ಲಾಕ್​ಡೌನ್ ವೇಳೆ ಕೌಟುಂಬಿಕ ದೌರ್ಜನ್ಯ ಹೆಚ್ಚಾಯ್ತಂತೆ, ಸರ್ಕಾರ ಕೊಟ್ಟ ಲೆಕ್ಕ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶವನ್ನೇ ಲಾಕ್​ಡೌನ್​ನಲ್ಲಿಡಲಾಗಿದೆ. ಇದರಿಂದ ಜನರು ರಸ್ತೆಗಿಳಿಯದೆ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ. ಆದ್ರೆ ಈ ಲಾಕ್​ಡೌನ್ ಅವಧಿಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಒಟ್ಟು 480 ದೂರುಗಳನ್ನು ಸ್ವೀಕರಿಸಲಾಗಿದೆ. ಸಾಂತ್ವನ ಕೇಂದ್ರಗಳಿಗೆ 315 ಕರೆಗಳು ಬಂದಿದ್ದು, ಮಹಿಳಾ ಸಹಾಯವಾಣಿಗೆ 165 ಕರೆಗಳು ಬಂದಿವೆ. 18 ಸಂರಕ್ಷಣಾಧಿಕಾರಿಗಳು ಹಾಗೂ 186 ಪ್ರಭಾರಿಗಳಿದ್ದಾರೆ ಎಂದು ಸರ್ಕಾರ ಮಾಹಿತಿ ಕೊಟ್ಟಿದೆ. ಕೌಟುಂಬಿಕ ದೌರ್ಜನ್ಯ […]

ಲಾಕ್​ಡೌನ್ ವೇಳೆ ಕೌಟುಂಬಿಕ ದೌರ್ಜನ್ಯ ಹೆಚ್ಚಾಯ್ತಂತೆ, ಸರ್ಕಾರ ಕೊಟ್ಟ ಲೆಕ್ಕ ಇಲ್ಲಿದೆ
ಕರ್ನಾಟಕ ಹೈಕೋರ್ಟ್
ಸಾಧು ಶ್ರೀನಾಥ್​

Updated on: Apr 25, 2020 | 2:57 PM

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶವನ್ನೇ ಲಾಕ್​ಡೌನ್​ನಲ್ಲಿಡಲಾಗಿದೆ. ಇದರಿಂದ ಜನರು ರಸ್ತೆಗಿಳಿಯದೆ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ. ಆದ್ರೆ ಈ ಲಾಕ್​ಡೌನ್ ಅವಧಿಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಒಟ್ಟು 480 ದೂರುಗಳನ್ನು ಸ್ವೀಕರಿಸಲಾಗಿದೆ. ಸಾಂತ್ವನ ಕೇಂದ್ರಗಳಿಗೆ 315 ಕರೆಗಳು ಬಂದಿದ್ದು, ಮಹಿಳಾ ಸಹಾಯವಾಣಿಗೆ 165 ಕರೆಗಳು ಬಂದಿವೆ. 18 ಸಂರಕ್ಷಣಾಧಿಕಾರಿಗಳು ಹಾಗೂ 186 ಪ್ರಭಾರಿಗಳಿದ್ದಾರೆ ಎಂದು ಸರ್ಕಾರ ಮಾಹಿತಿ ಕೊಟ್ಟಿದೆ.

ಕೌಟುಂಬಿಕ ದೌರ್ಜನ್ಯ ದೂರುಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸಿದ್ದಾರೆಯೇ? ಈ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತು. ಲಾಕ್​ಡೌನ್ ಅವಧಿಯಲ್ಲಿ ಮಾನಸಿಕ ಕ್ಷೋಭೆ ಹಿನ್ನೆಲೆಯಲ್ಲಿ ನಿಮ್ಹಾನ್ಸ್​ನಿಂದ ಕೆಲ ಕ್ರಮಗಳನ್ನು ಕೈಗೊಂಡಿರುವುದಾಗಿ ಮಾಹಿತಿ‌. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಲು ನಿಮ್ಹಾನ್ಸ್​ನ ಡಾ.ನವೀನ್ ಕುಮಾರ್​ಗೆ ಸೂಚನೆ ನೀಡಿ, ವಿಚಾರಣೆಯನ್ನ ಏ.28ಕ್ಕೆ ಹೈಕೋರ್ಟ್ ಮುಂದೂಡಿತು.

Published On - 2:51 pm, Sat, 25 April 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us