ಆನೇಕಲ್: ಅಕ್ರಮ ಸಂಬಂಧ ಆರೋಪ; ದೊಣ್ಣೆಯಿಂದ ಹೊಡೆದು ಗಾರೆ ಮೇಸ್ತ್ರಿ ಕೊಲೆ ಮಾಡಿದ ಕಾರ್ಮಿಕ

ಆತ ತಮಿಳುನಾಡಿನಿಂದ ಬಂದು ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡಿಕೊಂಡಿದ್ದ. ತನ್ನ ಪಾಡಿಗೆ ತಾನು ಕೆಲಸ ಮಾಡಿಕೊಂಡು ಒಳ್ಳೆಯ ಹೆಸರಿನ ಜೊತೆಗೆ ತಕ್ಕಮಟ್ಟಿಗೆ ಸಂಪಾದನೆ ಮಾಡುತ್ತಿದ್ದ. ಆದ್ರೆ, ಈತನಿಗೊಂದು ಕೆಟ್ಟ ಚಾಳಿಯಿತ್ತು. ಕೊನೆಗೆ ಅದೇ ಆತನ ಸಾವಿಗೆ ಕಾರಣವಾಗಿದೆ.

ಆನೇಕಲ್: ಅಕ್ರಮ ಸಂಬಂಧ ಆರೋಪ; ದೊಣ್ಣೆಯಿಂದ ಹೊಡೆದು ಗಾರೆ ಮೇಸ್ತ್ರಿ ಕೊಲೆ ಮಾಡಿದ ಕಾರ್ಮಿಕ
ಮೃತ ವ್ಯಕ್ತಿ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 18, 2023 | 6:56 AM

ಬೆಂಗಳೂರು, ಆ.18: ತನ್ನ ಬಳಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನಿಂದಲೇ ಬರ್ಬರವಾಗಿ ಹತ್ಯೆಯಾದ ಘಟನೆ ಬೆಂಗಳೂರು(Bengaluru) ಹೊರವಲಯ ಆನೇಕಲ್ (Anekal)ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಬೇಗಿಹಳ್ಳಿಯ ವಸುಂಧರ ಲೇಔಟ್​ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ದಿಲೀಪ್ ಮೃತ ವ್ಯಕ್ತಿ. ಇತ ಮೂಲತಃ ತಮಿಳುನಾಡು(Tamil Nadu) ಮೂಲದ ಗಾರೆ ಮೇಸ್ತ್ರಿಯಾಗಿದ್ದು, ಕಳೆದ ಕೆಲವು ತಿಂಗಳುಗಳ ಹಿಂದೆ ಬೇಗಿಹಳ್ಳಿಯ ವಸುಂಧರ ಲೇಔಟ್​ನಲ್ಲಿ ಒಪ್ಪಂದ ಪಡೆದುಕೊಂಡು ಕಟ್ಟಡ ನಿರ್ಮಾಣ ಮಾಡಿಕೊಂಡಿದ್ದ. ಈತನ ಬಳಿ ಹತ್ತಾರು ಮಂದಿ ಕೂಲಿ ಕಾರ್ಮಿಕರು ಕೆಲಸ ಮಾಡಿಕೊಂಡಿದ್ದರು. ಇತ್ತೀಚೆಗೆ ರಾಯಚೂರು ಮೂಲದ ಕೂಲಿ ಕಾರ್ಮಿಕ ಮಹಿಳೆ ಜೊತೆಗೆ ಮೇಸ್ತ್ರಿ ದಿಲೀಪ್ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಬೆಳಿಗ್ಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ಮೇಸ್ತ್ರಿ ದಿಲೀಪ್ ಹಾಗೂ ಮಹಿಳೆ ಜೊತೆಯಲ್ಲಿರುವುದನ್ನು ಕಂಡ ಮಹಿಳೆಯ ಪತಿ ಹೊನ್ನಪ್ಪ ಎಂಬಾತ ಆಕ್ರೋಶಗೊಂಡು ಅಲ್ಲಿಯೇ ಇದ್ದ ದೊನ್ನೆಯಿಂದ ಮೇಸ್ತ್ರಿ ದಿಲೀಪ್ ತಲೆಗೆ ಹೊಡೆದಿದ್ದಾನೆ.

ಇನ್ನು ನಿರ್ಮಾಣ ಹಂತದ ಬಿಲ್ಡಿಂಗ್ ಬಳಿ ಗಲಾಟೆ ಶಬ್ದ ಕೇಳಿ ಅಲ್ಲಿನ ಸುತ್ತಮುತ್ತಲಿನ ನಿವಾಸಿಗಳು, ಕೂಲಿ ಕಾರ್ಮಿಕರು ಓಡಿ ಬಂದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೇಸ್ತ್ರಿ ದಿಲೀಪ್​ನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿದ್ರು, ಚಿಕಿತ್ಸೆ ಫಲಾಕಾರಿಯಾಗದೆ ಸಾವನ್ನಪ್ಪಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅಡಿಷನಲ್ ಎಸ್ಪಿ ಪುರುಷೋತ್ತಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಹೊನ್ನಪ್ಪನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಡ್ರೈ ಫ್ರೂಟ್ಸ್​​ ಕೆಲಸ ಮಾಡಿಕೊಂಡಿದ್ದ ಯುವಕ, ರಂಜಾನ್​ಗೆ ಊರಿಗೆ ಹೋದ ಎರಡನೇ ದಿನವೇ ಬರ್ಬರವಾಗಿ ಹತ್ಯೆಗೀಡಾದ

ಘಟನೆ ಸಂಬಂಧ ಬನ್ನೇರುಘಟ್ಟ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಹೊನ್ನಪ್ಪನನ್ನು ವಶಕ್ಕೆ ಪಡೆದು ತನಿಖೆಯನದ್ನು ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಮೇಲ್ನೊಟಕ್ಕೆ ತಿಳಿದಿದ್ದು, ಪೋಲೀಸರ ಸಂಪೂರ್ಣ ತನಿಖೆ ಬಳಿಕ ಕೊಲೆಗೆ ಬೇರೆ ಇನ್ಯಾವುದಾದರೂ ಕಾರಣ ಇದೆಯಾ ಎನ್ನುವ ಬಗ್ಗೆ ತಿಳಿದು ಬರಬೇಕಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ