ತುಮಕೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಸ್ನೇಹಿತರಿಂದಲೇ ಕೊಲೆಯಾದ್ನಾ?

ಮೃತ ರೌಡಿಶೀಟರ್ ರಾತ್ರಿ ಸ್ನೇಹಿತರ ಗ್ಯಾಂಗ್ ಜೊತೆ ಕುಡಿದು ಗಲಾಟೆ ಕೂಡ ಮಾಡಿಕೊಂಡಿದ್ದ ​. ಈ ಹಿನ್ನಲೆ ಸ್ನೇಹಿತರೇ ರೌಡಿಶೀಟರ್ ಮಾರುತಿಯನ್ನ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತುಮಕೂರು ಎಸ್​ಪಿ ಅಶೋಕ್, ಎಎಸ್​ಪಿ ಮರಿಯಪ್ಪ ಹಾಗೂ ಡಿವೈಎಸ್​ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತುಮಕೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಸ್ನೇಹಿತರಿಂದಲೇ ಕೊಲೆಯಾದ್ನಾ?
ಪ್ರಾತಿನಿಧಿಕ ಚಿತ್ರ
Updated By: ಕಿರಣ್ ಹನುಮಂತ್​ ಮಾದಾರ್

Updated on: Oct 22, 2023 | 12:06 PM

ತುಮಕೂರು, ಅ.22: ನಗರದ ಬಂಡಿಮನೆ ಚೌಟ್ರಿ ಬಳಿ ಕುಖ್ಯಾತ ರೌಡಿಶೀಟರ್​ನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಮಾರುತಿ ಅಲಿಯಾಸ್ ಪೊಲಾರ್ಡ್(34) ಮೃತ ರ್ದುದೈವಿ. ಕೊಡಿಗೇನಹಳ್ಳಿ (Kodigenahalli) ಠಾಣಾ ವ್ಯಾಪ್ತಿಯ ರೌಡಿಶೀಟರ್(Rowdy Sheeter) ಆಗಿದ್ದ ಮಾರುತಿ, ಹಟ್ಟಿ ಮಂಜ ಕೊಲೆ ಪ್ರಕರಣ ಸೇರಿದಂತೆ ಹಲವು ಕೇಸ್​ಗಳಲ್ಲಿ ಭಾಗಿಯಾಗಿದ್ದ. ನಿನ್ನೆ(ಅ.21) ರಾತ್ರಿ ಸ್ನೇಹಿತರ ಗ್ಯಾಂಗ್ ಜೊತೆ ಕುಡಿದು ಗಲಾಟೆ ಕೂಡ ಮಾಡಿಕೊಂಡಿದ್ದ. ಈ ಹಿನ್ನಲೆ ಸ್ನೇಹಿತರೇ ರೌಡಿಶೀಟರ್ ಮಾರುತಿಯನ್ನ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತುಮಕೂರು ಎಸ್​ಪಿ ಅಶೋಕ್, ಎಎಸ್​ಪಿ ಮರಿಯಪ್ಪ ಹಾಗೂ ಡಿವೈಎಸ್​ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳೆ ಹಾನಿ, ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ

ಕಲಬುರಗಿ: ಬೆಳೆ ಹಾನಿ ಹಾಗೂ ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮದಲ್ಲಿ ನಡೆದಿದೆ. ಹಣಮಂತ ಹೌಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡ ರೈತ. ಇನ್ನು ಹಣಮಂತ ಹೌಶೆಟ್ಟಿ ತೀವ್ರ ಮನನೊಂದು ವಿದ್ಯುತ್ ಕಂಬ ಏರಿ ಕರೆಂಟ್ ಶಾಕ್ ಹೊಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಇದೀಗ ಆತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಂಡ್ಯದಲ್ಲಿ ಡಿಸಿ, ಎಸ್​ಪಿ ಮುಂದೆಯೇ ರೌಡಿಶೀಟರ್​ಗೆ ಸನ್ಮಾನ ಮಾಡಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ

ಪೆಟ್ರೋಲ್ ಬಂಕ್‌ಗೆ ನುಗ್ಗಿ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ

ಹಾಸನ: ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್‌ಗೆ ನುಗ್ಗಿ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಆರೋಪ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಕೇಳಿಬಂದಿದೆ. ಪ್ರಜ್ವಲ್ ಹಲ್ಲೆಗೊಳಗಾದ ಯುವಕ. ರಾತ್ರಿ ಕುಡಿದ ಅಮಲಿನಲ್ಲಿ ಪೆಟ್ರೋಲ್ ಬಂಕ್‌ಗೆ ಬಂದಿದ್ದ ಇಬ್ಬರು ಯುವಕರು, ಪೆಟ್ರೋಲ್ ಹಾಕುವ ವಿಚಾರಕ್ಕೆ ಪ್ರಜ್ವಲ್ ಜೊತೆ ಜಗಳ ಮಾಡಿ, ನಂತರ ಪೆಟ್ರೋಲ್ ಬಂಕ್‌ಗೆ ನುಗ್ಗಿ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಕೂಡಲೇ ಸಾರ್ವಜನಿಕರು ಇಬ್ಬರನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪ್ರಜ್ವಲ್‌ಗೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Sun, 22 October 23