ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ; ಕುಡಿದ ಮತ್ತಲ್ಲಿ ಸ್ನೇಹಿತನನ್ನ ಒದ್ದು ಕೊಂದ
ವಿಜಯನಗರ ಜಿಲ್ಲೆಯ ಹೊಸಪೇಟೆ(Hospete) ನಗರದ ಸಿದ್ದಲಿಂಗಪ್ಪ ಕ್ರಾಸ ಬಳಿ ಕುಡಿದ ಮತ್ತಿನಲ್ಲಿ ಇಬ್ಬರು ಸ್ನೇಹಿತರ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಸ್ಥಳಕ್ಕೆ ಹೊಸಪೇಟೆ ಪಟ್ಟಣ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ವಿಜಯನಗರ, ಸೆ.24: ಕುಡಿದ ಮತ್ತಿನಲ್ಲಿ ಇಬ್ಬರು ಸ್ನೇಹಿತರ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ(Hospete) ನಗರದ ಸಿದ್ದಲಿಂಗಪ್ಪ ಕ್ರಾಸ ಬಳಿ ನಡೆದಿದೆ. ಶಾಂತಕುಮಾರ (25) ಕೊಲೆಯಾದ ಯುವಕ. ಕ್ಷುಲ್ಲಕ ಕಾರಣಕ್ಕೆ ನಶೆಯಲ್ಲಿ ಮಾತಿಗೆ ಮಾತು ಬೆಳೆದು ಇಬ್ಬರು ಸ್ನೇಹಿತರು ನಡು ರಸ್ತೆಯಲ್ಲಿಯೇ ಬಡಿದಾಡಿಕೊಂಡಿದ್ದಾರೆ. ಬಳಿಕ ಆರೋಪಿ ಹುಲಿಗೇಶ ಎಂಬಾತ ಕೈಯಿಂದ ತೆಲೆಗೆ ಜೋರಾಗಿ ಹೊಡೆದ ಪರಿಣಾಮ ಶಾಂತಕುಮಾರ ನೆಲಕ್ಕೆ ಬಿದ್ದಿದ್ದಾನೆ.
ಕಾಲಿಂದ ಒದ್ದು ಸ್ನೇಹಿತನ ಕೊಲೆ
ಅಷ್ಟೇ, ಆತ ನೆಲಕ್ಕೆ ಬೀಳುತ್ತಿದ್ದಂತೆ ಹುಲಿಗೇಶ ಮನ ಬಂದಂತೆ ಕಾಲಿನಿಂದ ಒದ್ದಿದ್ದಾನೆ. ಇನ್ನು ಪ್ರಜ್ಞೆಯಿಲ್ಲದೆ ನೆಲಕ್ಕೆ ಬಿದ್ದಿದ್ದ ಶಾಂತಕುಮಾರನನ್ನು ಸ್ಥಳೀಯರು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಅಲ್ಲಿಂದ ಕೊಪ್ಪಳ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಯುವಕ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಹೊಸಪೇಟೆ ಪಟ್ಟಣ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿ ಹುಲಗೇಶನನ್ನ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಪ್ರತ್ಯೇಕ ಘಟನೆ; ಕಾರವಾರದಲ್ಲಿ ಪುಣೆ ಉದ್ಯಮಿ ಬರ್ಬರ ಕೊಲೆ, ಕಲಬುರಗಿಯಲ್ಲಿ ಪದವಿ ವಿಧ್ಯಾರ್ಥಿಗೆ ಚಾಕು ಇರಿದು ಹತ್ಯೆ
ಪಾದಾಚಾರಿ ಮಹಿಳೆ ಮೇಲೆ ಹರಿದ ಕೆಎಸ್ಆರ್ಟಿಸಿ ಬಸ್
ತುಮಕೂರು: ನಗರದ ದೇವರಾಜ ಅರಸು ಬಸ್ ನಿಲ್ದಾಣದ ಬಳಿ ಕೆಎಸ್ಆರ್ಟಿಸಿ ಬಸ್ ಹರಿದು ಪಾದಚಾರಿ ಮಹಿಳೆಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳು ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಗಮನಿಸದೇ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬಸ್ ಹರಿದ ಪರಿಣಾಮ ಮಹಿಳೆಯ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ. ಈ ಕುರಿತು ತುಮಕೂರು ನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ