ್ಲಿರುವ ವಿ.ಹನುಮಂತರಾಯಪ್ಪ ಪಾರ್ಥಿವ ಶರೀರ ರವಾನಿಸಿದ್ದು, ನಾಳೆ ಹೆಸರಘಟ್ಟ ಬಳಿಯ ಗೋಪಾಲಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ