AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಲಿವಿಂಗ್​​​ ಟುಗೆದರ್​ ರಿಲೇಷನ್​ಶಿಪ್​​ನಲ್ಲಿದ್ದ ಜೋಡಿ ಅನುಮಾಸ್ಪದ ಸಾವು

ಬೆಂಗಳೂರಿನ ಬನ್ನೇರುಘಟ್ಟ(Bannerughatta)ದ ಜನತಾ ಕಾಲೋನಿಯಲ್ಲಿ ಲಿವಿಂಗ್​​​ ಟುಗೆದರ್​ ರಿಲೇಶನ್​ಶಿಪ್​​(Living Together relationship)ನಲ್ಲಿದ್ದ ಜೋಡಿಯೊಂದು ಅನುಮಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆನೇಕಲ್: ಲಿವಿಂಗ್​​​ ಟುಗೆದರ್​ ರಿಲೇಷನ್​ಶಿಪ್​​ನಲ್ಲಿದ್ದ ಜೋಡಿ ಅನುಮಾಸ್ಪದ ಸಾವು
ಮೃತ ರ್ದುದೈವಿಗಳು
ರಾಮು, ಆನೇಕಲ್​
| Edited By: |

Updated on:Jun 05, 2024 | 3:48 PM

Share

ಬೆಂಗಳೂರು, ಜೂ.05: ಲಿವಿಂಗ್​​​ ಟುಗೆದರ್​ ರಿಲೇಶನ್​ಶಿಪ್​​(Living Together relationship)ನಲ್ಲಿದ್ದ ಜೋಡಿ ಅನುಮಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ(Bannerughatta)ದ ಜನತಾ ಕಾಲೋನಿಯಲ್ಲಿ ನಡೆದಿದೆ. ವಿಷಸೇವಿಸಿ ಪ್ರಭು(38) ಹಾಗೂ ಲಕ್ಕಮ್ಮ(30) ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪ್ರಭು ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ಲಕ್ಕಮ್ಮ ಗಾರ್ಮೆಂಟ್ಸ್​​ ಕಂಪನಿಗೆ ಕೆಲಸ ಹೋಗುತ್ತಿದ್ದರು ಎನ್ನಲಾಗಿದೆ.

ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಇನ್ನು ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರ ಪರಿಚಯವಾಗಿತ್ತು. ಈ ಹಿನ್ನಲೆ ಇಬ್ಬರು ಒಂದೇ ಮನೆಯಲ್ಲಿ ಲಿವಿಂಗ್ ಟುಗೆದರ್ ರಿಲೇಶನ್​ಶಿಪ್​ನಲ್ಲಿದ್ದರು. ಇದೀಗ ಈ ಜೋಡಿ ಕಳೆದ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಅವರು ವಾಸವಿದ್ದ ಮನೆಯಲ್ಲಿ ಕೆಟ್ಟ ದುರ್ವಾಸನೆ ಬರುವುದಕ್ಕೆ ಶುರುವಾಗಿದೆ. ಇದನ್ನ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ತಿಳಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಹೆಚ್ಚಿದ ಅಪಘಾತಗಳ ಸಂಖ್ಯೆ; ಮೂರೇ ವರ್ಷದಲ್ಲಿ 262 ಸಾವು

ಸ್ಥಳಕ್ಕೆ  ಪೊಲೀಸರು ಭೇಟಿ

ಇನ್ನು ಇವರು ವಿಶ್ವನಾಥ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದರು. ಮೃತ ಪಟ್ಟು ಮೂರ್ನಾಲ್ಕು ದಿನಗಳಾಗಿದ್ದರಿಂದ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಶುರು ಮಾಡಿದ್ದಾರೆ. ಇತ್ತ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ, ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕವೇ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಬೆಳಕಿಗೆ ಬರಲಿದೆ.

 ಅರಕಲಗೂಡಿನಲ್ಲಿ ಸಿಡಿಲಿಗೆ ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರು ಬಲಿ

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಬಳಿ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರ ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕರಾದ ಮುತ್ತಮ್ಮ(70), ಪುಟ್ಟಮ್ಮ(63) ಸಾವು. ಇಂದು ಮಧ್ಯಾಹ್ನ ಜೋಳ ಬಿತ್ತನೆ ಮಾಡುತ್ತಿದ್ದ ವೇಳೆ ಮಳೆ ಬಂದಿದೆ. ಈ ಹಿನ್ನಲೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ಅರಕಲಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎ.ಮಂಜು, ಯೋಗಕ್ಷೇಮ ವಿಚಾರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Wed, 5 June 24

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​