ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಹಾಡಹಗಲೇ ರೌಡಿಶೀಟರ್ ಭೀಕರ ಹತ್ಯೆ

ವಿಜಯಪುರ(Vijayapura) ‌ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಪೆರೋಲ್ ಮೇಲೆ ಇದ್ದ ರೌಡಿಶೀಟರ್​​ ಅಶೋಕ್ ಮಲ್ಲಪ್ಪ ಗಂಟಗಲ್ಲಿ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಚಡಚಣ ಪಟ್ಟಣ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಹಾಡಹಗಲೇ ರೌಡಿಶೀಟರ್ ಭೀಕರ ಹತ್ಯೆ
ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 16, 2024 | 3:20 PM

ವಿಜಯಪುರ, ಜೂ.16: ‌ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ವಿಜಯಪುರ(Vijayapura) ‌ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಪೆರೋಲ್ ಮೇಲೆ ಇದ್ದ ರೌಡಿಶೀಟರ್​​ ಅಶೋಕ್ ಮಲ್ಲಪ್ಪ ಗಂಟಗಲ್ಲಿ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮನೆಯಿಂದ ಚಡಚಣ ಪಟ್ಟಣಕ್ಕೆ ತೆರಳುತ್ತಿದ್ದಾಗ ಹಂತಕರು ದಾಳಿ ನಡೆಸಿದ್ದಾರೆ.

ಫೈರಿಂಗ್ ವೇಳೆ ಅಶೋಕ್​ನ​ ಬೆನ್ನಿಗೆ 3ಕ್ಕೂ ಹೆಚ್ಚು ಗುಂಡುಗಳು ಬಿದ್ದಿದೆ. ಗುಂಡಿನ ದಾಳಿಯಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಕೊಲೆಗೀಡಾದ ರೌಡಿಶೀಟರ್ ಅಶೋಕ್ ಪತ್ನಿ ಚಡಚಣ ಪಟ್ಟಣ ಪಂಚಾಯತಿ ಸದಸ್ಯೆಯಾಗಿದ್ದಾರೆ. ಇತ್ತೀಚೆಗೆ ಪೆರೋಲ್​ ಮೇಲೆ ಮೃತ ಅಶೋಕ್ ಜೈಲಿನಿಂದ ಹೊರಬಂದಿದ್ದ​​​. ಇತ ಕೊಲೆ ಹಾಗೂ ಇತರೆ ಕೇಸ್​ಗಳಲ್ಲಿ ಅಪರಾಧಿಯಾಗಿದ್ದ. ಇದೀಗ
ಹಳೇ ದ್ವೇಷದ ಹಿನ್ನೆಲೆ ರೌಡಿಶೀಟರ್​ ಅಶೋಕ್​ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಡಚಣ ಪಟ್ಟಣ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ವ್ಯಕ್ತಿಯೊರ್ವನಿಗೆ ಪಿಎಸ್​​ಐ ನಿಂದ ಕಿರುಕುಳ ಆರೋಪ; ಮನನೊಂದು ಠಾಣೆ ಮುಂದೆಯೇ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರ ಠಾಣೆ ಬಳಿಯ ನಡುರಸ್ತೆಯಲ್ಲಿಯೇ ನಡೆದಿದೆ. ಎಲ್​ಎಂಎಲ್ ಶೇಖರ್ ಕೊಲೆಯಾದ ವ್ಯಕ್ತಿ. ಮೇಲ್ನೋಟಕ್ಕೆ ಅನೈತಿಕ ಸಂಬಂಧ, ಕಿರುಕುಳ ಹಾಗೂ ಹಳೆ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Sun, 16 June 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us