ದೇವರ ಉತ್ಸವ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೃದ್ಧೆಯ ಬರ್ಬರ ಹತ್ಯೆ
ತುಮಕೂರು ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ(Bukkapatna) ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ದೇವರ ಉತ್ಸವ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೃದ್ಧೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ತುಮಕೂರು, ಆ.11: ದೇವರ ಉತ್ಸವ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೃದ್ಧೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ(Bukkapatna) ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ನಡೆದಿದೆ. ಮದ್ದಮ್ಮ (68) ಮೃತ ವೃದ್ದೆ. ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು, ರಾತ್ರಿ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಇನ್ನು ಹಂತಕರು ವೃದ್ದೆಯನ್ನ ಕೊಲೆ ಮಾಡಿದ ನಂತರ ಆಕೆಯ ಮೈ ಮೇಲೆ ಇದ್ದ ಚಿನ್ನದ ಸರವನ್ನು ಕದ್ದು, ಶವವನ್ನು ನಿರ್ಮಾಣ ಹಂತದ ಕಟ್ಟಡದ ಬಳಿ ಎಸೆದು ಎಸ್ಕೇಪ್ ಆಗಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಶಿರಾ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.
ಇದನ್ನೂ ಓದಿ:ಮರ್ಯಾದಾ ಹತ್ಯೆ; ಹಿಂದೂ ಯುವಕನನ್ನು ಪ್ರೀತಿಸಿದ ಯುವತಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಅಣ್ಣ
ಕರಡಿ ದಾಳಿಯಿಂದ ಗಾಯಗೊಂಡಿದ್ದ ರೈತ ಸಾವು
ಹಾಸನ: ಕರಡಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ, ಚಿಕಿತ್ಸೆ ಫಲಿಸದೆ ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ರೈತ ಮಹಾಲಿಂಗಪ್ಪ(75) ಮೃತ ರೈತ, ಜು.25 ರಂದು ಅರಸೀಕೆರೆ ತಾಲೂಕಿನ ಜನ್ನಾವರದಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ ತೋಟದ ಮನೆ ಬಳಿ ನಿಂತಿದ್ದಾಗ ರೈತನ ಮೇಲೆ ಕರಡಿ ದಾಳಿ ಮಾಡಿತ್ತು. ಈ ವೇಳೆ ವೃದ್ಧನ ತಲೆ ಹಾಗೂ ಮುಖದ ಮೇಲೆ ತೀವ್ರವಾಗಿ ಗಾಯವಾಗಿತ್ತು. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ರೈತ ಮಹಾಲಿಂಗಪ್ಪ ಕೊನೆಯುಸಿರೆಳೆದಿದ್ದಾನೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:54 pm, Sun, 11 August 24