ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕ ಯುವಕನ ಪ್ರೀತಿ ಬಲೆಗೆ ಬಿದ್ದ ಯುವತಿ: ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ, ಮೂವರು ಅರೆಸ್ಟ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 01, 2023 | 8:00 AM

ಇಂದಿನ ದಿನಗಳಲ್ಲಿ ಯುವಕ-ಯುವತಿಯರು ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿಯೇ ಇರಲು ಬಯಸುತ್ತಾರೆ. ಅದರಂತೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಯುವಕನೊಬ್ಬನಿಂದ ಯುವತಿಯೊಬ್ಬಳು ಪ್ರೀತಿ ಹೆಸರಿನಲ್ಲಿ ಮೋಸ ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕ ಯುವಕನ ಪ್ರೀತಿ ಬಲೆಗೆ ಬಿದ್ದ ಯುವತಿ: ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ, ಮೂವರು ಅರೆಸ್ಟ್
ಬಂಧಿತ ಆರೋಪಿಗಳು
Follow us on

ಬೆಂಗಳೂರು, ಆ.1: ಇಂದಿನ ದಿನಗಳಲ್ಲಿ ಯುವಕ-ಯುವತಿಯರು ಹೆಚ್ಚಾಗಿ ಸಾಮಾಜಿಕ ಜಾಲತಾಣ (Social Media)ದಲ್ಲಿಯೇ ಇರಲು ಬಯಸುತ್ತಾರೆ. ಅದರಲ್ಲಿ ಅದೆಷ್ಟೋ ಪರಿಚಯವಿಲ್ಲದ ವ್ಯಕ್ತಿಗಳೊಂದಿಗೆ ಸಂಪರ್ಕ ಮಾಡುತ್ತಾರೆ. ಅದರಂತೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಯುವಕನೊಬ್ಬನಿಂದ ಯುವತಿಯೊಬ್ಬಳು ಪ್ರೀತಿ ಹೆಸರಿನಲ್ಲಿ ಮೋಸ ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕ ಹುಡುಗಿಯೊಂದಿಗೆ ಪ್ರೀತಿಯ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ನೊಂದ ಯುವತಿ ಕೊಡಿಗೆಹಳ್ಳಿ ಪೊಲೀಸರಿಗೆ ದೂರು ನೀಡಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆ್ಯಂಡಿ ಜಾರ್ಜ್, ಸಂತೋಷ್, ಶಶಿ ಬಂಧಿತ ಆರೋಪಿಗಳು.

ಘಟನೆ ವಿವರ

ಖಾಸಗಿ ಶಾಲೆಯ ಡ್ಯಾನ್ಸಿಂಗ್ ಟೀಚರ್ ಆಗಿರುವ ಆ್ಯಂಡಿ ಜಾರ್ಜ್ ಎಂಬಾತನಿಗೆ ಎರಡು ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕಾಲೇಜೊಂದರ ವಿದ್ಯಾರ್ಥಿನಿ ಪರಿಚಯವಾಗಿದ್ದಳು. ಆಕೆಯೊಂದಿಗೆ ಪ್ರೀತಿ ಆ್ಯಂಡಿ ಹೆಸರಲ್ಲಿ ಸುತ್ತಾಡಿದ್ದನು. ಈ ವೇಳೆ ಆಕೆಯ ಜೊತೆ ಕೆಲ ಖಾಸಗಿ ಫೋಟೋಗಳನ್ನು ಸೆರೆ ಹಿಡಿದಿದ್ದ. ಬಳಿಕ ಅದೇ ಫೋಟೋ ಬಳಸಿಕೊಂಡು ಆಕೆಗೆ ಬೆದರಿಕೆ ಹಾಕಿದ್ದಾನೆ. ಆತಂಕಗೊಂಡು ಯುವತಿ ಆತನಿಂದ ದೂರಾಗಿದ್ದಳು. ಬಳಿಕ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದಾಗಿ ಬೆದರಿಸಿ ಅತ್ಯಾಚಾರ ಮಾಡಿ, ಮೊಬೈಲ್ ವಿಡಿಯೋವನ್ನು ಮಾಡಿಕೊಂಡಿದ್ದನಂತೆ. ಇದೇ ರೀತಿಯಾಗಿ ಹಲವು ಬಾರಿ ಬೆದರಿಸಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:ಹಾವೇರಿ: ಪ್ರೇಯಸಿ ಸಹೋದರರಿಂದ ಟಾರ್ಚರ್, ಅಣ್ಣನ ಲವ್ ಸ್ಟೋರಿಗೆ ಬಲಿಯಾದ ತಮ್ಮ

ಮೂವರಿಂದ ಪ್ರತ್ಯೇಕವಾಗಿ ಅತ್ಯಾಚಾರ ಆರೋಪ

ಇನ್ನು ಆರೋಪಿ ಆ್ಯಂಡಿ ಜಾರ್ಜ್ ಅಷ್ಟೇ ಅಲ್ಲ, ಬಳಿಕ ಆತನ ಗೆಳೆಯರಿಂದಲೂ ಸಹ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಹೌದು, ಆ್ಯಂಡಿ ಗೆಳೆಯರು ಕೂಡ ಬೆದರಿಸಿ ಯುವತಿಯನ್ನು ಕರೆಸಿಕೊಂಡು ಪ್ರತ್ಯೇಕವಾಗಿ ಇಬ್ಬರಿಂದಲೂ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ. ಇದಾದ ಬಳಿಕ ಆರೋಪಿ ಆ್ಯಂಡಿ ಜಾರ್ಜ್ ತೆಗೆದಿದ್ದ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನಂತೆ. ಇದರಿಂದ ನೊಂದ ಯುವತಿ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ದೂರು ಹಿನ್ನಲೆ ಇದೀಗ ಮೂವರನ್ನು ಬಂಧಿಸಿದ್ದು, ಆರೋಪಿಗಳ ಬಳಿಯಿದ್ದ ಮೊಬೈಲ್, ಪೆನ್ ಡ್ರೈವ್ ಸೇರಿದಂತೆ ಟೆಕ್ನಿಕಲ್ ಸಾಕ್ಷಿಗಳನ್ನ ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ