ಬಿಹಾರ: ಅಪ್ರಾಪ್ತ ಬಾಲಕಿಯೊಂದಿಗೆ ಸರಸ ಸಲ್ಲಾಪ ವೇಳೆ ಸಿಕ್ಕಿ ಬಿದ್ದ ಶಿಕ್ಷಕ; ಇಬ್ಬರನ್ನೂ ವಿವಸ್ತ್ರಗೊಳಿಸಿ ಥಳಿಸಿದ ಜನ
ಅಪ್ರಾಪ್ತ ಬಾಲಕಿ ಮತ್ತು ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಮೂವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆ ಗುರುವಾರ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪಾಟ್ನಾ ಜುಲೈ 22: ಬಿಹಾರದಲ್ಲಿ (Bihar) ಅಪ್ರಾಪ್ತ ಬಾಲಕಿಯೊಂದಿಗೆ ಶಿಕ್ಷಕರೊಬ್ಬರು (Music Teacher) ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಸಿಕ್ಕಿ ಬಿದ್ದಿದ್ದು, ಇವರಿಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿದ ಘಟನೆ ವರದಿ ಆಗಿದೆ. ಈ ಘಟನೆಯ ವಿಡಿಯೊ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದ್ದು, ಮೂವರು ವ್ಯಕ್ತಿಗಳು ಅಪ್ರಾಪ್ತ ಬಾಲಕಿ ಮತ್ತು ಶಿಕ್ಷಕನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವ್ಯಕ್ತಿಯನ್ನು ಸಂಗೀತ ಶಿಕ್ಷಕ ಎಂದು ಗುರುತಿಸಲಾಗಿದ್ದು, ಈತನ ವಯಸ್ಸು 40 ಎಂದು ಪೊಲೀಸರು ಹೇಳಿದ್ದಾರೆ.
ಸಂತ್ರಸ್ತೆ ನೀಡಿದ ಹೇಳಿಕೆ ಆಧರಿಸಿ ಸಂಗೀತ ಶಿಕ್ಷಕನನ್ನು ಬಂಧಿಸಿದ್ದೇವೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 67 ಬಿ ಮತ್ತು ಐಪಿಸಿಯ ಸೆಕ್ಷನ್ 376 ರ (ಲೈಂಗಿಕ ಅಪರಾಧ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಯೋಗೇಂದ್ರ ಕುಮಾರ್ ಹೇಳಿದ್ದಾರೆ.
ಅಪ್ರಾಪ್ತ ಬಾಲಕಿ ಮತ್ತು ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಮೂವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆ ಗುರುವಾರ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪೊಲೀಸರು ವಿಡಿಯೊವನ್ನು ಪರಿಶೀಲಿಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳ ಬಟ್ಟೆಗಳನ್ನು ಮತ್ತು ಸ್ಥಳದಿಂದ ವಶಪಡಿಸಿಕೊಂಡ ಇತರ ಪುರಾವೆಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕುಮಾರ್ ಹೇಳಿದರು.
ಇದನ್ನೂ ಓದಿ: ಮೊಹಬ್ಬತ್ ಕಿ ದುಕಾನ್ ಪ್ರಾಮಾಣಿಕ ಗ್ರಾಹಕರಿಗಾಗಿ ಅಲ್ಲ: ಗೆಹ್ಲೋಟ್ ಸರ್ಕಾರವನ್ನು ಟೀಕಿಸಿದ ಬಿಜೆಪಿ
ಪ್ರಕರಣದ ತನಿಖೆಗಾಗಿ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಆಕೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು ಎಂದು ಅವರು ಹೇಳಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:44 pm, Sat, 22 July 23