ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ

|

Updated on: Feb 23, 2023 | 8:23 PM

ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ ವಿಧಿಸಿ ಸಿಎಂಎಂ ನ್ಯಾಯಾಲಯ ಫೆ. 20ರಂದು ಆದೇಶಿಸಿದೆ.

ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ
ಪ್ರಾತಿನಿಧಿಕ ಚಿತ್ರ
Image Credit source: siasat.com
Follow us on

ಬೆಂಗಳೂರು: ರಾಜಕಾಲುವೆ ಒತ್ತುವರಿ (encroached) ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ ವಿಧಿಸಿ ಸಿಎಂಎಂ ನ್ಯಾಯಾಲಯ ಫೆ. 20ರಂದು ಆದೇಶಿಸಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.96 ಓಕಳಿಪುರಂ, 1ನೇ ಮುಖ್ಯರಸ್ತೆ, ಬಿಡಿಎ ನಿವೇಶನವನ್ನು ಓಕಳಿಪುರಂ ನಿವಾಸಿ ಮುದ್ದುಕೃಷ್ಣ ಟಿ.ಎಲ್​.ಬಿನ್ ಲೇಟ್ ಟಿ.ಎ.ಎಲ್ ನಾಯ್ಡು (72) ಎಂಬುವವರು ಸರ್ಕಾರಿ ಸ್ವತ್ತಾದ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಅನಧಿಕೃವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಬಿಎಂಟಿಎಫ್ ಪೊಲೀಸ್ ಠಾಣೆ ಮೊ.ಸಂ 28/2014 ಕಲಂ 436(ಎ) ಕೆ.ಎಂ.ಸಿ ಆಕ್ಟ್ ರೀತ್ಯಾ ದಿನಾಂಕ 30-05-2014 ರಂದು ಪ್ರಕರಣ ದಾಖಲಾಗಿತ್ತು.

ಬಿಎಂಟಿಎಫ್ ಪೊಲೀಸ್‌ ಠಾಣೆಯಲ್ಲಿ ತನಿಖೆ ಕೈಗೊಳ್ಳಲಾಗಿದ್ದು, ಸದರಿ ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡು ಸಾಕ್ಷಾಧಾರಗಳನ್ನು ಮತ್ತು ದಾಖಲಾತಿಗಳನ್ನು ಸಂಗ್ರಹಿಸಿ ಕೋರ್ಟ್​ಗೆ ಸಲ್ಲಿಸಲಾಗಿದೆ. ಆರೋಪಿ ಮುದ್ದುಕೃಷ್ಣ (72) 1 ವರ್ಷ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿಯಾಗಿ 30 ದಿನಗಳ ಕಾಲ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಆದೇಶ ಹೋರಡಿಸಿದೆ.

ಇದನ್ನೂ ಓದಿ: ಪ್ರತಿಭಟನೆಗೆ ಫ್ರೀಡಂ ಪಾರ್ಕ್​ಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ, ಮೃತ ದೇಹ ರಾಯಚೂರಿಗೆ ರವಾನೆ

ಕುರಿಗಾಯಿ ಮೇಲೆ ಕಾಡುಕೋಣ ದಾಳಿ

ರಾಮನಗರ: ಕುರಿಗಾಯಿ ಮೇಲೆ ಕಾಡುಕೋಣ ದಾಳಿ ಮಾಡಿದ್ದು, ಕುರಿಗಾಯಿ ಸ್ಥಳದಲ್ಲೇ ‌ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕನಕಪುರ ‌ತಾಲೂಕಿನ ಕಾಡುಶಿವನಹಳ್ಳಿ ದೊಡ್ಡಿ ಗ್ರಾಮದ ಬಳಿ ನಡೆದಿದೆ. ನಾಗನಾಯ್ಕ(65) ಮೃತ ವ್ಯಕ್ತಿ. ಕಾಡುಶಿವನಹಳ್ಳಿ ದೊಡ್ಡಿ ನಿವಾಸಿ. ಸಾತನೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಸುಲಿಗೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಗಳು ಅಂದರ್​

ಬೆಂಗಳೂರು: ಸುಲಿಗೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಕೃಷ್ಣ, ನಿರಂಜನ್ ಬಂಧಿತ ಆರೋಪಿಗಳು. ಬಂಧಿತರಿಂದ 1.50ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನ, ಮಾರಕಾಸ್ತ್ರಗಳು, ನಗದು ಜಪ್ತಿ ಮಾಡಲಾಗಿದೆ. ಬಾರ್​ನಲ್ಲಿ‌ ಕೆಲಸ ಮಾಡಿಕೊಂಡಿದ್ದ ಆರೋಪಿಗಳು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಹಣ ಖಾಲಿಯಾದ ಬಳಿಕ ಸುಲಿಗೆಗೆ ಇಳಿದ್ದರು. 12ನೇ ತಾರೀಖು ನಡೆದುಕೊಂಡು ಹೋಗ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿಕೊಂಡು ಬಂದು ಚಾಕುವಿನಿಂದ ಇರಿದು ಸುಲಿಗೆ ಮಾಡಿದ್ದರು. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಕಾರು, ಟ್ಯಾಂಕರ್ ನಡುವೆ ಡಿಕ್ಕಿ: ಉತ್ತರ ಕನ್ನಡ ಜೆಡಿಎಸ್​ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಸೇರಿ ಮೂವರಿಗೆ ಗಂಭೀರ ಗಾಯ

ಫೈನಾನ್ಸ್​ ಕಂಪನಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

ಮೈಸೂರು: ನಂಜನಗೂಡು ತಾಲೂಕಿನ ಚಿಕ್ಕಕವಲಂದೆ ಗ್ರಾಮದಲ್ಲಿ ಖಾಸಗಿ ಫೈನಾನ್ಸ್​ ಕಂಪನಿಯ ಕಿರುಕುಳಕ್ಕೆ ಬೇಸತ್ತು ಮಹೇಶ್(44) ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹೇಶ್, ಚೆನ್ನೈ ಮೂಲದ ಫೈನಾನ್ಸ್ ಕಂಪನಿಯಲ್ಲಿ 3.50 ಲಕ್ಷ ಸಾಲ ಪಡೆದಿದ್ದ. ಸಾಲ ಮರುಪಾವತಿಸುವಂತೆ ಕಿರುಕುಳ ಆರೋಪ ಕೇಳಿ ಬಂದಿದ್ದು ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.