ಪತಿಯ ಕಾಟಕ್ಕೆ ಬೇಸತ್ತ ಸತಿ; ಇಬ್ಬರು ಮಕ್ಕಳಿಗೆ ವಿಷವಿಕ್ಕಿ ತಾನೂ ವಿಷ ಸೇವಿಸಿದ ತಾಯಿ! ಓರ್ವ ಮಗು ಸಾವು

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಇಲ್ಲೊಂದು ದಂಪತಿ ಮಾಡಿಕೊಂಡ ಕಿರಿಕ್, ಈಗ ತನ್ನ ಮಗುವನ್ನೆ ಬಲಿಕೊಡುವಂತಾಗಿದೆ. ಗಂಡ ಡೈಲಿ ಕುಡಿದುಕೊಂಡು ಬಂದು ಕಿರಿಕ್ ಮಾಡ್ತಾನೆ ಅನ್ನೋ ಒಂದೇ ಒಂದು ಕಾರಣಕ್ಕೆ ಪತ್ನಿ ತಾನು ವಿಷ ಸೇವಿಸಿ ತನ್ನ ಇಬ್ಬರು ಮಕ್ಕಳಿಗೆ ವಿಷ ಪ್ರಾಷಣ ಮಾಡಿಸಿದ್ದಾಳೆ.

ಪತಿಯ ಕಾಟಕ್ಕೆ ಬೇಸತ್ತ ಸತಿ; ಇಬ್ಬರು ಮಕ್ಕಳಿಗೆ ವಿಷವಿಕ್ಕಿ ತಾನೂ ವಿಷ ಸೇವಿಸಿದ ತಾಯಿ! ಓರ್ವ ಮಗು ಸಾವು
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಮೃತ ಮಗಳು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 13, 2023 | 2:37 PM

ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲ(Kollegal) ತಾಲೂಕಿನ ಮದುವನಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಶೀಲ ತನ್ನ ಇಬ್ಬರು ಮಕ್ಕಳಾದ ಯಶವಂತ್ ಹಾಗೂ ಸಿಂದುಗೆ ವಿಷ ಉಣಿಸಿ ಕೊನೆಗೆ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶೀಲ ಹಾಗೂ ಮಾದೇಶನಿಗೆ ಕಳೆದ 11 ವರ್ಷದ ಹಿಂದೆ ಗುರು ಹಿರಿಯರ ಸಮ್ಮುಖದಲ್ಲಿ ಮದುವೆ ಮಾಡಿ ಕೊಡಲಾಗಿತ್ತು. ಮಾದೇಶ ಕೂಲಿ ನಾಲಿ ಮಾಡಿಕೊಂಡು ಸಂಸಾರದ ನೌಕೆಯನ್ನ ಸಾಗಿಸುತ್ತಿದ್ದ. ಇವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಸಿಂದು ಹಾಗೂ ಯಶವಂತ್ ಎಂಬ ಎರಡು ಮಕ್ಕಳು ಸಹ ಆಗಿದ್ದವು. ಆದ್ರೆ, ಅದೇನಾಯ್ತೊ ಎನೋ ಬರ ಬರುತ್ತ ಮಾದೇಶ್​ ಮದ್ಯದ ದಾಸನಾಗಿಬಿಟ್ಟ.

ದಿನ ನಿತ್ಯ ಕುಡಿದುಕೊಂಡು ಬಂದು ಹೆಂಡತಿ ಜೊತೆ ಕಿರಿಕ್ ಮಾಡುತ್ತಿದ್ದ. ಸಾಲದು ಎಂದು ಕಳೆದೊಂದು ತಿಂಗಳ ಹಿಂದೆ ಎಣ್ಣೆ ಏಟಲ್ಲಿ ನಡೆದುಕೊಂಡು ಬರುವಾಗ ಆಯ ತಪ್ಪಿ ಬಿದ್ದು, ಕಾಲು ಮುರಿದು ಕೊಂಡಿದ್ದ. ಪತ್ನಿ ಶೀಲ ಕೂಲಿ ಮಾಡ್ಕೊಂಡು ಬಂದು ಜೀವನ ಸಾಗಿಸುತ್ತಿದ್ದಳು. ಆದ್ರೆ, ಆಕೆ ತಂದ ಕೂಲಿ ಹಣವನ್ನ ಸಹ ಮಾದೇಶ ಕಿತ್ತುಕೊಂಡು ಮದ್ಯಪಾನ ಮಾಡುತ್ತಿದ್ದ. ಇದರಿಂದ ಬೇಸತ್ತ ಶೀಲ ನಿನ್ನೆ(ಜು.12) ಬೆಳಗ್ಗೆ ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾನು ವಿಷ ಕುಡಿದಿದ್ದಾಳೆ.

ಇದನ್ನೂ ಓದಿ:Chikkaballapur News: ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿ, ಕನಸು ನನಸಾಗದೇ ಆತ್ಮಹತ್ಯೆಗೆ ಶರಣು

ಈ ವಿಚಾರ ತಿಳಿದ ಅಕ್ಕ ಪಕ್ಕದ ಮನೆಯವರು ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಯ್ತಾದರೂ, 6 ವರ್ಷದ ಸಿಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ರೆ, ಇತ್ತ ಶೀಲ ಹಾಗೂ ಯಶವಂತ್ ಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶೀಲ ಹಾಗೂ ಯಶವಂತ್​ರನ್ನ ಮೈಸೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಈ ಕುರಿತು ಕೊಳ್ಳೆಗಾಲ ಗ್ರಾಮಾಂತರ ಠಾಣಾ ಪೊಲೀಸರು ಐಪಿಸಿ 302 ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಇತ್ತ ತಲೆ ಮರೆಸಿಕೊಂಡಿರುವ ಪತಿ ಮಾದೇಶನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್