ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ದಾಳಿ, ಮಗನ ಸ್ನೇಹಿತನ ಹತ್ಯೆ
ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ, ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಲಕ್ನೋದ ಠಾಕುರ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಗಾರಿಯಾ ಗ್ರಾಮದಲ್ಲಿರುವ ಕೇಂದ್ರ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರ ಹೊಸ ನಿವಾಸದಲ್ಲಿ ವಿನಯ್ ಶ್ರೀವಾಸ್ತವ್ ಅವರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಪರಿಶೀಲನೆ ನಡೆಯುತ್ತಿದೆ.
ಕೇಂದ್ರ ಸಚಿವ ಕೌಶಲ್ ಕಿಶೋರ್(Kaushal Kishore) ಮನೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ, ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಲಕ್ನೋದ ಠಾಕುರ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಗಾರಿಯಾ ಗ್ರಾಮದಲ್ಲಿರುವ ಕೇಂದ್ರ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರ ಹೊಸ ನಿವಾಸದಲ್ಲಿ ವಿನಯ್ ಶ್ರೀವಾಸ್ತವ್ ಅವರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಪರಿಶೀಲನೆ ನಡೆಯುತ್ತಿದೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿನಯ್ ಶ್ರೀವಾಸ್ತವ್ ಅವರ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಡಿಸಿಪಿ ರಾಹುಲ್ ರಾಜ್, ಎಡಿಸಿಪಿ ಚಿರಂಜೀವ್ ನಾಥ್ ಸಿನ್ಹಾ ಸೇರಿದಂತೆ ಭಾರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಮತ್ತಷ್ಟು ಓದಿ: ಗುಂಡಿನ ದಾಳಿ ನಡೆಸಿ ರಾಯಚೂರಿನ ವೈದ್ಯನ ಹತ್ಯೆಗೆ ಯತ್ನ: ಫೈರಿಂಗ್ ಮಾಡಿ ಎಸ್ಕೇಪ್ ಆದ ದುಷ್ಕರ್ಮಿಗಳು
ಬೇಗೇರಿಯ ನಿವಾಸಿ ವಿನಯ್ ಶ್ರೀವಾಸ್ತವ್ ಬಿಜೆಪಿ ಕಾರ್ಯಕರ್ತ, ಕೇಂದ್ರ ಸಚಿವರ ಪುತ್ರ ವಿಕಾಸ್ ಕಿಶೋರ್ ಜತೆ ವಾಸವಿದ್ದರು. ಶುಕ್ರವಾರ ಬೆಳಗಿನ ಜಾವ 4 ಗಂಟೆಗೆ ವಿನಯ್ ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮೃತದೇಹ ಹಾಸಿಗೆ ಬಳಿ ನೆಲದ ಮೇಲೆ ಬಿದ್ದಿತ್ತು. ಈ ಸಂದರ್ಭದಲ್ಲಿ ಅಜಯ್ ರಾವತ್, ಅಂಕಿತ್ ಶರ್ಮಾ, ಶಮೀಮ್ ಬಾಬಾ, ಬಂಟಿ ಮತ್ತು ಇನ್ನಿಬ್ಬರು ಅಪರಿಚತರು ಸ್ಥಳದಲ್ಲಿದ್ದರು.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:38 am, Fri, 1 September 23