AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಒಂದೇ ಕುಟುಂಬದ ಐವರ ಕೊಲೆ! ರಾತ್ರಿ ಮಲಗಿದ್ದಾಗ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಪತಿ ಗಂಗಾರಾಮ್ 10 ದಿನದ ಹಿಂದೆ ವ್ಯಾಪಾರಕ್ಕೆ ಹೋಗಿದ್ದರು. ಗಂಗಾರಾಮ್ ಪ್ಲಾಸ್ಟಿಕ್ ಹೂವು ಸೇರಿ ಹಲವು ವಸ್ತುಗಳ ಮಾರಾಟ ಮಾಡುತ್ತಿದ್ದರು. ಒಮ್ಮೆ ವ್ಯಾಪಾರಕ್ಕೆ ಹೋದರೆ 15 ದಿನ, 1 ತಿಂಗಳು ಬಿಟ್ಟು ಬರುತ್ತಿದ್ದರು.

ಮಂಡ್ಯದಲ್ಲಿ ಒಂದೇ ಕುಟುಂಬದ ಐವರ ಕೊಲೆ! ರಾತ್ರಿ ಮಲಗಿದ್ದಾಗ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ಒಂದೇ ಕುಟುಂಬದ ಐವರು ಕೊಲೆಯಾಗಿದ್ದಾರೆ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ
TV9 Web
| Edited By: sandhya thejappa|

Updated on:Feb 06, 2022 | 11:49 AM

Share

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ (Family) ಐವರ ಕೊಲೆಯಾಗಿದೆ (Murder). ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು, ಮಹಿಳೆಯನ್ನು ಹತ್ಯೆಗೈದಿದ್ದಾರೆ. ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ(8) ಕೊಲೆಯಾದವರು. ಸ್ಥಳಕ್ಕೆ ಕೆಆರ್‌ಎಸ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಭೀಕರ ಕೃತ್ಯಕ್ಕೆ ಕೆಆರ್‌ಎಸ್ ಗ್ರಾಮ ಬೆಚ್ಚಿಬಿದ್ದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಲಕ್ಷ್ಮೀ ಪತಿ ಗಂಗಾರಾಮ್ 10 ದಿನದ ಹಿಂದೆ ವ್ಯಾಪಾರಕ್ಕೆ ಹೋಗಿದ್ದರು. ಗಂಗಾರಾಮ್ ಪ್ಲಾಸ್ಟಿಕ್ ಹೂವು ಸೇರಿ ಹಲವು ವಸ್ತುಗಳ ಮಾರಾಟ ಮಾಡುತ್ತಿದ್ದರು. ಒಮ್ಮೆ ವ್ಯಾಪಾರಕ್ಕೆ ಹೋದರೆ 15 ದಿನ, 1 ತಿಂಗಳು ಬಿಟ್ಟು ಬರುತ್ತಿದ್ದರು. ಗಂಗಾರಾಮ್ ಅಣ್ಣ ಗಣೇಶ್ ಪತ್ನಿ ಚಂಪಾಡಿ ಸಹಾ ವ್ಯಾಪಾರಕ್ಕೆ ತೆರಳಿದ್ದರು. ಇವರೆಲ್ಲಾ ಒಟ್ಟಿಗೆ ವಾಸವಾಗಿದ್ದರು. ಮಧ್ಯರಾತ್ರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಈ ವಿಚಾರ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಮಂಡ್ಯ ಎಸ್​ಪಿಎನ್ ಯತೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್‌ಪಿ ಸಂದೇಶ್ ಕುಮಾರ್ ಸೇರಿ ಹಲವು ಹಿರಿಯ ಅಧಿಕಾರಿಗಳು ಇದ್ದರು. ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ

Raj Bawa: ಬ್ರಿಟಿಷರನ್ನು ಅಟ್ಟಾಡಿಸಿದ ರಾಜ: ಇದುವರೆಗೆ ಯಾವುದೇ ಭಾರತೀಯ ಪ್ಲೇಯರ್ ಮಾಡಿಲ್ಲ ಈ ದಾಖಲೆ

ಸಿ.ಎಂ ಇಬ್ರಾಹಿಂ ಸ್ವಾಗತಿಸಿದ್ದ ತನ್ವೀರ್ ಸೇಠ್ ಆಪ್ತ ಅಬ್ದುಲ್ ಖಾದರ್ ಶಾಹೀದ್ ಕಾಂಗ್ರೆಸ್‌ನಿಂದ ಉಚ್ಚಾಟನೆ

Published On - 11:47 am, Sun, 6 February 22

Follow Us
Web contact
Web contact

TV9 Kannada

Read More