ಚಾಮರಾಜನಗರ: ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ; ಸ್ನೇಹಿತನನ್ನ ಕೊಂದು ಅಪಘಾತದ ಕಥೆ ಕಟ್ಟಿದರು

ಸ್ನೇಹಿತರು ಎಂದರೆ ಒಡಹುಟ್ಟಿದವನಿಗಿಂತ ಒಂದು ಕೈ ಹೆಚ್ಚು ಎಂಬಂತಿದೆ. ಆದರೆ, ಅವರೇ ಮೋಸ ಮಾಡಿದರೆ ಯಾರನ್ನ ನಂಬುವುದು. ಹೌದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ(Gundlupete)ಯಲ್ಲಿ ಕೇವಲ 2 ಸಾವಿರ ಸಾಲದ ವಿಚಾರಕ್ಕೆ ಗೆಳೆಯನನ್ನೇ ಹೊಡೆದು ಕೊಂದು ಅಪಘಾತದ ಕಥೆ ಕಟ್ಟಿದ ಘಟನೆ ನಡೆದಿದೆ.

ಚಾಮರಾಜನಗರ: ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ; ಸ್ನೇಹಿತನನ್ನ ಕೊಂದು ಅಪಘಾತದ ಕಥೆ ಕಟ್ಟಿದರು
ಮೃತ ವ್ಯಕ್ತಿ ಮಾದಪ್ಪ, ಕುಟುಂಬಸ್ಥರು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 07, 2024 | 3:38 PM

ಚಾಮರಾಜನಗರ, ಜೂ.07: ಕೇವಲ 2 ಸಾವಿರ ಸಾಲದ ವಿಚಾರಕ್ಕೆ ಗೆಳೆಯನನ್ನೇ ಹೊಡೆದು ಕೊಂದು ಅಪಘಾತದ ಕಥೆ ಕಟ್ಟಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ(Gundlupete)ಯಲ್ಲಿ ತಡ ರಾತ್ರಿ ನಡೆದಿದೆ. ಮಾದಪ್ಪ ಎಂಬಾತನಿಗೆ ಆರೋಪಿಗಳಾದ ರಮೇಶ್ ಹಾಗೂ ಮಲ್ಲ ಎಂಬುವವರು ಕಪಾಳಕ್ಕೆ ಹೊಡೆದು ಕೊಂದಿದ್ದಾರೆ. ಮೃತ ಮಾದಪ್ಪ ಗುಂಡ್ಲುಪೇಟೆಯಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ. ಕಳೆದೊಂದು ವಾರದ ಹಿಂದೆ ಮಲ್ಲ ಎಂಬುವವನ ಬಳಿ 2 ಸಾವಿರ ಸಾಲ ಪಡೆದಿದ್ದ. ನಿನ್ನೆ(ಜೂ.06) ರಾತ್ರಿ ಮನೆಯಲ್ಲಿದ್ದ ಮಾದಪ್ಪನನ್ನ ಕುಡಿಯಲು ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾರೆ.

ಮದ್ಯದ ಅಮಲಿನಲ್ಲಿ ಜಗಳ; ಕೊಲೆ ಮಾಡಿ ಕಥೆ ಕಟ್ಟಿದ ಗೆಳೆಯರು

ಇನ್ನು ಮೊದಲೆ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದ ಇವರ ನಡುವೆ ರಮೇಶ ಹಾಗೂ ಮಲ್ಲ ಎರಡು ಸಾವಿರ ಹಣದ ವಿಚಾರ ಪ್ರಸ್ಥಾಪ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಗಲಾಟೆಯಾಗಿದ್ದು, ಕೋಪದಲ್ಲಿ ಮಾದಪ್ಪನ ಕೆನ್ನೆಗೆ ರಮೇಶ್​ ಜೋರಾಗಿ ಹೊಡೆದಿದ್ದಾನೆ. ಈ ವೇಳೆ ಒಂದೇ ಏಟಿಗೆ ಮಾದಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಆರೋಪಿಗಳಿಬ್ಬರೂ ಅಪಘಾತದ ಕಥೆ ಕಟ್ಟಿದ್ದಾರೆ.

ಇದನ್ನೂ ಓದಿ:ಊಟ ಮಾಡಿ ಮಲಗಿದ್ದ ವ್ಯಕ್ತಿಯ ಭೀಕರ ಕೊಲೆ ಪ್ರಕರಣ; ಒಡೆದ ಬಳೆ ಚೂರಿನಿಂದ ಆರೋಪಿ ಬಂಧನ

ಯಾವಾಗ ಮೃತದೇಹವನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆವಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಚಾಮರಾಜನಗರದ ಚಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಣದ ವಿಚಾರಕ್ಕೆ ಜೊತೆಗಿದ್ದ ಗೆಳೆಯರೇ ಕೊಲೆ ಮಾಡಿರುವುದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ