AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿವಾದ; ತಂಗಿಯನ್ನು ಬರ್ಬರವಾಗಿ ಕೊಂದು ಠಾಣೆಗೆ ಬಂದು ಶರಣಾದ ಅಣ್ಣ

ಪತ್ಯೇಕ ಘಟನೆ: ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ನಗರದಲ್ಲಿ ಆಸ್ತಿ ವಿವಾದ ಹಿನ್ನೆಲೆ ಅಣ್ಣನೇ ತಂಗಿಯನ್ನು ಚಾಕುವಿನಿಂದ ಇರಿದು ಕೊಂದು ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ. ಇತ್ತ ಹೊಸಕೋಟೆ ತಾಲೂಕಿನ ದಬ್ಬಕುಂಟೆ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಕೊಲೆಯಲ್ಲಿ ಅಂತ್ಯವಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಆಸ್ತಿ ವಿವಾದ; ತಂಗಿಯನ್ನು ಬರ್ಬರವಾಗಿ ಕೊಂದು ಠಾಣೆಗೆ ಬಂದು ಶರಣಾದ ಅಣ್ಣ
ಮುಂಡರಗಿಯಲ್ಲಿ ತಂಗಿ ಕೊಂದು ಠಾಣೆಗೆ ಬಂದು ಶರಣಾದ ಅಣ್ಣ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Sep 24, 2024 | 5:42 PM

Share

ಗದಗ, ಸೆ.24:  ಆಸ್ತಿ ವಿವಾದ ಹಿನ್ನೆಲೆ ಅಣ್ಣನೇ ತಂಗಿಯನ್ನು ಚಾಕುವಿನಿಂದ ಇರಿದು ಕೊಂದು ಪೊಲೀಸ್​ ಠಾಣೆಗೆ ಬಂದು ಶರಣಾದ ಘಟನೆ ಗದಗ ಜಿಲ್ಲೆಯ ಮುಂಡರಗಿ(Mundaragi)ಪಟ್ಟಣದ ಅನ್ನದಾನೀಶ್ವರ ನಗರದಲ್ಲಿ ನಡೆದಿದೆ. ಖುರ್ಷಿದಾ (35) ಕೊಲೆಯಾದ ಮಹಿಳೆ. ಇಂದು ಮನೆಯಲ್ಲಿ ಆಸ್ತಿ ವಿಷಯದಲ್ಲಿ ಜಗಳ ಶುರುವಾಗಿ, ಜಗಳ ವಿಕೋಪಕ್ಕೆ ತಿರುಗಿ ಆರೋಪಿ ಈಶ್ವರಪ್ಪ ಕ್ಯಾದಿಗೇಹಳ್ಳಿ ಎಂಬಾತ ತಂಗಿ ಖುರ್ಷಿದಾ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಬಂದಿದ್ದಾನೆ. ಸಧ್ಯ ಸ್ಥಳಕ್ಕೆ ಗದಗ ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ ಹಾಗೂ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ವಿವರ?

ಮೃತ ಮಹಿಳೆ 14 ವರ್ಷದ ಹಿಂದೆ ಕಟಿಂಗ್ ಸಲೂನ್ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಬಳಿಕ 2020 ರಲ್ಲಿ‌ ಮೈಬೂಬ್ ಬೆಟಗೇರಿ ಎಂಬಾತನ ಜೊತೆ ಎರಡನೇ ಮದುವೆಯಾಗಿ ಜೀವನ ನಿರ್ವಹಣೆಗಾಗಿ ಅಣ್ಣನ 15 ಎಕರೆ ಜಮೀನಿನಲ್ಲಿ ಪಾಲು ಕೇಳಿದ್ದ ಖುರ್ಷಿದಾ,  ಕೋರ್ಟ್ ಮೆಟ್ಟಿಲೇರಿದ್ದಳು. ಈ ಹಿನ್ನಲೆ ಇಂದು ಮನೆಗೆ ಬಂದು ಕೇಸ್ ವಾಪಸ್ ಪಡೆಯವಂತೆ ಅಣ್ಣ ಒತ್ತಾಯ ಮಾಡಿದ್ದಾನೆ. ಆದರೆ, ಅಣ್ಣನ ಮಾತು ಕೇಳದೆ ವಾಗ್ವಾದಕ್ಕಿಳಿದಿದ್ದ ತಂಗಿಯನ್ನು ಸಿಕ್ಕ ಸಿಕ್ಕಲ್ಲಿ ಮನಬಂದಂತೆ ಚಾಕು ಇರಿದು ಬಳಿಕ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ತಾನೇ ಮುಂಡರಗಿ ಪೊಲೀಸರಿಗೆ ಶರಣಾಗಿದ್ದಾನೆ.

ಇದನ್ನೂ ಓದಿ:ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ಜಮೀನು ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲೂಕಿನ ದಬ್ಬಕುಂಟೆ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಹೌದು, ಗ್ರಾಮದ ಮಂಜುನಾಥ್ ಎಂಬಾತ ದೊಣ್ಣೆಯಿಂದ ಹೊಡೆದು 50 ವರ್ಷದ ಗೋವಿಂದಪ್ಪ ಎಂಬಾತನನ್ನು ಕೊಲೆ ಮಾಡಿದ್ದಾನೆ. 20 ಗುಂಟೆ ಜಮೀನು ವಿಚಾರವಾಗಿ‌ ಕಳೆದ ಕೆಲ ದಿನಗಳಿಂದ ಕಲಹ ನಡೆಯುತ್ತಿತ್ತು. ಇಂದು‌ ಸಹ ಅದೇ ವಿಚಾರಕ್ಕೆ ಜಗಳ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಈ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಂಜುನಾಥ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Tue, 24 September 24