ಬೆಳಗಾವಿ: ಪ್ರೇಯಸಿ ಜತೆ ಹೋಗುತ್ತಿದ್ದವನನ್ನು ಅಡ್ಡಗಟ್ಟಿ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಬರ್ಬರ ಹತ್ಯೆ

ಹುಬ್ಬಳ್ಳಿಯ ನೇಹಾ, ಅಂಜಲಿ ಸೇರಿದಂತೆ ರಾಜ್ಯದೆಲ್ಲೆಡೆ ಹಲವಾರು ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದೀಗ ಬೆಳಗಾವಿಯಲ್ಲಿ ಪ್ರೇಯಸಿ ಜೊತೆ ಬೈಕ್​ನಲ್ಲಿ ಹೊರಟಿದ್ದ ಆಕೆಯ ಸಹೋದರನನ್ನೇ ಬರ್ಬರವಾಗಿ ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳಗಾವಿ: ಪ್ರೇಯಸಿ ಜತೆ ಹೋಗುತ್ತಿದ್ದವನನ್ನು ಅಡ್ಡಗಟ್ಟಿ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಬರ್ಬರ ಹತ್ಯೆ
ಆರೋಪಿ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on:May 16, 2024 | 5:57 PM

ಬೆಳಗಾವಿ, ಮೇ.16: ಸ್ಕ್ರೂಡ್ರೈವರ್​ನಿಂದ ಚುಚ್ಚಿ ಯುವಕನೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಮಹಾಂತೇಶನಗರದ ಬ್ರಿಡ್ಜ್ ಬಳಿ ಇಂದು(ಮೇ.16) ಮಧ್ಯಾಹ್ನ ನಡೆದಿದೆ. ಬೆಳಗಾವಿ(Belagavi)ಯ ಗಾಂಧಿನಗರ ನಿವಾಸಿ ಇಬ್ರಾಹಿಂ ಗೌಸ್(22) ಕೊಲೆಯಾದ ಯುವಕ. ಪ್ರೇಯಸಿ ಜೊತೆ ಬೈಕ್​ನಲ್ಲಿ ಹೊರಟಿದ್ದ ಆಕೆಯ ಸಹೋದರನನ್ನ ಅಡ್ಡಗಟ್ಟಿದ ಆರೋಪಿ ಮುಜಾಮಿಲ್ ಸತ್ತಿಗೇರಿ, ಸ್ಕ್ರೂಡ್ರೈವರ್​ನಿಂದ ಇರಿದು ಪರಾರಿಯಾಗಿದ್ದ. ಗಾಯಾಳು ಗೌಸ್​ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಾಕುವಿನಿಂದ ಇರಿದು ಯುವಕನ ಹತ್ಯೆಗೈದ ದುರುಳರು

ದಾವಣಗೆರೆ: ತಾಲೂಕಿನ ಓಬಜ್ಜಿಹಳ್ಳಿ ಬಳಿ ಚಾಕುವಿನಿಂದ ಇರಿದು ಯುವಕನನ್ನ ಬರ್ಬರವಾಗಿ ಹತ್ತೆ ಮಾಡಲಾಗಿದೆ. ದಾವಣಗೆರೆಯ ಬೂದಾಳ್ ರಸ್ತೆಯ ನಿವಾಸಿ ಸುದೀಪ್(25) ಮೃತ ರ್ದುದೈವಿ. ಇನ್ನು ಮೃತ ಸುದೀಪ್,  ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಸ್ಥಳಕ್ಕೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ರಾತ್ರಿ ವೇಳೆ ಗಲಾಟೆಯಾಗಿ ಕೊಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ? ಮಹತ್ವದ ಸುಳಿವು ಲಭ್ಯ

ರಸ್ತೆ ಡಿವೈಡರ್‌ಗೆ ಗುದ್ದಿ ಲಾರಿ ಪಲ್ಟಿ

ವಿಜಯನಗರ: ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿ ಹೆದ್ದಾರಿಯಲ್ಲಿ ಲಾರಿಯೊಂದು ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿ ಹೊತ್ತಿಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಟೈರ್ ಸ್ಪೋಟದಿಂದ ಲಾರಿಗೆ ಬೆಂಕಿ ತಗುಲಿದ ಶಂಕೆ ವ್ಯಕ್ತವಾಗಿದೆ. ಇನ್ನು ಹೆದ್ದಾರಿಯಲ್ಲಿ ಲಾರಿ ಅಡ್ಡಲಾಗಿ ಬಿದ್ದ ಹಿನ್ನೆಲೆ ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿದ್ದು, ಕಾನಾಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Thu, 16 May 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ