Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಪತ್ನಿ ಸೇರಿ ಆಕೆಯ ಪೋಷಕರಿಂದ ಕಿರುಕುಳ ಆರೋಪ: ಮನನೊಂದು ಸಾವಿಗೆ ಶರಣಾದ ನವವಿವಾಹಿತ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕರಿಯಪ್ಪನಗುಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತ ಸಾವಿಗೆ ಶರಣಾದ ಘಟನೆ ನಡೆದಿದೆ. ಕಿರಣ್ ಬಿ.ಬಿ. (26) ಮೃತ ದುರ್ದೈವಿ.

Hassan News: ಪತ್ನಿ ಸೇರಿ ಆಕೆಯ ಪೋಷಕರಿಂದ ಕಿರುಕುಳ ಆರೋಪ: ಮನನೊಂದು ಸಾವಿಗೆ ಶರಣಾದ ನವವಿವಾಹಿತ
ಮೃತ ರ್ದುದೈವಿ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 02, 2023 | 9:52 AM

ಹಾಸನ, ಆ.2: ಜಿಲ್ಲೆಯ ಚನ್ನರಾಯಪಟ್ಟಣ(Channarayapatna) ತಾಲೂಕಿನ ಕರಿಯಪ್ಪನಗುಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತ ಸಾವಿಗೆ ಶರಣಾದ ಘಟನೆ ನಡೆದಿದೆ. ಕಿರಣ್ ಬಿ.ಬಿ. (26) ಮೃತ ದುರ್ದೈವಿ. ಇನ್ನು ಮೂಲತಃ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದವನಾದ ಕಿರಣ್, ಬೇಕರಿ ನಡೆಸುತ್ತಿದ್ದ. ಕಳೆದ ಫೆ.19 ರಂದು ದಂಡಿಗನಹಳ್ಳಿ ಹೋಬಳಿಯ ವಗರಹಳ್ಳಿ ಗ್ರಾಮದ ಸ್ಪಂದನಾ (24) ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆ ನಂತರ ಪತ್ನಿ ಸ್ಪಂದನಾ ಸೇರಿ ಆಕೆಯ ತಂದೆ ವಾಸು, ತಾಯಿ ಗೀತಾ, ಅಜ್ಜಿ ರತ್ನಮ್ಮ ಹಣಕ್ಕಾಗಿ ಬೇಡಿಕೆಯಿಟ್ಟು ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕಿರಣ್ ವಿರುದ್ಧ ಸುಳ್ಳು ವರದಕ್ಷಿಣೆ ಕಿರುಕುಳ ಕೇಸ್

ಇನ್ನು ಮದುವೆಯಾಗಿ ಒಂದು ವರ್ಷವೂ ಕಳೆದಿಲ್ಲ ಅಷ್ಟರಲ್ಲಿಯೇ ಕಿರಣ್ ವಿರುದ್ಧ ಸುಳ್ಳು ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಿದ್ದ ಬಗ್ಗೆ ಕಿರಣ್ ಪೋಷಕರು ಆರೋಪ ಮಾಡಿದ್ದಾರೆ. ಇನ್ನು ಜೈಲುಪಾಲಾಗಿದ್ದ ಕಿರಣ್,​ವಾರದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈ ಎಲ್ಲಾ ಘಟನೆಯಿಂದ ಮನನೊಂದು ಜುಲೈ 31ರ ರಾತ್ರಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಖುಷ್​​ ಖುಷಿಯಾಗಿದ್ದ ನವದಂಪತಿ ಬೆಳ್ಳಂಬೆಳಗ್ಗೆ ಜೋಡಿಯಾಗಿಯೇ ಶವವಾದರು: ನವದಂಪತಿಯದ್ದು ಕೊಲೆಯೋ, ಆತ್ಮಹತ್ಯೆಯೋ?

ದೇವರ ಮೂರ್ತಿ ಕಳ್ಳತನ ಮಾಡ್ತಿದ್ದ ಕಳ್ಳನ ಬಂಧನ

ಕಲಬುರಗಿ: ದೇವರ ಮೂರ್ತಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಇದೀಗ ಮಹಗಾಂವ್ ಪೊಲೀಸರು ಬಂಧಿಸಿದ್ದಾರೆ. ಮುದ್ದಡಗಾ ಗ್ರಾಮದ ಯಲ್ಲಾಲಿಂಗ್ ಇಟಕರ್(40) ಬಂಧಿತ ಆರೋಪಿ. ಇತ ಕಮಲಾಪುರ ತಾಲೂಕಿನ ಚಂದ್ರನಗರ ಗ್ರಾಮದ ಬೀರಲಿಂಗೇಶ್ವರ ಮತ್ತು ಮಾಳಿಂಗರಾಯ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ. ಇನ್ನು ಬಂಧಿತನಿಂದ 2 ಬೆಳ್ಳಿ ಬಸವಣ್ಣನ ಮೂರ್ತಿ, 2 ಬೆಳ್ಳಿ ತ್ರಿಶೂಲ, ಕಂಚಿನ ಕಳಸ ಸೇರಿದಂತೆ 68,300 ರೂ. ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್