ಮುಂಬೈ ರಸ್ತೆಯಲ್ಲಿ ಸೂಟ್​ಕೇಸ್​ನಲ್ಲಿ ಮಹಿಳೆಯ ಮೃತದೇಹ ಪತ್ತೆ

ಮುಂಬೈನ ಕುರ್ಲಾದಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ ಪೊಲೀಸರ ಪ್ರಕಾರ, ಭಾನುವಾರ ಮಧ್ಯಾಹ್ನ 12.30 ರ ಸುಮಾರಿಗೆ ರಸ್ತೆಯಲ್ಲಿ ಸೂಟ್​ಕೇಸ್​​ ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು, ಅವರು ಬಂದು ಸೂಟ್​ಕೇಸ್​ ಅನ್ನು ತೆರೆದಾಗ ಶವ ಪತ್ತೆಯಾಗಿದೆ.

ಪೊಲೀಸ್​
Follow us
|

Updated on: Nov 20, 2023 | 10:06 AM

ಮುಂಬೈನ ಕುರ್ಲಾದಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ ಪೊಲೀಸರ ಪ್ರಕಾರ, ಭಾನುವಾರ ಮಧ್ಯಾಹ್ನ 12.30 ರ ಸುಮಾರಿಗೆ ರಸ್ತೆಯಲ್ಲಿ ಸೂಟ್​ಕೇಸ್​​ ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು, ಅವರು ಬಂದು ಸೂಟ್​ಕೇಸ್​ ಅನ್ನು ತೆರೆದಾಗ ಶವ ಪತ್ತೆಯಾಗಿದೆ.

ಮೆಟ್ರೊ ಯೋಜನೆಯ ಕಾಮಗಾರಿ ನಡೆಯುತ್ತಿರುವ ಶಾಂತಿನಗರದ ಸಿಎಸ್‌ಟಿ ರಸ್ತೆಯಲ್ಲಿ ಸೂಟ್‌ಕೇಸ್‌ ಬಿದ್ದಿರುವ ಬಗ್ಗೆ ಮಧ್ಯಾಹ್ನ 12.30ರ ಸುಮಾರಿಗೆ ಪೊಲೀಸರಿಗೆ ನೀಡಲಾಗಿತ್ತು. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಾಗರಿಕ ಆಸ್ಪತ್ರೆಗೆ ಕಳುಹಿಸಲಾಗಿದೆ, ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೀಪಾವಳಿಗೆ ಗಂಡ ತನ್ನ ತವರು ಮನೆಗೆ ಬರಲಿಲ್ಲ ಎಂದು ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ!

ಮಹಿಳೆಯನ್ನು ಇನ್ನೂ ಗುರುತಿಸಲಾಗಿಲ್ಲ, ಆದರೆ ಆಕೆಯ ದೇಹವನ್ನು ನೋಡಿದಾಗ, ಆಕೆಯ ವಯಸ್ಸು 25-35 ವರ್ಷಗಳ ನಡುವೆ ಇರಬಹುದು ಎಂದು ಅಂದಾಜಿಸಲಾಗಿದೆ, ಮಹಿಳೆ ಟಿ-ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸಿದ್ದರು ಎಂದು ಅವರು ಹೇಳಿದರು.

ಅಲ್ಲದೆ, ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆಕೆಯನ್ನು ಕೊಂದವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ

ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು

ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​

ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ

ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ

ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್

ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ

ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು

ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?